ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ; ರಾಜಕೀಯ ಗಣ್ಯರಿಂದ ಸಂತಾಪ

ಬೆಂಗಳೂರು, ಏಪ್ರಿಲ್‌ 16: ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಇಂದು (ಮಂಗಳವಾರ) ನಿಧನ ಹೊಂದಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ದ್ವಾರಕೀಶ್ ಅವರ ನಿಧನದಿಂದ ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಇನ್ನಿಲ್ಲ ಎಂಬ ಸುದ್ದಿ ಸಾಕಷ್ಟು ನೋವುಂಟು ಮಾಡಿದ್ದು, ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕನ್ನಡ ಸಿನಿಮಾರಂಗದ ಹಿರಿಯ ನಟ ದ್ವಾರಕೀಶ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕನ್ನಡ ಸಿನಿಮಾರಂಗದಲ್ಲಿ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ಅವರು ಇವರು 'ದ್ವಾರಕೀಶ್ ಚಿತ್ರ' ಬ್ಯಾನರ್ ಅಡಿಯಲ್ಲಿ 40 ಕ್ಕೂ ಹೆಚ್ಚಿನ ಸಿನಿಮಾಗಳನ್ನು ನಿರ್ಮಿಸಿದ್ದರು. ಅವರ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ಅಪಾರ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ಅವರ ಕುಟುಂಬಸ್ಥರು ಬಂಧುಮಿತ್ರರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

Senior Actor Dwarakish Passed Away Condolences From Dignitaries

ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದು, ಕನ್ನಡದ ಹಿರಿಯ ನಟರಾದ ಶ್ರೀ ದ್ವಾರಕೀಶ್ ಅವರ ಅಗಲಿಕೆ ನನಗೆ ಬಹಳ ನೋವುಂಟು ಮಾಡಿದೆ. ಕಲಾವಿದರಾಗಿ ಅಷ್ಟೇ ಅಲ್ಲದೆ; ನಿರ್ಮಾಪಕರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಅವರು ಸಲ್ಲಿಸಿರುವ ಅನುಪಮ ಸೇವೆ ಆವಿಸ್ಮರಣೀಯ.

ವರನಟ ಡಾ||ರಾಜ್‌ಕುಮಾರ್‌, ಡಾ||ವಿಷ್ಣುವರ್ಧನ್‌, ಶ್ರೀ ಅಂಬರೀಶ್‌ರಂಥ ದಿಗ್ಗಜರ ಜತೆ ನಟಿಸಿದ್ದ ಅವರು, ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಿನಿಮಾ ಅಸ್ತಿಯಾಗಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ 'ಪ್ರಚಂಡ ಕುಳ್ಳ' ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಡಾ. ರಾಜ್‌ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ ಪರದೆ ಹಂಚಿಕೊಳ್ಳುತ್ತಿದ್ದರೂ ಹಾಸ್ಯಭರಿತ ನಟನೆಯ ಮೂಲಕ ನೋಡುಗರ ಮನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು. ದ್ವಾರಕೀಶ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ, ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದರು.

ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಡಿ.ಕೆ ಶಿವಕುಮಾರ್ ಸಂತಾಪ

ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಹಾಗೂ ಹಿರಿಯ ಕಲಾವಿದ ದ್ವಾರಕೀಶ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರಾಗಿ, ನಿರ್ದೇಶಕರಾಗಿ, ಕಲಾವಿದನಾಗಿ ಅಗಾಧವಾದ ಸೇವೆ ಸಲ್ಲಿಸಿರುವ ದ್ವಾರಕೀಶ್ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಕನ್ನಡ ಚಿತ್ರರಂಗದಲ್ಲಿ ಅನೇಕ ಹೊಸ ಮೈಲುಗಲ್ಲುಗಳನ್ನು ಸಾಧಿಸಿ, ಚಿತ್ರರಂಗಕ್ಕೆ ದೊಡ್ಡ ಅಡಿಪಾಯ ಹಾಕಿಕೊಟ್ಟವರಲ್ಲಿ ದ್ವಾರಕೀಶ್ ಕೂಡ ಒಬ್ಬರು.

ಡಾ. ರಾಜಕುಮಾರ್, ಡಾ. ವಿಷ್ಣುವರ್ಧನ್, ಡಾ.ಅಂಬರೀಶ್, ಶಂಕರ್ ನಾಗ್ ಸೇರಿದಂತೆ ಕನ್ನಡ ಚಿತ್ರರಂಗದ ಘಟಾನುಘಟಿ ನಟರ ಜೊತೆ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ. ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿ ಬೆಳೆಸಿದ್ದಾರೆ. ದ್ವಾರಕೀಶ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+