'45' Movie: ಶಿವರಾಜ್ಕುಮಾರ್, ರಾಜ್ ಬಿ. ಶೆಟ್ಟಿ, ಉಪೇಂದ್ರ ನಟಿನೆಯ '45' ಚಿತ್ರತಂಡದಿಂದ ಖಡಕ್ ಸಂದೇಶದ ಪೋಸ್ಟ್
Sandalwood 45 Movie: ಶಿವರಾಜ್ಕುಮಾರ್, ರಾಜ್ ಬಿ. ಶೆಟ್ಟಿ ಹಾಗೂ ಉಪೇಂದ್ರ ನಟಿಸಿರುವ '45' ಸಿನಿಮಾ (ಡಿಸೆಂಬರ್ 25)ರಂದು ಅದ್ಧೂರಿಯಾಗಿ ತೆರೆ ಕಂಡಿತ್ತು. ಇಂದಿಗೆ ಇದು ಐದನೇ ದಿನಕ್ಕೆ ಕಾಲಿಟ್ಟಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಮೂಲಕ ಯಶಸ್ಸಿನ ಹಾದಿ ಹಿಡಿದಿದೆ. ಕಲೆಕ್ಷನ್‌ನಲ್ಲೂ ಧೂಳೆಬ್ಬಿಸುತ್ತಿದೆ. ಈ ನಡುವೆಯೇ ಚಿತ್ರತಂಡ ಸಾಮಾಜಿ ಜಾಲತಾಣದ ಭಾಗವಾದ ಇನ್ಸ್ಟಾಗ್ರಾಂನಲ್ಲಿ ಖಡಕ್ ಸಂದೇಶದ ಪೋಸ್ಟರ್‌ವೊಂದನ್ನು ಹಂಚಿಕೊಂಡಿದೆ. ಹಾಗಾದ್ರೆ ಇದರಲ್ಲಿ ಏನಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಇತ್ತೀಚಿನ ದಿನಗಳಲ್ಲಿ ಸಿನಿಮಾ ಬಗ್ಗೆ ಅಪಪ್ರಚಾರದ ಮಾಡಿ ನೆಗೆಟಿವ್ ಕಾಮೆಂಟ್ ಮಾಡುವವರ ಸಂಖ್ಯೆ ಹೆಚ್ಚಾಗಿಬಿಟ್ಟಿದೆ. ಅಲ್ಲದೆ, ಪೂರ್ತಿ ಸಿನಿಮಾದ ಎಚ್‌ಡಿ ಪ್ರಿಂಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಪೈರಸಿ ಗೀಳು ಹೆಚ್ಚಾಗಿದ್ದು, ಇಂತಹವರ ವಿರುದ್ಧ ಈಗಾಗಲೇ ನಟ ಸುದೀಪ್ ಕಾನೂನು ಕ್ರಮದ ಎಚ್ಚರಿಕೆಯನ್ನೂ ಕೂಡ ನೀಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಶಿವರಾಜ್ಕುಮಾರ್, ರಾಜ್ ಬಿ. ಶೆಟ್ಟಿ ಹಾಗೂ ಉಪೇಂದ್ರ ನಟಿನೆಯ '45' ಚಿತ್ರತಂಡ ಕೂಡ ಖಡಕ್ ಸಂದೇಶದ ಪೋಸ್ಟರ್‌ವೊಂದನ್ನು ಹಂಚಿಕೊಂಡಿದೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್: ಸ್ಯಾಂಡಲ್‌ವುಡ್ ಶಿವರಾಜ್ಕುಮಾರ್, ರಾಜ್ ಬಿ. ಶೆಟ್ಟಿ ಹಾಗೂ ಉಪೇಂದ್ರ ನಟನೆಯ '45' ಚಿತ್ರ ಅರ್ಜುನ್ ಜನ್ಯ ನಿರ್ದೇಶನ ಮಾಡಿರುವ ಮೊದಲ ಸಿನಿವಾವಾಗಿದೆ. ಈ ಚಿತ್ರಕ್ಕೆ ಉತ್ತಮ ವಿಮರ್ಶೆ ಸಿಕ್ಕಿದ್ದು, ಬಾಕ್ಸ್ ಆಫೀಸ್ನಲ್ಲಿ ಉತ್ತಮ ಕಲೆಕ್ಷನ್ ಸಹ ಮಾಡುತ್ತಿದೆ. ಇನಗನೂ ಸಿನಿಮಾ ಬಗ್ಗೆ ಉದ್ದೇಶಪೂರ್ವಕವಾಗಿ ನೆಗೆಟಿವ್ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ '45' ಚಿತ್ರತಂಡ ತಂಡ ಎಚ್ಚರಿಕೆ ನೀಡಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್ ಮಾಡಿಕೊಂಡಿದೆ.
