Shivarajkumar: ಕ್ಯಾನ್ಸರ್ ಗೆದ್ದ ಶಿವಣ್ಣ ಇಂದು ಬೆಂಗಳೂರಿಗೆ ಆಗಮನ: ಸ್ವಾಗತಕ್ಕೆ ಅಭಿಮಾನಿಗಳಿಂದ ಭರ್ಜರಿ ಸಿದ್ದತೆ
ಬೆಂಗಳೂರು, ಜನವರಿ 26: ಅನಾರೋಗ್ಯದಿಂದ ಬಳಲುತ್ತಿದ್ದ ನಟ ಶಿವರಾಜ್ ಕುಮಾರ್ ಅವರಿಗೆ ಅಮೆರಿಕಾದಲ್ಲಿ ನಡೆದ ಸರ್ಜರಿ ಯಶಸ್ವಿಯಾಗಿ ನಡೆದಿದೆ. ಕ್ಯಾನ್ಸರ್ ಹಿನ್ನೆಲೆಯಲ್ಲಿ ನಟ ಶಿವರಾಜ್‌ಕುಮಾರ್ ಅಮೆರಿಕದಲ್ಲಿ ಯಶಸ್ವಿಯಾಗಿ ಕ್ಯಾನ್ಸರ್ ಚಿಕಿತ್ಸೆ ಮುಗಿಸಿಕೊಂಡು ಇಂದು(ಭಾನುವಾರ) ಬೆಂಗಳೂರಿಗೆ ಆಗಮಿಸಲಿದ್ದು, ಶಿವಣ್ಣ ಅವರ ಆಗಮನಕ್ಕೆ ಅಭಿಮಾನಿಗಳು ಭರ್ಜರಿ ತಯಾರಿಯನ್ನ ಮಾಡಿಕೊಂಡಿದ್ದಾರೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಮಿಯಾಮಿಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದ್ದು, . ಶಸ್ತ್ರಚಿಕಿತ್ಸೆಯಲ್ಲಿ ಕ್ಯಾನ್ಸರ್‌ಗ್ರಸ್ತ ಭಾಗವನ್ನು ತೆಗೆದು ಹಾಕಲಾಗಿದೆ. ಶಿವರಾಜ್ ಕುಮಾರ್ ಅವರ ಆರೋಗ್ಯ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಸ್ಥಿರವಾಗಿ ಇದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಅಲ್ಲದೇ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಅವರು ಈಗಾಗಲೇ ಬೆಂಗಳೂರಿಗೆ ಬರುವ ಕುರಿತು ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದರು.

ನಿಮ್ಮ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ಚಿರಋಣಿ. ನಿಮ್ಮನ್ನೆಲ್ಲಾ ನೋಡಲು ನಾನು ಜನವರಿ 26ರಂದು ಗಣರಾಜ್ಯೋತ್ಸವ ದಿನ ಬೆಂಗಳೂರಿಗೆ ಬರುತ್ತಿದ್ದೇನೆ. ನಿಮ್ಮ ಆಶೀರ್ವಾದ ಹೀಗೇ ಇರಲಿ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಹೇಳಿಕೊಂಡಿದ್ರು. 2024 ಡಿಸೇಂಬರ್ 18ರಂದು ಚಿಕಿತ್ಸೆಗಾಗಿ ಬೆಂಗಳೂರಿನಿಂದ ಅಮೆರಿಕಗೆ ತೆರಳಿದ್ದ ನಟ ಶಿವರಾಜ್‌ಕುಮಾರ್ ಅವರಿಗೆ ಚಿಕಿತ್ಸೆ ಯಶಸ್ವಿಯಾಗಿದೆ.
ಚಿಕಿತ್ಸೆಯ ನಂತರವೂ ಕೆಲ ದಿನಗಳ ಕಾಲ ಅಮೆರಿಕಾದಲ್ಲೇ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ಶಿವಣ್ಣ ಅವರು ಒಂದು ತಿಂಗಳ ನಂತರ ಬೆಂಗಳೂರಿಗೆ ಮರಳಿ ಬರುತ್ತಿದ್ದಾರೆ. ಇದೀಗ ಅಮೇರಿಕಾದಿಂದ ಬೆಂಗಳೂರಿಗೆ ಶಿವಣ್ಣ ಆಗಮಿಸುತ್ತಿದ್ದು, ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.
