Silk Manju: ಉಪೇಂದ್ರ ನಟನೆಯ 'ಎ' ಸಿನಿಮಾದ ನಿರ್ಮಾಪಕ ಸಿಲ್ಕ್ ಮಂಜು ಇನ್ನಿಲ್ಲ

Silk Manju Dies: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಬಿ.ಜಿ.ಮಂಜುನಾಥ್ (69) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಹೃದಯ ಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಮೂಲತಃ ರೇಷ್ಮೆ ಉದ್ಯಮಿಯಾಗಿದ್ದ ಇವರು, ಗಾಂಧಿನಗರದ ಚಲನಚಿತ್ರ ವಲಯದಲ್ಲಿ 'ಸಿಲ್ಕ್ ಮಂಜು' ಅಂತಲೇ ಅಪಾರ ಜನಪ್ರಿಯತೆ ಗಳಿಸಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಇವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯು ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Silk Manju Dies at 69 Upendra s A Movie Producer B G Manjunath Passes Away Know complete details

ದೊಡ್ಡ ಪ್ರಮಾಣದಲ್ಲಿ ಯಶಸ್ಸು ಕಂಡ 'ಎ' ಸಿನಿಮಾ

1998ರಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರ ನಿರ್ದೇಶನ ಹಾಗೂ ಅಭಿನಯದಲ್ಲಿ ಮೂಡಿಬಂದ ಸೂಪರ್ ಹಿಟ್ 'ಎ' (A) ಚಿತ್ರಕ್ಕೆ ಬಂಡವಾಳ ಹೂಡುವ ಮೂಲಕ ಮಂಜುನಾಥ್ ಅವರು ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದರು. ಈ ಸಿನಿಮಾ ದೊಡ್ಡ ಪ್ರಮಾಣದಲ್ಲಿ ಯಶಸ್ಸು ಕಂಡು, ಕನ್ನಡ ಚಿತ್ರರಂಗದಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿತ್ತು. ಬಳಿಕ ಅವರು ಕನ್ನಡದಲ್ಲಿ ಹಲವಾರು ಹಲವು ರೀತಿಯ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು.

ಮಂಜುನಾಥ್ ನಿರ್ಮಾಣದ ಪ್ರಮುಖ ಸಿನಿಮಾಗಳು

* ಎ
* ಪ್ರತ್ಯರ್ಥ
* ಹಗಲು ವೇಷ
* ಸೂರ್ಯಕಾಂತಿ
* ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ
* ಸೈಕಿಕ್
* ಟೆರರ್

ಆರ್ಥಿಕ ಸಂಕಷ್ಟ ಮತ್ತು ಆರೋಗ್ಯ ಸಮಸ್ಯೆಗೆ ಕಾರಣ

ಇತ್ತೀಚಿನ ವರ್ಷಗಳಲ್ಲಿ ಅವರು ನಿರ್ಮಿಸಿದ 'ಟೆರರ್' ಚಿತ್ರದ ನಿರ್ಮಾಣಕ್ಕಾಗಿ ಕೋಟ್ಯಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಆದರೆ ಈ ಸಿನಿಮಾ ನಿರೀಕ್ಷಿತ ಯಶಸ್ಸು ಕಾಣದೆ ಫ್ಲಾಪ್ ಆದ ನಂತರ ಅವರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಇದರಿಂದ ಮಾನಸಿಕ ಒತ್ತಡದಿಂದಾಗಿ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ ಅಂತಾ ವಿಜಯ ಕರ್ನಾಟಕ ವರದಿ ಮಾಡಿದೆ.

ಇನ್ನೂ ಇದೀಗ ಸಿಲ್ಕ್ ಮಂಜುನಾಥ್ ಅವರ ಅಕಾಲಿಕ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು, ನಿರ್ಮಾಪಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+