Shobha Shetty: ಕಿಚ್ಚ ಸುದೀಪ್‌ ಕುರಿತು ಶೋಭಾ ಶೆಟ್ಟಿ ಫೋಸ್ಟ್

ಬಿಗ್ ಬಾಸ್ ಕನ್ನಡ 11ರಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದ ಶೋಭಾ ಶೆಟ್ಟಿ ಅನಾರೋಗ್ಯದ ಕಾರಣ ನೀಡಿ ಮನೆಯಿಂದ ಹೊರಬಂದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ತಮ್ಮ ನಿರ್ಧಾರವನ್ನು ಭಾವನಾತ್ಮಕ ಪತ್ರದ ಮೂಲಕ ಹಂಚಿಕೊಂಡಿದ್ದಾರೆ.

ಮುಖವಾಡ ಕಳಚಿ ಬಿಡ್ತೀನಿ ಅಂತ ಅಬ್ಬರಿಸುತ್ತಲೇ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದ ಶೋಭಾ ಶೆಟ್ಟಿ ಭಾನುವಾರದ ಎಪಿಸೋಡ್‌ ನಲ್ಲಿ ಕಿಚ್ಚ ಸುದೀಪ್‌ ಬಳಿ ಹೇಳಿಕೊಂಡತೆ ಮನೆಯಿಂದ ಹೊರಬಂದಿದ್ದಾರೆ. ಸಿಕ್ಕ ಒಂದು ಒಳ್ಳೆಯ ಅವಕಾಶವನ್ನು ಕಳೆದುಕೊಂಡಿದ್ದಾರೆ. ಮನೆಯಿಂದ ಹೊರ ಬಂದಿರುವ ಶೋಭಾ ಶೆಟ್ಟಿ ಸೋಷಿಯಲ್‌ ಮೀಡಿಯಾದಲ್ಲಿ ಪ್ರಯಾಣವು ಅನಿರೀಕ್ಷಿತ ತಿರುವು ಪಡೆದುಕೊಂಡಿದೆ, ಆದರೆ ಎಲ್ಲದಕ್ಕೂ ಒಂದು ಕಾರಣವಿದೆ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ಸುದೀಪ್‌ ಅವರಿಗೆ ಮತ್ತು ಕಲರ್ಸ್ ಕನ್ನಡ ಪೇಜ್‌ ಗೆ ಟ್ಯಾಗ್‌ ಮಾಡಿದ್ದಾರೆ.

Shobha Shetty post emotional letter After eliminated from Bigg Boss

ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟ ಅವರು ಕೇವಲ ಎರಡು ವಾರಕ್ಕೆ ಹೊರಕ್ಕೆ ಬಂದಿದ್ದಾರೆ. ಇದಕ್ಕಾಗಿ ಅವರು ಅನಾರೋಗ್ಯದ ಕಾರಣ ನೀಡುತ್ತಿದ್ದಾರೆ. ಆಡಬೇಕು ಎಂದುಕೊಂಡರೂ ಆರೋಗ್ಯ ಸಹಕರಿಸುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಬಿಗ್ ಬಾಸ್​ನಿಂದ ಹೊರ ಬಂದ ಅವರು ಸುದೀರ್ಘ ಪೋಸ್ಟ್ ಹಾಕಿದ್ದಾರೆ. ಸುದೀಪ್​ಗೆ ಧನ್ಯವಾದ ಹಾಕಿದ್ದಾರೆ.

'ನನ್ನ ಪ್ರೀತಿಯ ಕನ್ನಡಿಗರೇ, ನನ್ನ ಬಿಗ್ ಬಾಸ್ ಪಯಣ ಮುಗಿದಿದೆ. ಆಟದ ಮೇಲೆ ಗಮನ ಕೊಡಲು ಆರೋಗ್ಯ ಸಹಕರಿಸುತ್ತಿಲ್ಲ. ಮುನ್ನಡೆಯುವ ಇಚ್ಛೆಯಿದ್ದರೂ ದೇಹ ಮುಂದುವರಿಯಲು ಬಿಡುತ್ತಿಲ್ಲ. ಯಾರನ್ನೂ ಯಾವುದನ್ನೂ ನಾನು ಹಗುರವಾಗಿ ತೆಗೆದುಕೊಂಡಿಲ್ಲ ಎಂದು ಶೋಭಾ ಶೆಟ್ಟಿ ಪೋಸ್ಟ್ ಮಾಡಿದ್ದಾರೆ.

