Dwarakish Death: ಮರೆಯಾದ 'ಮಂಕುತಿಮ್ಮ'ನಿಗೆ ಚಂದನವನದ ಸಂತಾಪ
ಬೆಂಗಳೂರು, ಏಪ್ರಿಲ್. 16: ಬಂಗಲೆ ಶಾಮ ರಾವ್ ದ್ವಾರಕಾನಾಥ್ ಆಗಿದ್ದ ನಟ, ನಿರ್ಮಾಪಕ, ನಿರ್ದೇಶಕ 'ದ್ವಾರಕೀಶ್' ಕನ್ನಡ ಸಿನಿಮಾ ರಂಗಕ್ಕೆ ತುಂಬಲಾರದ ನೋವನ್ನು ಕೊಟ್ಟುಹೋಗಿದ್ದಾರೆ. ಏಪ್ರಿಲ್ 16ರ ಬೆಳಗ್ಗೆ ಹೃದಯಾಘಾತದಿಂದ ಅಪಾರ ಅಭಿಮಾನಿ ಮತ್ತು ಕುಟುಂಬದವರನ್ನು ಅಗಲಿದ್ದಾರೆ.
ಕರುನಾಡಿನ ರಾಜ ಕುಳ್ಳನ ಅಗಲಿಕೆಗೆ ಇಡೀ ಕರುನಾಡು ಸ್ತಬ್ಧವಾಗಿದೆ. ಕನ್ನಡ ಚಿತ್ರರಂಗದ ಕಲಾವಿದರು ಸೇರಿದಂತೆ ಅನೇಕ ಅಭಿಮಾನಿಗಳು ಕೂಡ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿದ್ದಾರೆ. ನಟ ದರ್ಶನ್ ತೂಗುದೀಪ, ಪೃಥ್ವಿ ಅಂಬರ್, ಸತೀಶ್ ನಿನಾಸಂ, ನಿರ್ದೇಶಕ ಸಿಂಪಲ್ ಸುನಿ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.

19 ಆಗಸ್ಟ್ 1942 ರಲ್ಲಿ ಜನಿಸಿದ ಪ್ರತಿಭಾವಂತ ನಟ ದ್ವಾರಕೀಶ್ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ಹೆಸರು ಗಳಿಸಿದ್ದಾರೆ. ಬಂಗಲೆ ಶಾಮ ರಾವ್ ದ್ವಾರಕಾನಾಥ್ ಆಗಿದ್ದ ಇವರಿಗೆ ಕನ್ನಡ ಚಲನಚಿತ್ರ ನಿರ್ಮಾಪಕ ಸಿ.ವಿ. ಶಿವಶಂಕರ್ ಅವರು ಈ 'ದ್ವಾರಕೀಶ್' ಎಂಬ ಹೆಸರನ್ನು ಇಟ್ಟರು ಎಂಬ ವರದಿಗಳಿವೆ.
ಸಂತಾಪ ಸೂಚಿಸಿದ ನಟ ದರ್ಶನ್ ತೂಗುದೀಪ
"ಕನ್ನಡ ಚಿತ್ರರಂಗದ ಧೀಮಂತ ನಿರ್ಮಾಪಕರಾಗಿ, ನಿರ್ದೇಶಕರಾಗಿ, ಜನಮೆಚ್ಚಿದ ಹಾಸ್ಯನಟ 'ಪ್ರಚಂಡ ಕುಳ್ಳ'ನಾಗಿ ಐದು ದಶಕಗಳು ಸೇವೆಸಲ್ಲಿಸಿದ ನಮ್ಮೆಲ್ಲರ ಪ್ರೀತಿಯ ದ್ವಾರಕೀಶ್ ಸರ್ ರವರು ಇಂದು ಇಹಲೋಕ ತ್ಯಜಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ" ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಟ್ವೀಟ್ ಮಾಡಿದ್ದಾರೆ.
ಕನ್ನಡ ಚಿತ್ರರಂಗದ ಧೀಮಂತ ನಿರ್ಮಾಪಕರಾಗಿ, ನಿರ್ದೇಶಕರಾಗಿ, ಜನಮೆಚ್ಚಿದ ಹಾಸ್ಯನಟ 'ಪ್ರಚಂಡ ಕುಳ್ಳ'ನಾಗಿ ೫ ದಶಕಗಳು ಸೇವೆಸಲ್ಲಿಸಿದ ನಮ್ಮೆಲ್ಲರ ಪ್ರೀತಿಯ ದ್ವಾರಕೀಶ್ ಸರ್ ರವರು ಇಂದು ಇಹಲೋಕ ತ್ಯಜಿಸಿದ್ದಾರೆ 🙏🏾 ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ pic.twitter.com/Wpcrv97Cgw
— Darshan Thoogudeepa (@dasadarshan) April 16, 2024
ನಟ ಸತೀಶ್ ನಿನಾಸಂ ಕೂಡ ದ್ವಾರಕೀಶ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. "ಕನ್ನಡಕ್ಕೆ, ಕನ್ನಡ ಚಿತ್ರರಂಗಕ್ಕೆ ನಿಮ್ಮ ಸೇವೆ ಅಪಾರ, ನಮ್ಮ ಬಾಲ್ಯ ಸಿನಿಬದುಕು ಚೆಂದವಾಗಿರಲು ನಿಮ್ಮ ಸಿನಿಮಾಗಳು ಕಾರಣ.ಕ ನ್ನಡ ಚಿತ್ರರಂಗದ ಶ್ರೀಮಂತಿಕೆಗೆ ನೀವು ಬಹು ಕಾರಣ ಅಂತಿಮ ನಮನಗಳು ಸರ್... ಹೋಗಿ ಬನ್ನಿ ನಿಮ್ಮ ಹೆಜ್ಜೆ ಗುರುತುಗಳು ಸದಾ ಚಿರಾಯು" ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನಿರ್ದೇಶಕ ಸಿಂಪಲ್ ಸುನಿ ಕೂಡ ಹಿರಿಯ ನಿರ್ಮಾಪಕರನ್ನು ನೆನಪಿಸಿಕೊಂಡಿದ್ದಾರೆ. "ಹೆಮ್ಮೆಯ ನಿರ್ಮಾಪಕ .. ನೆಚ್ಚಿನ ನಟ .. ಕರುನಾಡ ಪ್ರಚಂಡ ಕುಳ್ಳ ದ್ವಾರಕೀಶ್ ರವರ ಅಗಲಿಕೆಗೆ ಸಂತಾಪ ಸೂಚಕಗಳು" ಎಂದು ಸಂತಾಪ ಸೂಚಿಸಿದ್ದಾರೆ.
ಕರುನಾಡಿನ ರಾಜಕುಳ್ಳ ಎಂದು ಖ್ಯಾತರಾಗಿದ್ದ ಹಿರಿಯ ನಟ ದ್ವಾರಕೀಶ್ ತಮ್ಮ 81ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಮುನ್ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಇವರು ವರನಟ ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಸೇರಿ ಮೇರುನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications