Allu Arjun Bail: ಪುಷ್ಟ-2 ನಟ ಅಲ್ಲು ಅರ್ಜುನ್‌ಗೆ ಜಾಮೀನು ಮಂಜೂರು
Allu Arjun: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್‌ಗೆ ಕೋರ್ಟ್ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇಂದು (ಜನವರಿ 03) ನಾಂಪಲ್ಲಿ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಈ ವೇಳೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಕಾಲ್ತುಳಿತ ಪ್ರಕರಣ ಸಂಬಂಧ ನಟ ಅಲ್ಲು ಅರ್ಜುನ್ ರೆಗ್ಯುಲರ್ ಬೇಲ್‌ಗೆ ಅರ್ಜಿ ಸಲ್ಲಿಸಿದ್ದರು. ನಾಂಪಲ್ಲಿ ಕೋರ್ಟ್‌ನಲ್ಲಿ ಇಂದು ಈ ಅರ್ಜಿ ವಿಚಾರಣೆ ನಡೆದಿದ್ದು, ನ್ಯಾಯಾಧೀಶರು ಅಲ್ಲು ಅರ್ಜುನ್‌ಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್ 4ರಂದು ಹೈದರಾಬಾದ್ ಸಂಧ್ಯಾ ಥಿಯೇಟರ್‌ಗೆ ಅಲ್ಲು ಅರ್ಜುನ್ ಭೇಟಿ ನೀಡಿದ ವೇಳೆ ನಡೆದ ಕಾಲ್ತುಳಿತದಲ್ಲಿ ರೇವತಿ ಹೆಸರಿನ ಮಹಿಳೆ ಮೃತಪಟ್ಟಿದ್ದರು. ಇನ್ನು ಅವರ ಪುತ್ರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗಲೂ ಕೂಡ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ಇದೆ.
ಇನ್ನು ಈ ಸಂಬಂಧ ಮೃತ ಮಹಿಳೆ ಪತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರನ್ವಯ ಹೈದರಾಬಾದ್ ಪೊಲೀಸರು ಅಲ್ಲು ಅರ್ಜುನ್ ಸೇರಿದಂತೆ ಸಂಧ್ಯಾ ಚಿತ್ರಮಂದಿರ ಮಾಲೀಕ ಹಾಗೂ ಮ್ಯಾನೇಜರ್ ಅನ್ನು ಬಂಧಿಸಿದ್ದರು.
ಅಲ್ಲು ಅರ್ಜುನ್ ಬಂಧನದ ದಿನವೇ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಮಧ್ಯಂತರ ಜಾಮೀನು ಪಡೆಯಲಾಗಿತ್ತು. ಅಲ್ಲದೆ, ನಾಂಪಲ್ಲಿ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಈ ಹಿಂದೆಯೂ ಒಮ್ಮೆ ಜಾಮೀನು ವಿಚಾರಣೆ ನಡೆದಿದ್ದು, ಆದೇಶವನ್ನು ಜನವರಿ 03ಕ್ಕೆ ಅಂದರೆ ಇಂದಿಹೆ ಕಾಯ್ದಿರಿಸಲಾಗಿತ್ತು. ಇಂದು ಅರ್ಜಿ ವಿಚಾರಣೆ ನಡೆಸಿದ ನಾಂಪಲ್ಲಿ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ಪ್ರಕರಣ ಹಿನ್ನೆಲೆ: ಹೈದರಾಬಾದ್‌ನಲ್ಲಿ ಡಿಸೆಂಬರ್ 4ರಂದು ಪುಷ್ಪ-2 ಪ್ರೀಮಿಯರ್ ಪ್ರದರ್ಶನದ ವೇಳೆ ನಟ ಅಲ್ಲು ಅರ್ಜುನ್ ಮತ್ತು ಅವರ ಕುಟುಂಬ ಸಂಧ್ಯಾ ಥಿಯೇಟರ್‌ಗೆ ಆಗಮಿಸಿತ್ತು. ನಟನನ್ನು ನೋಡಲು ಅಭಿಮಾನಿಗಳ ದಂಡೇ ನೆರೆದಿತ್ತು. ಈ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಮೃತಪಟ್ಟಿದ್ದು, ಆಕೆಯ 8 ವರ್ಷದ ಮಗ ಗಾಯಗೊಂಡಿದ್ದರು.
ಈ ಸಂಬಂಧ ಮೃತ ಮಹಿಳೆಯ ಕುಟುಂಬ ಸದಸ್ಯರು ಡಿಸೆಂಬರ್ 5ರಂದು ಚಿತ್ರಮಂದಿರದ ಆಡಳಿತ ಮಂಡಳಿ, ಅಲ್ಲು ಅರ್ಜುನ್ ಹಾಗೂ ಅವರ ಭದ್ರತಾ ತಂಡದ ವಿರುದ್ಧ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಪ್ರಕರಣದ ವಿಚಾರಣೆ ವೇಳೆ ಪೊಲೀಸರು ಮೂವರನ್ನು ಬಂಧಿಸಿದ್ದರು. ಅಲ್ಲು ಅರ್ಜುನ್ ಅವರ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ತೆಲಂಗಾಣ ಪೊಲೀಸರು ಆರೋಪಿಸಿದ್ದಾರೆ.












Click it and Unblock the Notifications