ಖಡಕ್ ಸಂದೇಶದ ಪೋಸ್ಟ್: "45" ಚಿತ್ರತಂಡವು ಬೆಂಗಳೂರು 9ನೇ ಅಪರ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಮಧ್ಯಂತರ ಆದೇಶವನ್ನು ಪಡೆದಿದೆ. ನ್ಯಾಯಾಲಯದ ಮಧ್ಯಂತರ ಆದೇಶದಂತೆ, '45' ಚಿತ್ರದ ಕುರಿತು ಯಾವುದೇ ವ್ಯಕ್ತಿ, ಸಂಸ್ಥೆ, ಚಾನೆಲ್, ಸಾಮಾಜಿಕ ಜಾಲತಾಣದ ಖಾತೆದಾರರು ಅಥವಾ ಸಂಬಂಧಿತ ಪ್ಲಾಟ್‌ಫಾರ್ಮ್‌ಗಳು, ಅವಹೇಳನಕಾರಿ, ಮಾನಹಾನಿಕರ, ಅಪಪ್ರಚಾರಾತ್ಮಕ ವಿಮರ್ಶೆಗಳು ಅಥವಾ ನೆಗೆಟಿವ್ ರೇಟಿಂಗ್‌ಗಳು ಸೇರಿದಂತೆ ಚಿತ್ರಕ್ಕೆ ಹಾನಿಯುಂಟು ಮಾಡುವ ವಿಷಯಗಳನ್ನು ಪ್ರಕಟಿಸುವುದು, ಪ್ರಸಾರ ಮಾಡುವುದು ಅಥವಾ ಹರಡುವುದು ನಿರ್ಬಂಧಿಸಲಾಗಿದೆ" ಎಂದು ಪ್ರಕಟಣೆಯಲ್ಲಿ ಬರೆಯಲಾಗಿದೆ.
ಕಿಡಿಗೇಡಿಗಳ ವಿರುದ್ಧ ಸಮರ: "ಜೊತೆಗೆ ಈಗಾಗಲೇ ಪ್ರಕಟಗೊಂಡಿರುವ ಇಂತಹ ಎಲ್ಲಾ ವಿಷಯಗಳನ್ನು ತೆಗೆದುಹಾಕಿ ನಿಷ್ಕ್ರಿಯಗೊಳಿಸುವಂತೆ ನ್ಯಾಯಾಲಯ ನಿರ್ದೇಶಿಸಿದೆ. ನ್ಯಾಯಾಲಯದ ಆದೇಶ ಇದ್ದರೂ ಸಹ, ಕೆಲವೊಂದು ದುರುದ್ದೇಶಪೂರಿತ ವ್ಯಕ್ತಿಗಳಿಂದ ಚಿತ್ರದ ವಿರುದ್ಧ ಅಪಪ್ರಚಾರದ ಪೋಸ್ಟ್‌ಗಳು ಪ್ರಕಟ ಆಗುತ್ತಿರುವುದು ಚಿತ್ರತಂಡದ ಗಮನಕ್ಕೆ ಬಂದಿದೆ. ಇಂತಹ ಕೃತ್ಯಗಳು ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗಿದ್ದು, ನ್ಯಾಯಾಂಗ ನಿಂದನೆಗೆ ಒಳಪಡುವ ಅಪರಾಧವಾಗಿರುತ್ತದೆ" ಎಂದು ಎಚ್ಚರಿಕೆ ನೀಡಲಾಗಿದೆ.
"ಈ ರೀತಿಯ ಅಪಪ್ರಚಾರದಿಂದ ಚಿತ್ರಕ್ಕೆ ಅಥವಾ ನಿರ್ಮಾಪಕರಿಗೆ ಉಂಟಾಗುವ ಯಾವುದೇ ರೀತಿಯ ಆರ್ಥಿಕ, ವಾಣಿಜ್ಯ ಹಾಗೂ ಗೌರವ ಹಾನಿಗೆ ಸಂಬಂಧಪಟ್ಟ ವ್ಯಕ್ತಿಗಳು ವೈಯಕ್ತಿಕವಾಗಿ ಸಂಪೂರ್ಣ ಹೊಣೆಗಾರರಾಗಿದ್ದು, ಅವರ ವಿರುದ್ಧ ಸಿವಿಲ್ ಹಾಗೂ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ಕಠಿಣ ಕ್ರಮ ಜರುಗಿಸಲು ಅವಕಾಶವಿದೆ. ಅಗತ್ಯವಿದ್ದಲ್ಲಿ ಸಂಬಂಧಪಟ್ಟವರ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧನ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲು ತಜ್ಞರ ಅಭಿಪ್ರಾಯ ಪಡೆಯಲಾಗಿದೆ" ಎಂದು ಪೋಸ್ಟ್ನಲ್ಲಿ ಬರೆಯಲಾಗಿದೆ. ಅಲ್ಲದೆ, ಪೈರಸಿ ಮಾಡದಂತೆಯೂ ಎಚ್ಚರಿಕೆ ನೀಡಲಾಗಿದೆ. ಈಗಾಗಲೇ ಕಿಚ್ಚ ಸುದೀಪ್ ಅವರು ತಮ್ಮ ಮಾರ್ಕ್ ಸಿನಿಮಾ ಬಿಡುಗಡೆಯಾದ ವೇಳೆ ಪೈರಸಿ ಬಗ್ಗೆ ಮಾತನಾಡಿದ್ದು, ಪೈರಸಿ ಮಾಡುವವರ ವಿರುದ್ಧ ಸೂಕ್ತ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದಾರೆ. ಕನ್ನಡ ಸಿನಿಮಾಗಳನ್ನು ಬೆಳೆಸಿ, ಉಳಿಸಿ ಅಂತಲೂ ಮನವಿ ಮಾಡಿದ್ದಾರೆ.












Click it and Unblock the Notifications