ಲೀಲಾವತಿ 'ಅಮ್ಮ' ನನ್ನ ಧ್ವನಿ ಗುರುತಿಸಿದರು: ಮಹಾನಟಿಯ ಸ್ಥಿತಿ ಕಂಡು ಮರುಗಿದ ಶಿವಣ್ಣ
600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿ ಕನ್ನಡಿಗರ ಮನೆ ಮಾತಾಗಿರುವ ಖ್ಯಾತ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದಾಗಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯ ವಿಚಾರಿಸಲು ರಾಜಕೀಯ ಗಣ್ಯ ವ್ಯಕ್ತಿಗಳು ಸೇರಿದಂತೆ ಅನೇಕ ಸಿನಿ ತಾರೆಯರು ಭೇಟಿ ನೀಡುತ್ತಿದ್ದಾರೆ. ಜೊತೆಗೆ ನಟ ಶಿವರಾಜ್ ಕುಮಾರ್ ಕೂಡ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.
ಹೌದು... ಅನಾರೋಗ್ಯದ ಕಾರಣದಿಂದಾಗಿ ಹಾಸಿಗೆ ಹಿಡಿದಿರುವ ಹಿರಿಯ ನಟಿ ಲೀಲಾವತಿ ಅವರ ಮನೆಗೆ ಶಿವರಾಜ್‌ಕುಮಾರ್ ಹಾಗೂ ಅವರ ಪತ್ನಿ ಗೀತಾ ಆಗಮಿಸಿ ಆರೋಗ್ಯ ವಿಚಾರಿಸಿದ್ದಾರೆ. ಇಂದು ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದಮನೆಗೆ ಭೇಟಿ ನೀಡಿದ ಶಿವರಾಜ್‌ಕುಮಾರ್ ಅವರು, ಲೀಲಾವತಿ ಅವರ ಪುತ್ರ, ನಟ ವಿನೋದ್ ರಾಜ್ ಅವರಿಗೆ ಧೈರ್ಯ ತುಂಬಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನನಗೂ, ವಿನೋದ್ ಅವರಿಗೂ ಇರುವ ಆತ್ಮೀಯತೆ ನಮಗಿಬ್ಬರಿಗಷ್ಟೇ ಗೊತ್ತು. ಮಗ ಚೆನ್ನಾಗಿ ಇರಬೇಕು ಎನ್ನುವುದು ಲೀಲಾವತಿ ಅವರ ಆಸೆ. ಹೆತ್ತವರಿಗೆ ಮಕ್ಕಳು ಚೆನ್ನಾಗಿ ಇರಬೇಕು ಎನ್ನುವ ಬಯಕೆ. ವಿನೋದ್ ಅವರು ಧೈರ್ಯವಾಗಿರಬೇಕು. ಲೀಲಾವತಿ ಅಮ್ಮ ನನ್ನ ಧ್ವನಿ ಗುರುತಿಸಿದರು. ಅವರ ಪ್ರೀತಿಯನ್ನು ಮರೆಯಲು ಸಾಧ್ಯವಿಲ್ಲ. ಒಂದೆಡೆ ಅವರ ಸ್ಥಿತಿ ನೋಡಿ ಬೇಸರವಾಗುತ್ತದೆ. ಆದರೆ ದೇವರ ಆಶೀರ್ವಾದವಿದೆ. ಜನರ ಪ್ರೀತಿ ಇದೆ. ಹೀಗಾಗಿ ಬೇಗ ಗುಣಮುಖರಾಗುತ್ತಾರೆ. ಲೀಲಾವತಿ ಅವರ ಹೆಸರಿನಲ್ಲಿ ಪಶು ಆಸ್ಪತ್ರೆ ಆರಂಭವಾಗಿರುವುದು ಸಂತೋಷದ ವಿಚಾರ' ಎಂದರು.
ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ ಅವರನ್ನು ವಿನೋದ್ ರಾಜ್ ಆರೈಕೆ ಮಾಡುತ್ತಿದ್ದಾರೆ. ಲೀಲಾವತಿ ಅವರಿಗೆ ಸದ್ಯ ಟ್ಯೂಬ್‌ನಲ್ಲಿ ಆಹಾರ ನೀಡಲಾಗುತ್ತಿದೆ. ಮೊನ್ನೆಯಷ್ಟೇ ನಟ ಅರ್ಜುನ್ ಸರ್ಜಾ, ದರ್ಶನ್ ಅವರು ಲೀಲಾವತಿ ಅವರ ಮನೆಗೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದ್ದರು. ವಯಸ್ಸಿನ ಕಾರಣದಿಂದಾಗಿ ಅವರು ಹಾಸಿಗೆ ಹಿಡಿದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಅವರ ಆರೋಗ್ಯ ವಿಚಾರಿಸಿದ್ದಾರೆ. 87 ವರ್ಷದ ಹಿರಿಯ ನಟಿ ಲೀಲಾವತಿಯವರು ಆರೋಗ್ಯ ಸಮಸ್ಯೆಯಿಂದಾಗಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಲೀಲಾವತಿ ಅವರು ಒಂದು ಕಾಲದಲ್ಲಿ ಸ್ಟಾರಿ ನಟಿ. ಕನ್ನಡ ಮಾತ್ರವಲ್ಲದೆ ಅವರು ತಮಿಳು, ತೆಲುಗು, ಮಲಯಾಳಂ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಇವರಿಗೆ ಕರ್ನಾಟಕ ಸರಕಾರವು ಡಾ. ರಾಜಕುಮಾರ್ ಪ್ರಶಸ್ತಿಯನ್ನು ನೀಡಿದೆ. ಇವರಿಗೆ ತುಮಕೂರು ವಿಶ್ವವಿದ್ಯಾಲಯ ಗೌರ ಡಾಕ್ಟರೇಟ್ ಪದವಿಯನ್ನೂ ನೀಡಿದೆ.
ಲೀಲಾವತಿ ಅವರ ಸಿನಿಮಾ ಪ್ರಯಾಣ 1950 ಆಸುಪಾಸಿನಲ್ಲಿ ಆರಂಭವಾಯಿತು. ಭಕ್ತ ಪ್ರಹ್ಲಾದ, ಮಾಂಗಲ್ಯ ಯೋಗ, ರಾಜ ಮಲಯ ಸಿಂಹ, ಅಬ್ಬಾ ಆ ಹುಡುಗಿ, ಧರ್ಮ ವಿಜಯ, ದಶವತಾರ, ರಣಧೀರ ಕಂಠೀರವ, ರಾಣಿ ಹೊನ್ನಮ್ಮ, ಕೈವಾರ ಮಹಾತ್ಮೆ, ಕಣ್ತೆರೆದು ನೋಡು, ಕಿತ್ತೂರು ಚೆನ್ನಮ್ಮ, ಗಾಳಿ ಗೋಪುರ, ಕರುಣೆಯೇ ಕುಟುಂಬದ ಕಣ್ಣು, ಭೂದಾನ ಮುಂದಾತ ಚಿತ್ರಗಳಲ್ಲಿ ನಟಿಸಿದ್ದಾರೆ. ಇನ್ನೂ ಅವರು ಪಟ್ಟಿನಥರ್ (ತಮಿಳು), ಮರ್ಮಯೋಗಿ (ತೆಲುಗು) ಸಿನಿಮಾಗಳಲ್ಲೂ ನಟಿಸಿದ್ದಾರೆ.
-
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್












Click it and Unblock the Notifications