Kichcha Sudeep: ಬಿಗ್ ಬಾಸ್ ಕುರಿತ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದ ಕಿಚ್ಚ ಸುದೀಪ್
ಬೆಂಗಳೂರು, ಅಕ್ಟೋಬರ್ 15: ನಟ ಸುದೀಪ್ ಇನ್ನು ಮುಂದೆ ನಾನು ಬಿಗ್‌ಬಾಸ್ ಶೋ ನಿರೂಪಣೆ ಮಾಡಲ್ಲ, ಇದೇ ನನ್ನ ಕೊನೆ ಸೀಸನ್ ಎಂದು ಹೇಳಿದ್ದರು. ಇದು ಅಭಿಮಾನಿಗಳಿಗೆ ಬೇಸರ ತಂದಿತ್ತು. ಕಿಚ್ಚನ ಈ ದಿಢೀರ್ ನಿರ್ಧಾರಕ್ಕೆ ಕಾರಣವೇನು? ಎನ್ನುವ ಚರ್ಚೆ ನಡೀತಿದೆ.
ಇನ್ನೂ ಬಿಗ್‌ಬಾಸ್ ಶೋ ಆಯೋಜಕರ ಜೊತೆಗಿನ ಭಿನ್ನಾಭಿಪ್ರಾಯದಿಂದಲೇ ಸುದೀಪ್ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ.ನಟ ಕಿಚ್ಚ ಸುದೀಪ್ ಅವರಿಗೆ ಅವಮಾನವಾಗಿದೆ. ಅದಕ್ಕೆ ಈ ನಿರ್ಣಯ ಎಂದು ಬಿಗ್‌ಬಾಸ್ ಮಾಜಿ ಸ್ಪರ್ಧಿ ರೂಪೇಶ್ ರಾಜಣ್ಣ ಹೇಳಿದ್ದರು. ಇದೆಲ್ಲದರ ಬೆನ್ನಲ್ಲೇ ಸುದೀಪ್ ಇದೀಗ ಈ ಬಗ್ಗೆ ಮತ್ತೊಂದು ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.

"ನನ್ನ ಟ್ವೀಟ್ ಬಗ್ಗೆ ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲವನ್ನು ನಾನು ಪ್ರಶಂಸಿಸುತ್ತೇನೆ. ಇದು ನಿಜವಾಗಿಯೂ ನನಗೆ ಖುಷಿ ತಂದಿದೆ. ಆದಾಗ್ಯೂ, ಚಾನಲ್ ಹಾಗೂ ನನ್ನ ನಡುವೆ ಯಾವುದೋ ಸಂಘರ್ಷ ಇದೆ ಎಂದು ಊಹಿಸಿಕೊಂಡು ಕಾಮೆಂಟ್ ಹಾಗೂ ವೀಡಿಯೋ ಮಾಡುವವರಲ್ಲಿ ನಾನು ಕೇಳಿಕೊಳ್ತೀನಿ. ಕಲರ್ಸ್ ಕನ್ನಡ ಹಾಗೂ ನಾನು ಸುದೀರ್ಘ ಮತ್ತು ಸಕಾರಾತ್ಮಕ ಪ್ರಯಾಣವನ್ನು ಹಂಚಿಕೊಂಡಿದ್ದೇವೆ. "ಅಗೌರವ" ಎಂಬ ಪದವನ್ನು ಅದರೊಂದಿಗೆ ಸೇರಿಸುವುದು ಸರಿಯಲ್ಲ ಎಂದಿದ್ದಾರೆ.
