Actor Darshan: ನಟ ದರ್ಶನ್ ಶಸ್ತ್ರಚಿಕಿತ್ಸೆ ಬಗ್ಗೆ ಹಿರಿಯ ಅಧಿಕಾರಿಗಳು ಗಪ್‌ಚುಪ್ ಏಕೆ?
Actor Darshan: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಶಸ್ತ್ರಚಿಕಿತ್ಸೆ ಹಿನ್ನೆಲೆ ಹೊರಗಡೆ ಇದ್ದಾರೆ. ಇನ್ನು ಇತ್ತೀಚೆಗಷ್ಟೇ ಹೈಕೋರ್ಟ್ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ನಟ ದರ್ಶನ್‌ಗೆ ತಾತ್ಕಾಲಿಕ ರಿಲೀಫ್ ನೀಡಿತ್ತು. ಇದೀಗ ನಟ ದರ್ಶನ್ ಬೆನ್ನು ನೋವಿನ ಸರ್ಜರಿ ಬಗ್ಗೆ ಹಿರಿಯ ಅಧಿಕಾರಿಗಳು ಹೇಳಿದ್ದೇನು ಎಂದು ಇಲ್ಲಿ ತಿಳಿಯಿರಿ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ ಬೆನ್ನು ನೋವು ಹಿನ್ನೆಲೆ ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಡಿಸೆಂಬರ್ 11ಕ್ಕೆ ಮಧ್ಯಂತರ ಜಾಮೀನು ಅವಧಿ ಮುಕ್ತಾಯವಾಗಲಿತ್ತು. ಇದರ ನಡುವೆಯೇ ಡಿಸೆಂಬರ್ 11ಕ್ಕೆ ನಟ ದರ್ಶನ್‌ಗೆ ಸರ್ಜರಿ ಇದೆ ಎಂದು ಸಿ.ವಿ.ನಾಗೇಶ್ ವಾದ ಮಂಡನೆ ಮಾಡಿದ್ದರಿಂದ ಹೈಕೋರ್ಟ್ ಮಧ್ಯಂತರ ಜಾಮೀನನ್ನು ವಿಸ್ತರಣೆ ಮಾಡಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಬುಧವಾರ (ಡಿಸೆಂಬರ್ 11) ಬಿಜಿಎಸ್ ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ನಟ ದರ್ಶನ್ ಬೆನ್ನು ನೋವಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಆದರೆ ಈ ಬಗ್ಗೆ ಹಿರಿಯ ಅಧಿಕಾರಿಗಳು, ಯಾವುದೇ ಪ್ರತಿಕ್ರಿಯೆ ಮುಂದಾಗುತ್ತಿಲ್ಲ.
ಕಾನೂನಿನ ಸಮಸ್ಯೆಯಿಂದಾಗಿ ಯಾವುದೇ ವಿಚಾರವನ್ನು ಬಹಿರಂಗ ಮಾಡದಂತೆ ಕುಟುಂಬದವರು ಆಸ್ಪತ್ರೆ ಅಧಿಕಾರಿಗಳು, ಸಿಬ್ಬಂದಿಗೆ ಹೇಳಿರುವುದಾಗಿ ತಿಳಿದುಬಂದಿದೆ. ನಟ ದರ್ಶನ್ ಅವರ ಶಸ್ತ್ರಚಿಕಿತ್ಸೆ ಬಗ್ಗೆ ಎಲ್ಲಿಯೂ ಮಾಹಿತಿ ಲೀಕ್ ಆಗಬಾರದು ಗೌಪ್ಯವಾಗಿಯೇ ಇರಬೇಕು. ಅವರ ಚಿಕಿತ್ಸೆಯಲ್ಲಿ ನೇರವಾಗಿ ತೊಡಗಿಸಿಕೊಂಡಿರುವ ವೈದ್ಯಕೀಯ ಸಿಬ್ಬಂದಿಗೆ ಮಾತ್ರ ಕಾರ್ಯವಿಧಾನದ ಬಗ್ಗೆ ತಿಳಿದಿರಬೇಕು. ಬೇರೆ ಯಾರಿಗೂ ಈ ಬಗ್ಗೆ ತಿಳಿಯಬಾರದು ಎಂದು ದರ್ಶನ್ ಕುಟುಂಬದಿಂದ ಒತ್ತಾಯ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಡಿಸೆಂಬರ್ 09ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ತನಿಖಾಧಿಕಾರಿಗಳ ಪರ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದ ಮಂಡನೆ ಮಾಡಿದ್ದು, ನಟ ದರ್ಶನ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು ವಾದ ಮಂಡನೆ ಮಾಡಿದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿಗಳಾದ ವಿಶ್ವಜಿತ್ ಶೆಟ್ಟಿ ಅವರು ನಟ ದರ್ಶನ್ ಮಧ್ಯಂತ ಜಾಮೀನನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ ಬೆನ್ನು ನೋವು ಹಿನ್ನೆಲೆ ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಡಿಸೆಂಬರ್ 11ಕ್ಕೆ ಮಧ್ಯಂತರ ಜಾಮೀನು ಅವಧಿ ಮುಕ್ತಾಯವಾಗಲಿತ್ತು. ಇದರ ನಡುವೆಯೇ ಡಿಸೆಂಬರ್ 11ಕ್ಕೆ ನಟ ದರ್ಶನ್‌ಗೆ ಸರ್ಜರಿ ಇದೆ ಎಂದು ಸಿ.ವಿ.ನಾಗೇಶ್ ವಾದ ಮಂಡನೆ ಮಾಡಿದ್ದರಿಂದ ಕೋರ್ಟ್ ಮಧ್ಯಂತರ ಜಾಮೀನನ್ನು ವಿಸ್ತರಣೆ ಮಾಡಿದೆ.
ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಅವರು ವಾದ ಮಂಡಿಸಿದ್ದು, ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಮಾಡುವಂತೆ ಮನವಿ ಮಾಡಿದರು. ಈವರೆಗೂ ದರ್ಶನ್ ಯಾಕೆ ಸರ್ಜರಿ ಮಾಡಿಸಿಲ್ಲವೆಂದ ಪ್ರಶ್ನೆಗೆ ಈ ಮೊದಲು ನಡೆದ ವಿಚಾರಣೆಯಲ್ಲಿ ಸಿ.ವಿ. ನಾಗೇಶ್ ಅವರು ಕಾರಣ ನೀಡಿದ್ದರು. ನಟನಿಗೆ ರಕ್ತದೊತ್ತಡ ವ್ಯತ್ಯಾಸ ಆಗುತ್ತಿರುವುದರಿಂದ ಶಸ್ತ್ರ ಚಿಕಿತ್ಸೆ ಇನ್ನೂ ನಡೆಸಿಲ್ಲ ಎಂದು ಹೇಳಿದ್ದರು.
ಬಳ್ಳಾರಿ ಜೈಲಿನಲ್ಲಿದ್ದಾಗ ದರ್ಶನ್‌ಗೆ ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆ ಅಲ್ಲಿಯೇ ಅವರಿಗೆ ವೈದ್ಯರು ಕೆಲವು ಪರೀಕ್ಷೆಗಳನ್ನ ಮಾಡಿ, ಶಸ್ತ್ರ ಚಿಕಿತ್ಸೆಗೆ ಸಲಹೆ ನೀಡಿದ್ದರು. ಎಲ್ಲಾ ವರದಿಗಳನ್ನು ಆಧರಿಸಿ ದರ್ಶನ್‌ಗೆ ಮಧ್ಯಂತರ ಜಾಮೀನು ನೀಡಲಾಗಿತ್ತು.
ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ ಎನ್ನುವ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ನಟ ದರ್ಶನ್ & ಗ್ಯಾಂಗ್ ಬರ್ಬರವಾಗಿ ಹತ್ಯೆ ಮಾಡಿತ್ತು ಎನ್ನುವುದು ಪೊಲೀಸ್ ಮೂಲಗಳಲ್ಲಿ ಉಲ್ಲೇಖವಾಗಿದೆ.












Click it and Unblock the Notifications