Shiva Rajkumar: ಸೈನಿಕನ ದೇಶಪ್ರೇಮಮೇ ಚಿತ್ರದ ಜೀವಾಳ: ಧುರಂಧರ್-2 ಸಿನಿಮಾ, ರಣವೀರ್ ಸಿಂಗ್ ನಟನೆಗೆ ಶಿವಣ್ಣ ಫಿದಾ
ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ಮತ್ತು ಆದಿತ್ಯ ಧರ್ ನಿರ್ದೇಶನದ 'ಧುರಂಧರ್: ದಿ ರಿವೇಂಜ್' ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಇದೀಗ ಸ್ಯಾಂಡಲ್‌ವುಡ್‌ನ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಕೂಡ ಮನಸೋತಿದ್ದಾರೆ. ಸಿನಿಮಾ ವೀಕ್ಷಿಸಿದ ನಂತರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಶಿವಣ್ಣ, ಚಿತ್ರತಂಡದ ಶ್ರಮವನ್ನು ಕೊಂಡಾಡಿದ್ದಾರೆ.
ಶಿವಣ್ಣನ ಪೋಸ್ಟ್‌ನಲ್ಲಿ ಏನಿದೆ?
"ಧುರಂಧರ್: ದಿ ರಿವೇಂಜ್ ಅದ್ಭುತವಾಗಿದೆ. ಚಿತ್ರದ ಪ್ರತಿಯೊಂದು ಕ್ಷಣವನ್ನೂ ಆನಂದಿಸಿದೆ. ರಣವೀರ್ ಸಿಂಗ್ ತಮ್ಮ ನಟನೆಯ ಮೂಲಕ ಮಿಂಚಿದ್ದಾರೆ. ಇನ್ನು ಶಾಶ್ವತ್ ಸಚ್‌ದೇವ್ ಅವರ ಸಂಗೀತ, ವಿಶೇಷವಾಗಿ ಹಳೆಯ ವಿಂಟೇಜ್ ಹಾಡುಗಳನ್ನು ಬಳಸಿಕೊಂಡಿರುವ ರೀತಿ ಮನಸ್ಸಿನ ಮೇಲೆ ಅಚ್ಚೊತ್ತಿದೆ" ಎಂದು ಶಿವಣ್ಣ ಹೊಗಳಿದ್ದಾರೆ. ನಿರ್ದೇಶಕ ಆದಿತ್ಯ ಧರ್ ಅವರ ಮೇಕಿಂಗ್ ಮತ್ತು ಕಥಾ ಹಂದರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಶಿವಣ್ಣ, "ದೇಶಕ್ಕಾಗಿ ಒಬ್ಬ ಸೈನಿಕ ಎಷ್ಟರ ಮಟ್ಟಿಗೆ ಶ್ರಮಿಸುತ್ತಾನೆ ಮತ್ತು ಆತನ ದೇಶಪ್ರೇಮದ ಪಯಣವೇ ಈ ಚಿತ್ರದ ಜೀವಾಳ. ಇಂತಹ ಕಥೆಯನ್ನು ಅಷ್ಟೇ ಪರಿಣಾಮಕಾರಿಯಾಗಿ ತೆರೆಯ ಮೇಲೆ ತಂದಿರುವ ಆದಿತ್ಯ ಧರ್ ಅವರ ಕೌಶಲಕ್ಕೆ ನನ್ನ ಗೌರವಗಳು. ಇಡೀ ತಂಡಕ್ಕೆ ಅಭಿನಂದನೆಗಳು" ಎಂದು ಬರೆದುಕೊಂಡಿದ್ದಾರೆ.

'ಉರಿ: ದಿ ಸರ್ಜಿಕಲ್ ಸ್ಟ್ರೈಕ್' ಖ್ಯಾತಿಯ ಆದಿತ್ಯ ಧರ್ ನಿರ್ದೇಶನದ ಈ ಚಿತ್ರದಲ್ಲಿ ರಣವೀರ್ ಸಿಂಗ್ ಪ್ರಬಲ ಸೈನಿಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದೇಶಪ್ರೇಮ ಮತ್ತು ಸೇಡಿನ ಕಥಾಹಂದರ ಹೊಂದಿರುವ ಈ ಸಿನಿಮಾ ಈಗಾಗಲೇ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಇದೀಗ ಸ್ವತಃ ಶಿವರಾಜ್‌ಕುಮಾರ್ ಅವರೇ ಮೆಚ್ಚುಗೆ ಸೂಚಿಸಿರುವುದು ಚಿತ್ರದ ತೂಕವನ್ನು ಹೆಚ್ಚಿಸಿದೆ. ರಣವೀರ್ ಸಿಂಗ್ ಅವರ ವೃತ್ತಿಜೀವನದ ಅತ್ಯುತ್ತಮ ನಟನೆಗಳಲ್ಲಿ ಈ ಸಿನಿಮಾ ಒಂದು ಎಂದು ಶಿವಣ್ಣ ಅಭಿಪ್ರಾಯಪಟ್ಟಿದ್ದು, ಚಿತ್ರದ ತಾಂತ್ರಿಕ ಮೌಲ್ಯಗಳು ಮತ್ತು ಭಾವನಾತ್ಮಕ ಸನ್ನಿವೇಶಗಳು ಪ್ರೇಕ್ಷಕರ ಮನಸ್ಸಿಗೆ ಹತ್ತಿರವಾಗಲಿವೆ ಎಂದು ಶುಭ ಹಾರೈಸಿದ್ದಾರೆ.
ಬಾಕ್ಸ್ ಆಫೀಸ್‌ನಲ್ಲಿ 900 ಕೋಟಿ ಬಾಚಿದ ಸಿನಿಮಾ
'ಧುರಂಧರ್: ದಿ ರಿವೇಂಜ್' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಬಿಡುಗಡೆಯಾದ ದಿನದಿಂದಲೂ ಭರ್ಜರಿ ಕಲೆಕ್ಷನ್ ಮಾಡುತ್ತಿರುವ ಈ ಸ್ಪೈ ಆಕ್ಷನ್ ಸಿನಿಮಾ, ಇದೀಗ ಜಾಗತಿಕ ಮಟ್ಟದಲ್ಲಿ 900 ಕೋಟಿ ರೂಪಾಯಿಗಳ ಗಡಿಯನ್ನು ದಾಟಿ ಮುನ್ನುಗ್ಗುತ್ತಿದೆ. ವಾರದ ಮಧ್ಯಭಾಗದಲ್ಲೂ ಚಿತ್ರದ ಕ್ರೇಜ್ ಕಡಿಮೆಯಾಗಿಲ್ಲ. ಮಂಗಳವಾರದಂದು ಭಾರತದಾದ್ಯಂತ ಒಟ್ಟು 20,412 ಶೋಗಳಿಂದ ಈ ಸಿನಿಮಾ ಭರ್ಜರಿ 56.55 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಿಶ್ವದಾದ್ಯಂತ ಒಟ್ಟು ಗಳಿಕೆ 937.49 ಕೋಟಿ ರೂಪಾಯಿ ಎಂದು ವರದಿಯಾಗಿದೆ.
Durandhar: The Revenge is absolutely fantastic! Loved every bit of it. @RanveerOfficial is brilliant, and the music by @shashwatology, especially the use of vintage songs leaves a lasting impact. Huge respect to @AdityaDharFilms for his conviction and craft. The lengths a soldier…
— DrShivaRajkumar (@NimmaShivanna) March 25, 2026
ಕೇವಲ ಕೆಲವೇ ದಿನಗಳಲ್ಲಿ 937 ಕೋಟಿ ರೂಪಾಯಿಗಳನ್ನು ಬಾಚಿಕೊಂಡಿರುವ ಈ ಚಿತ್ರ, ಶೀಘ್ರದಲ್ಲೇ 1000 ಕೋಟಿ ರೂಪಾಯಿಗಳ ಕ್ಲಬ್ ಸೇರುವುದು ಬಹುತೇಕ ಖಚಿತವಾಗಿದೆ. ರಣವೀರ್ ಸಿಂಗ್ ಅವರ ವೃತ್ತಿಜೀವನದ ಅತಿದೊಡ್ಡ ಹಿಟ್ ಚಿತ್ರವಾಗಿ 'ಧುರಂಧರ್' ಹೊರಹೊಮ್ಮಿದೆ. ದೇಶಪ್ರೇಮದ ಕಥೆ ಮತ್ತು ಅದ್ಭುತ ಆಕ್ಷನ್ ಸನ್ನಿವೇಶಗಳು ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಸೆಳೆಯುತ್ತಿವೆ. ಸದ್ಯದ ಟ್ರೆಂಡ್ ಗಮನಿಸಿದರೆ, ಈ ವಾರಾಂತ್ಯದ ವೇಳೆಗೆ ಸಿನಿಮಾ ಮತ್ತಷ್ಟು ದಾಖಲೆಗಳನ್ನು ಪುಡಿಗಟ್ಟುವ ಸಾಧ್ಯತೆಯಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ










Click it and Unblock the Notifications