ಗೀತಾ ಶಿವರಾಜ್ ಕುಮಾರ ಅವರ ಸಹೋದರ ಸಚಿವ ಮಧು ಬಂಗಾರಪ್ಪ ಅವರು ನಟ ಶಿವರಾಜ್‌ಕುಮಾರ್ ಅವರ ಆರೋಗ್ಯದ ಕುರಿತು ಮಾಹಿತಿ ಹಂಚಿಕೊಂಡಿದ್ದು, ಶಿವಣ್ಣ ಅವರು ಕ್ಯಾನ್ಸರ್ ಮುಕ್ತವಾಗಿದ್ದಾರೆ. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮುಗಿಸಿದ್ದರಿಂದ ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ. ಶಿವರಾಜ್ ಕುಮಾರ್ ಅವರಿಗೆ ನಡೆದಿರುವುದು ತುಂಬ ದೊಡ್ಡ ಆಪರೇಷನ್. ಹಾಗಾಗಿಯೇ ನಾನು ಅವರ ಜೊತೆ ಅಲ್ಲಿಗೆ ಹೋಗಿದ್ದು. ಯಶಸ್ವಿಯಾಗಿ ಸರ್ಜರಿ ನಡೆದಿದೆ ಎಂದು ಹೇಳಿದ್ದಾರೆ. ಒಟ್ಟು 6 ಸರ್ಜರಿ ಮಾಡಿದ್ದು, 190 ಹೊಲಿಗೆ ಹಾಕಲಾಗಿದೆ ಎಂದು ಕೂಡ ಮಧು ಬಂಗಾರಪ್ಪ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಶಿವರಾಜ್ ಕುಮಾರ್ ಅವರಿಗೆ ಏಕಕಾಲಕ್ಕೆ 6 ಆಪರೇಷನ್ ನಡೆಯಿತು. ಕರುಳಿನ ಒಂದು ಭಾಗವನ್ನು ತೆಗೆದು, ಅದನ್ನೇ ಯೂರಿನ್ ಬ್ಲಾಡರ್ ಆಗಿ ಮಾಡುತ್ತಾರೆ. ಒಳಗಿನಿಂದ 190 ಹೊಲಿಗೆ ಹಾಕಲಾಗಿದೆ. ಐದೂವರೆ ಗಂಟೆ ಸರ್ಜರಿ ಪ್ಲ್ಯಾನ್ ಮಾಡಲಾಗಿತ್ತು. ಐದು ಗಂಟೆ ಒಳಗೆ ಮುಗಿಸಿದರು. ಯಾವುದೇ ತೊಂದರೆ ಆಗಲಿಲ್ಲ. ಶಿವರಾಜ್‌ಕುಮಾರ್ ಅವರಿಗೆ ಬ್ರೇನ್ನಲ್ಲಿ ಒಂದು ಸ್ಟಂಟ್ ಇದೆ. ಅವರಿಗೆ ಒಮ್ಮೆ ಚಿಕ್ಕ ಹಾರ್ಟ್ ಅಟ್ಯಾಕ್ ಕೂಡ ಆಗಿತ್ತು. ಮತ್ತೆ ಅವರಿಗೆ ಯಾಕೆ ಈ ಆರೋಗ್ಯ ಸಮಸ್ಯೆ ಎಂಬ ಬೇಸರ ಎಲ್ಲರಿಗೂ ಇತ್ತು. ಈಗ ಶಿವಣ್ಣ ಚೆನ್ನಾಗಿ ಇದ್ದಾರೆ. ಎಲ್ಲರ ಹಾರೈಕೆಯಿಂದ, ಉತ್ತಮ ವೈದ್ಯರಿಂದ ಎಲ್ಲವೂ ಚೆನ್ನಾಗಿ ಆಗಿದೆ ಎಂದು ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು.












Click it and Unblock the Notifications