Bigg Boss Kannada: ಬಿಗ್ ಬಾಸ್ನಿಂದ ಹೊರಬಂದ ಶಿಶಿರ್ ಶಾಸ್ತ್ರಿ-ಗೋಲ್ಡ್ ಸುರೇಶ್ ಔಟ್
ಬಿಗ್‌ಬಾಸ್ ಕನ್ನಡ ಸೀಸನ್ 11 ಇದೀಗ 75 ದಿನಗಳನ್ನು ಪೂರೈಸಿದ್ದು, ಫೈನಲಿಸ್ಟ್ ಯಾರಾಗಲಿದ್ದಾರೆಂಬ ಕುತೂಹಲ ಸಹಜವಾಗಿಯೇ ಬಿಗ್ ಬಾಸ್ ಪ್ರಿಯ ವೀಕ್ಷಕರಲ್ಲಿ ಮನೆಮಾಡಿದೆ. ಈ ನಡುವೆ ಏಕಾಏಕಿ ಇಬ್ಬರು ಸ್ಪರ್ಧಿಗಳು ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ.
ದೊಡ್ಮನೆಯಲ್ಲಿ ಪ್ರತಿವಾರವೂ ಕನಿಷ್ಠ ಒಂದೊಂದು ಟ್ವಿಸ್ಟ್ ಇದ್ದೇ ಇರಲಿದೆ. ಕಳೆದ ವಾರ ಎಲಿಮಿನೇಷನ್ ಇರಲಿಲ್ಲ. ಆದರೆ, ಈ ವಾರ ಬಿಗ್‌ಬಾಸ್ ಮನೆಯಿಂದ ಪ್ರಬಲ ಸ್ಪರ್ಧಿಗಳೇ ಮನೆಯಿಂದ ಹೊರಬಂದಿದ್ದಾರೆ ಎನ್ನಲಾಗುತ್ತಿದೆ.

ಬಿಗ್‌ಬಾಸ್ ಮನೆಯಿಂದ ಹೊರಹೋಗಲು ಸ್ಪರ್ಧಿಗಳಾದ ಧನರಾಜ್ ಆಚಾರ್, ಭವ್ಯಾ ಗೌಡ, ಶಿಶಿರ್ ಶಾಸ್ತ್ರೀ, ರಜತ್ ಕಿಶನ್, ಚೈತ್ರಾ ಕುಂದಾಪುರ, ಹನುಮಂತ ಹಾಗೂ ಮೋಕ್ಷಿತಾ ಪೈ ನಾಮಿನೇಟ್ ಆಗಿದ್ದರು. ಈ ಪೈಕಿ ಯಾರು ಎಲಿಮಿನೇಟ್ ಆಗಲಿದ್ದಾರೆಂಬ ಕುತೂಹಲ ಸಹಜವಾಗಿಯೇ ವೀಕ್ಷಕರಲ್ಲಿತ್ತು. 10ನೇ ವಾರದ ಡೇಂಜರ್ ಝೋನ್‌ನಲ್ಲಿ ಸ್ಪರ್ಧಿಗಳಾದ ಐಶ್ವರ್ಯಾ ಸಿಂಧೋಗಿ ಹಾಗೂ ಚೈತ್ರಾ ಕುಂದಾಪುರ ಇದ್ದರು. ಆದರೆ, ಕಳೆದ ವಾರ ಎಲಿಮಿನೇಷನ್ ಕ್ಯಾನ್ಸಲ್ ಆಗಿತ್ತು.
ಈ ವಾರ ಶಿರ್ ಶಾಸ್ತ್ರಿ ಹಾಗೂ ಗೋಲ್ಡ್ ಸುರೇಶ್ ಈ ವಾರ ಹೊರಬಂದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಸಖತ್ ವೈರಲ್ ಆಗುತ್ತಿದೆ. ಇಬ್ಬರ ಪೈಕಿ, ಗೋಲ್ಡ್ ಸುರೇಶ್ ಅವರಿಗೆ ಮನೆಯಿಂದ ಒಂದು ತುರ್ತು ಮೆಸೇಜ್ ಬಂದ ಕಾರಣದಿಂದ ಅವರು ವಿನಂತಿ ಮಾಡಿಕೊಂಡು ಆ ಮನೆಯಿಂದ ಹೊರಬಂದಿದ್ದಾರೆ ಎನ್ನಲಾಗುತ್ತಿದೆ.
ಇಂದು(ಭಾನುವಾರ) ಗೋಲ್ಡ್ ಸುರೇಶ್ ಕುಟುಂಬದಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದೆ. ಹಾಗಾಗಿ ಅವರ ಅವಶ್ಯಕತೆ ಬಿಗ್ ಬಾಸ್ ಮನೆಯಿಂದ ಅವರ ಕುಟುಂಬದವರಿಗೆ ಜಾಸ್ತಿ ಇದೆ. ಹೆಚ್ಚು ತಡ ಮಾಡದೇ ವಸ್ತುಗಳನ್ನು ಪ್ಯಾಕ್ ಮಾಡಿಕೊಂಡು ಕೂಡಲೇ ಬಿಗ್ ಬಾಸ್ ಮನೆಯಿಂದ ಹೊರಗೆ ಬನ್ನಿ ಎಂದು ಬಿಗ್ ಬಾಸ್ ಸೂಚನೆ ನೀಡಲಾಗಿದೆ.
ಗೋಲ್ಡ್ ಸುರೇಶ್ ಹಿನ್ನೆಲೆ ಏನು?
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನವರಾದ ಗೋಲ್ಡ್ ಸುರೇಶ್, ಮೊದಲು ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಬಳಿಕ, ಆ ಕೆಲಸ ಬಿಟ್ಟು ಕ್ರಿಯೇಟಿವ್ ಇಂಟೀರಿಯರ್ ಸಂಸ್ಥೆ ಸ್ಥಾಪಿಸಿ ಅದರಲ್ಲಿ ಭರ್ಜರಿ ಗೆಲುವು ಸಾಧಿಸಿದರು. ಜೀವನದಲ್ಲಿ ದೊಡ್ಡದಾಗಿ ಏನಾದರೂ ಸಾಧಿಸಬೇಕು ಎನ್ನುವ ಛಲದಿಂದ ಹುಟ್ಟಿದ ಊರು ಬಿಟ್ಟು ಓಡಿ ಬಂದ ಗೋಲ್ಡ್ ಸುರೇಶ್ ಅವರು, ಮುಂದೆ ತಮ್ಮದೇ ಸಂಸ್ಥೆ ಸ್ಥಾಪಿಸಿ ಬಹಳಷ್ಟು ಜನರಿಗೆ ಕೆಲಸ ಕೊಟ್ಟಿದ್ದಾರೆ. ಅಲ್ಲದೇ ಗೋಲ್ಡ್ ಸುರೇಶ್ ಅವರಿಗೆ ಇತ್ತೀಚೆಗೆ ಜೀ ನ್ಯೂಸ್ ಕೊಡುವ 'ಯುವರತ್ನ' ಅವಾರ್ಡ್ ಕೂಡ ಪಡೆದಿದ್ದರು.
ಯಾರೆಲ್ಲಾ ನಾಮಿನೇಟ್ ಆಗಿದ್ದರು?
11ನೇ ವಾರ ಬಿಗ್‌ಬಾಸ್ ಮನೆಯಿಂದ ಹೊರಹೋಗಲು ಭವ್ಯಾ ಗೌಡ, ಧನರಾಜ್ ಆಚಾರ್, ಶಿಶಿರ್ ಶಾಸ್ತ್ರೀ, ರಜತ್ ಕಿಶನ್, ಚೈತ್ರಾ ಕುಂದಾಪುರ, ಹನುಮಂತ ಹಾಗೂ ಮೋಕ್ಷಿತಾ ಪೈ ನಾಮಿನೇಟ್ ಆಗಿದ್ದರು. ಶನಿವಾರದ ವಾರದ ಕಥೆ ಕಿಚ್ಚನ ಜೊತೆ ಸಂಚಿಕೆಯಲ್ಲಿ ಹನುಮಂತ ಹಾಗೂ ತ್ರಿವಿಕ್ರಮ್ ಅವರು ಸೇವ್ ಆಗಿದ್ದರು.












Click it and Unblock the Notifications