'ನನ್ನ ಪ್ರೀತಿಯ ಕನ್ನಡಿಗರೇ, ನನ್ನ ಬಿಗ್ ಬಾಸ್ ಪಯಣ ಮುಗಿದಿದೆ. ಆಟದ ಮೇಲೆ ಗಮನ ಕೊಡಲು ಆರೋಗ್ಯ ಸಹಕರಿಸುತ್ತಿಲ್ಲ. ಮುನ್ನಡೆಯುವ ಇಚ್ಛೆಯಿದ್ದರೂ ದೇಹ ಮುಂದುವರಿಯಲು ಬಿಡುತ್ತಿಲ್ಲ. ಯಾರನ್ನೂ ಯಾವುದನ್ನೂ ನಾನು ಹಗುರವಾಗಿ ತೆಗೆದುಕೊಂಡಿಲ್ಲ. ಜೀವನದ ಜವಬ್ದಾರಿಗಳಿಗೆ ಆರೋಗ್ಯವನ್ನು ಕಾಪಾಡಿಕೊಂಡು ಮುನ್ನಡೆಯುವ ಸಲುವಾಗಿ ನಾನು ಈ ನಿರ್ಧಾರ ಮಾಡಿರುವೆ' ಎಂದು ಪತ್ರ ಆರಂಭಿಸಿದ್ದಾರೆ ಶೋಭಾ ಶೆಟ್ಟಿ.

'ಇದೆಲ್ಲದರ ಮಧ್ಯೆ ನೀವು ತೋರಿಸಿದ ಪ್ರೀತಿ ಮತ್ತು ಬೆಂಬಲಕ್ಕೆ ನಾನು ಆಭಾರಿಯಾಗಿದ್ದೇನೆ. ತಿಳಿದೋ ತಿಳಿಯದೆಯೋ ನನ್ನಿಂದ ಯಾರಿಗಾದರೂ ಬೇಸರವಾಗಿದ್ದರೆ ದಯವಿಟ್ಟು ಕ್ಷಮಿಸಿ. ನನ್ನ ಜನರಿಗೆ, ಕಲರ್ಸ್ ಕನ್ನಡ ತಂಡಕ್ಕೆ ಹಾಗು ನಿನ್ನ ಪ್ರೀತಿಯ ಕಿಚ್ಚ ಸುದೀಪ್ ಸರ್ ನಿಮಗೆ ಧನ್ಯವಾದಗಳು ಎಂದು ಶೋಭಾ ಶೆಟ್ಟಿ ಅವರು ಫೋಸ್ಟ್‌ ಹಾಕಿದ್ದಾರೆ.

ಇನ್ನೂ ಶೋಭಾ ಶೆಟ್ಟಿ ಬಿಗ್‌ ಬಾಸ್‌ ಮನೆಯಿಂದ ಹೊರಬರುತ್ತಿದ್ದಂತೆ ಬಹುತೇಕ ಮಂದಿ ನಿಮ್ಮ ನಿರ್ಧಾರಕ್ಕೆ ನೋವಾಗಿದೆ. ಸುದೀಪ್‌ ಸರ್ ಗೆ ನೀವು ಬೆಲೆ ಕೊಡಬೇಕಿತ್ತು ಎಂದು ಕಮೆಂಟ್‌ ಮಾಡಿದ್ದಾರೆ.‌ ಇನ್ನೂ ಕೆಲವರು ನಿಮ್ಮ ಆರೋಗ್ಯ ನೋಡಿಕೊಳ್ಳಿ ನಿಮ್ಮ ನಿರ್ಧಾರವನ್ನು ಗೌರವ ನೀಡುತ್ತೇವೆ ಎಂದು ಬರೆದುಕೊಂಡಿದ್ದಾರೆ.

ಈ ಹಿಂದೆ ತೆಲುಗು ಬಿಗ್‌ಬಾಸ್‌ ನಲ್ಲಿ ಸಖತ್ ಸೌಂಡು ಮಾಡಿದ್ದ ಶೋಭಾ ಶೆಟ್ಟಿ ಕೊನೆಯವರೆಗೂ ಪ್ರೀತಿ ಗಳಿಸಿ ಉಳಿದುಕೊಂಡಿದ್ದರು. ಆದರೆ, ಕನ್ನಡ ಬಿಗ್‌ ಬಾಸ್‌ ಗೆ ಎಂಟ್ರಿ ಕೊಡುತ್ತಿದ್ದಂತೆ ಸಖತ್‌ ಸೌಂಡ್‌ ಮಾಡಿಕೊಂಡು ಬಂದ ಶೋಭಾ ಶೆಟ್ಟಿ ಆರೋಗ್ಯದ ಕಾರಣ ಹೇಳಿ ದೊಡ್ಮನೆಯಿಂದ ಹೊರ ಬಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+