Darshan Thoogudeepa: ಕೊಲೆ ಆರೋಪಿ ನಟ ದರ್ಶನ್‌ಗೆ ಹಣ ಕೊಟ್ಟಿದ್ಯಾರು?-ವಕೀಲರಿಂದ ಸ್ಫೋಟಕ ಮಾಹಿತಿ

Darshan Thoogudeepa: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ. ಈ ವೇಳೆ ಕೋರ್ಟ್‌ನಲ್ಲಿ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು ದರ್ಶನ್‌ ಮನೆಯಲ್ಲಿ ಪೊಲೀಸರು ವಶಪಡಿಸಿಕೊಂಡ ಹಣದ ಮೂಲ ಯಾವುದು ಎನ್ನುವ ಬಗ್ಗೆ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ವಿವರ ಇಲ್ಲಿದೆ ತಿಳಿಯಿರಿ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ನನ್ನು ಹೊರತರಲು ಪತ್ನಿ ವಿಜಯಲಕ್ಷ್ಮಿ ಹಾಗೂ ಕುಟುಂಬಸ್ಥರು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಇನ್ನು ಅಭಿಮಾನಿಗಳು ಬಾಸ್ ಯಾವಾಗ ಹೊರಗಡೆ ಬರುತ್ತಾರೆ ಎಂದು ಕಾದುಕುಳಿತಿದ್ದಾರೆ. ಇಂದು (ಅಕ್ಟೋಬರ್‌ 05) ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದ್ದು, ಈ ವೇಳೆ ದರ್ಶನ್‌ ಮನೆಯಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದ ಹಣದ ಮೂಲ ಯಾವುದು ಎನ್ನವ ಸ್ಫೋಟಕ ಮಾಹಿತಿಯನ್ನು ವಕೀಲರು ಕೋರ್ಟ್‌ ಮುಂದೆ ಬಿಚ್ಚಿಟ್ಟಿದ್ದಾರೆ.

Secrets of Money Found at Actor Darshan s House Revealed by Senior Advocate

ಶುಕ್ರವಾರ ಹಿರಿಯ ವಕೀಲರಾದ ಸಿ.ವಿ.ನಾಗೇಶ್ ಅವರು ನಟ ದರ್ಶನ್ ಪರ ಸುದೀರ್ಘ ಮಂಡನೆ ಮಾಡಿದ್ದರು. ಆದರೆ ಸಮಯದ ಅಭಾವದಿಂದಾಗಿ ಕೋರ್ಟ್‌ ವಿಚಾರಣೆಯನ್ನು ಅಕ್ಟೋಬರ್ 05ಕ್ಕೆ ಮುಂದೂಡಿಕೆ ಮಾಡಿತ್ತು. ಇನ್ನು ಇಂದು ವಾದ ಮುಂದುವರೆಸಿದ ಸಿ.ವಿ.ನಾಗೇಶ್ ಅವರು, ದರ್ಶನ್ ಮನೆಯಲ್ಲಿ ಪೊಲೀಸರು ವಶಪಡಿಸಿಕೊಂಡ ಲಕ್ಷಾಂತರ ರೂಪಾಯಿ ಹಣದ ಮೂಲದ ಬಗ್ಗೆ ಕೋರ್ಟ್‌ ಮಾಹಿತಿ ನೀಡಿದರು.

ಜೂನ್‌ 18ರಂದು ದರ್ಶನ್‌ ಮನೆಯಲ್ಲಿ 37.5 ಲಕ್ಷ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ನಂತರ ವಿಜಯಲಕ್ಷ್ಮಿಯವರಿಗೆ ದರ್ಶನ್ ಅದೇ ಸಮಯದಲ್ಲಿ ನೀಡಿದ್ದಾರೆ ಎನ್ನಲಾದ ಹಣವನ್ನು ವಿಜಯಲಕ್ಷ್ಮಿ ಅವರೇ ಪೊಲೀಸರ ವಶಕ್ಕೆ ಒಪ್ಪಿಸಿದ್ದರು. ಹಣ ಬರ್ಖಾಸ್ತು ಮಾಡಿರುವ ಬಗ್ಗೆ ಇಂದು ವಾದ ಮಂಡಿಸಿದ ಸಿ.ವಿ.ನಾಗೇಶ್ ಹಣದ ಮೂಲದ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಸಾಕ್ಷಿಗಳಿಗೆ ಕೊಡಲೆಂದು ದರ್ಶನ್ ಈ ಹಣ ಇಟ್ಟಿದ್ದಾರೆ ಎಂಬುದಾಗಿ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದಾರೆ. ಆದರೆ ಮೋಹನ್‌ ರಾಜ್ ಎಂಬುವರು ಈ ಹಣವನ್ನು ಮೇ 2ರಂದು ದರ್ಶನ್‌ಗೆ ನೀಡಿದ್ದರು. ಇವರು ದರ್ಶನ್‌ನಿಂದ ಹಣ ಸಾಲ ಪಡೆದಿದ್ದರು. ಆ ಹಣವನ್ನು ಮೇ 2ರಂದೇ ದರ್ಶನ್‌ಗೆ ನೀಡಬೇಕಿದ್ದ ಸಾಲ ವಾಪಸ್ ಮಾಡಿದ್ದರು. ಆಗ ರೇಣುಕಾಸ್ವಾಮಿ ಯಾರೆಂಬುದು ಜಗತ್ತಿಗೇ ಗೊತ್ತಿರಲೇ ಇಲ್ಲ ಎಂದು ಸಿ.ವಿ. ನಾಗೇಶ್ ವಾದ ಮಂಡಿಸಿದರು.