"ಈ ಸಮಸ್ಯೆಯ ಸುತ್ತಲಿನ ಯಾವುದೇ ಊಹೆಗಳಿಗೆ ಆಧಾರವಿಲ್ಲ. ಹಾಗೂ ಇದನ್ನು ಸಮರ್ಥಿಸಲು ಸಾಧ್ಯವಿಲ್ಲ. ನನ್ನ ಟ್ವೀಟ್ ನೇರ ಮತ್ತು ಪ್ರಾಮಾಣಿಕವಾಗಿದೆ. ಕಲರ್ಸ್ ಜೊತೆ ನನ್ನ ಸಂಬಂಧ ಅದ್ಭುತವಾಗಿದೆ ಮತ್ತು ಅವರು ಯಾವಾಗಲೂ ನನ್ನನ್ನು ಗೌರವದಿಂದ ನಡೆಸಿಕೊಂಡಿದ್ದಾರೆ. ನಿರ್ದೇಶಕ ಪ್ರಕಾಶ್, ನಂಬಲಾಗದಷ್ಟು ಪ್ರತಿಭಾವಂತ ಮತ್ತು ಶಕ್ತಿಯುತ ವ್ಯಕ್ತಿ, ಮತ್ತು ನಾನು ಅವರ ಬಗ್ಗೆ ಆಳವಾದ ಗೌರವವನ್ನು ಹೊಂದಿದ್ದೇನೆ. ನಾನು ಕೆಲಸ ಮಾಡುತ್ತಿರುವ ತಂಡವು ಅನಗತ್ಯ ಆರೋಪಗಳನ್ನು ಎದುರಿಸುತ್ತಿರುವಾಗ ಸುಮ್ಮನೆ ಕುಳಿತು ಆನಂದಿಸುವವನಲ್ಲ" ಎಂದು ಸುದೀಪ್ ಬೇಸರ ಹೊರ ಹಾಕಿದ್ದಾರೆ.
I appreciate all the love and support coming my way regarding my tweet; it truly makes me feel cherished. However, I kindly ask those creating comments and videos to refrain from making assumptions about any conflicts between the channel and myself. We have shared a long and…
— Kichcha Sudeepa (@KicchaSudeep) October 15, 2024
ಸುದೀಪ್ ಪುತ್ರಿಯ ಪೋಸ್ಟ್
ಕಿಚ್ಚ ಸುದೀಪ್ ಕಿರುತೆರೆಯಲ್ಲಿ ನಡೆಸಿ ಕೊಡುವ ಏಕೈಕ ಕಾರ್ಯಕ್ರಮ ಅಂದ್ರೆ ಬಿಗ್ ಬಾಸ್. ಸುಮಾರು 11 ಸೀಸನ್‌ಗಳ ಸಾರಥಿ ಆಗಿರುವ ಸುದೀಪ್ ಇದೇ ನನ್ನ ಕೊನೆ ಸೀಸನ್ ಎಂದು ಪೋಸ್ಟ್ ಹಾಕಿದ್ದರು. ಸುದೀಪ್ ಮಾಡಿರುವ ಪೋಸ್ಟ್‌ನ ಪುತ್ರಿ ಸಾನ್ವಿ ಶೇರ್ ಮಾಡಿದ್ದಾರೆ.
'ನಿಮ್ಮ ಜರ್ನಿ ಬಗ್ಗೆ ನನಗೆ ತುಂಬಾ ಹೆಮ್ಮೆಯಾಗುತ್ತಿದೆ ಅಪ್ಪ. ನಿಮ್ಮಂತೆ ನಡೆಸಿಕೊಡಲು ಯಾರಿಗೂ ಸಾಧ್ಯವಿಲ್ಲ. ವೇದಿಕೆಯ ಮೇಲೆ ನಿಮ್ಮನ್ನು ನೋಡುವುದನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೀನಿ,ಆದರೆ ಇಷ್ಟು ವರ್ಷ ನೀವು ಬಿಗ್ ಬಾಸ್ ನಡೆಸಿಕೊಟ್ಟ ರೀತಿ ಬಗ್ಗೆ ನನಗೆ ಖುಷಿ ಇದೆ. ಬಿಗ್ ಬಾಸ್ ಕಾರ್ಯಕ್ರಮಕ್ಕೆ ನೀವು ಹಾಕಿರುವ ಶ್ರಮವನ್ನು ಯಾರಿಂದಲೂ ಮ್ಯಾಚ್ ಮಾಡಲು ಸಾಧ್ಯವಿಲ್ಲ. ಈ ಕಾರ್ಯಕ್ರಮ ಬಗ್ಗೆ ನಿಮಗಿದ್ದ ಕಾಳಜಿ ಮತ್ತು ಪ್ರೀತಿಯನ್ನು ನಾನು ಗೌರವಿಸುತ್ತೀನಿ. ನಿಮ್ಮ ಹೆಮ್ಮಯ ಮಗಳು ನಾನು' ಎಂದು ಸಾನ್ವಿ ಪೋಸ್ಟ್ ಹಾಕಿದ್ದಾರೆ' ಎಂದು ಸಾನ್ವಿ ಬರೆದುಕೊಂಡಿದ್ದಾರೆ.












Click it and Unblock the Notifications