"ಮೋಹನ್ ರಾಜ್ ಪುತ್ರಿಯ ಡ್ಯಾನ್ಸ್ ಆಲ್ಬಂ ಮಾಡಿಸಬೇಕಿತ್ತು. ದರ್ಶನ್ ಇದಕ್ಕೂ ಮುಂಚೆ ಮಾಲೀಕರಾಗಿದ್ದ ಡಿ ಬೀಟ್ಸ್‌ ಅವರ ಕಡೆಯವರಿಗೆ ಹೇಳಿ ಈ ಡ್ಯಾನ್ಸ್ ಆಲ್ಬಂ ಮಾಡಿಸಿಕೊಟ್ಟಿದ್ದರು. ಇದಕ್ಕಾಗಿ ದರ್ಶನ್‌ರಿಂದ 40,00,000 ರೂಪಾಯಿ ಹಣ ಫೆಬ್ರವರಿಯಲ್ಲಿ ಪಡೆದಿದ್ದೆ. ಅದನ್ನು ಮೇ 2ರಂದು ಹಿಂತಿರುಗಿಸಿದ್ದಾಗಿ ಮೋಹನ್ ರಾಜ್ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ಹೀಗಿದ್ದಾಗ ರೇಣುಕಾ ಸ್ವಾಮಿ ಕೊಲೆ ಆದ ಬಳಿಕ ದರ್ಶನ್ ಹಣ ಸಂಗ್ರಹಿಸಿದ್ದರೆಂದು ಹೇಳುವುದು ಹೇಗೆ," ಎಂದು ಅನುಮಾನ ವ್ಯಕ್ತಪಸಿದರು.

"ರೇಣುಕಾಸ್ವಾಮಿ ಎಂಬಾತ ಒಬ್ಬ ಮುಂದೊಂದು ದಿನ ಬರುತ್ತಾನೆ. ಅವನನ್ನು ಕೊಲ್ಲುವ ಪ್ರಮೇಯ ಬರುತ್ತದೆ. ನನ್ನ ಮೇಲೆ ಚಾರ್ಜ್‌ಶೀಟ್ ಹಾಕುತ್ತಾರೆ. ಅದಕ್ಕಾಗಿ ನಾನು ಸಾಕ್ಷಿಗಳಿಗೆ ಕೊಡಲು ಹಣ ಪಡೆಯಬೇಕೆಂದು ಮೊದಲೇ ಊಹಿಸಲು ಸಾಧ್ಯವೇ?," ಎಂದು ಪ್ರಶ್ನಿಸಿದರು.

"ರೇಣುಕಾಸ್ವಾಮಿ ಎಂಬ ಒಬ್ಬ ವ್ಯಕ್ತಿ ಇದ್ದಾನೆ ಎಂಬುದು ಗೊತ್ತಾಗಿದ್ದೆ ಜೂನ್ 6ರಂದು. ಅಲ್ಲಿಯವರೆಗೆ ಆತನನ್ನು ಗೌತಮ್ ಎಂದೇ ನಂಬಲಾಗಿತ್ತು. ಮಲಗುವಾಗ ಓದಬಹುದಾದ ಅರೇಬಿಯನ್ ನೈಟ್ಸ್ ಕಥೆಯಂತಿದೆ ಪೊಲೀಸರ ತನಿಖಾ ವರದಿ," ಎಂದು ವ್ಯಂಗ್ಯವಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+