Darshan Thoogudeepa: ರೇಣುಕಾಸ್ವಾಮಿ ಕೊಲೆ ಪ್ರಕರಣದ ಏಳು ಆರೋಪಿಗಳಿಗೆ ಸುಪ್ರೀಂನಿಂದ ನೋಟೀಸ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಏಳು ಆರೋಪಿಗಳಿಗೆ ಸುಪ್ರೀಂಕೋರ್ಟ್‌ನಿಂದ ನೋಟೀಸ್ ಜಾರಿ ಮಾಡಲಾಗಿದೆ. ಆರೋಪಿಗಳಾದ ದರ್ಶನ್ ತೂಗುದೀಪ, ಪವಿತ್ರಾ ಗೌಡ, ಜಗದೀಶ್, ಪ್ರದೋಷ್, ನಾಗರಾಜು, ಅನುಕುಮಾರ್ ಸೇರಿದಂತೆ ಏಳು ಜನ ಆರೋಪಿಗಳಿಗೆ ನೋಟೀಸ್ ಜಾರಿ ಮಾಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದಾರೆ. ಆದರೆ ಹೊರ ಬಂದ ಬಳಿಕವೂ ಅವರಿಗೆ ಸಂಕಷ್ಟ ತಪ್ಪಿಲ್ಲ. ನಟ ದರ್ಶನ್ ಹಾಗೂ ಗ್ಯಾಂಗ್‌ಗೆ ಹೈಕೋರ್ಟ್ ಜಾಮೀನು ನೀಡಿ ತಿಂಗಳಾಗುತ್ತಾ ಬಂದಿದೆ. ಪ್ರಸ್ತುತ ದರ್ಶನ್ ಹಾಗೂ ಗ್ಯಾಂಗ್ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದಾರೆ.

supreme court issues notice to 7 accused in chitradurga renukaswamy murder case

ಆದರೆ ಪ್ರಕರಣದ ಸಂಪೂರ್ಣ ಸಾಕ್ಷ್ಯಗಳನ್ನು ಕಲೆ ಹಾಕಿದ ಪೊಲೀಸರ ತಂಡ ದರ್ಶನ್ ಹಾಗೂ ಗ್ಯಾಂಗ್‌ಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಇದೀಗ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಏಳು ಜನರಿಗೆ ನೋಟೀಸ್ ನೀಡಿದೆ. ಆರೋಪಿಗಳು ನೋಟೀಸ್‌ಗೆ ಉತ್ತರ ನೀಡಬೇಕಾಗುತ್ತದೆ. ಇದಕ್ಕಾಗಿ ಆರೋಪಿಗಳ ಪರ ವಕೀಲರು ಮುಂದಿನ ಇಯರಿಂಗ್‌ನಲ್ಲಿ ಹಾಜರಾಗಲಿದ್ದಾರೆ. ಹೈಕೋರ್ಟ್‌ನಲ್ಲಿ ಆದಂತೆ ಸುಪ್ರೀಂ ಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 1,492 ಪುಟಗಳ ದಾಖಲೆಯನ್ನು ರಾಜ್ಯ ಸರ್ಕಾರವು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಸ್ಟೇಷನ್‌ನಲ್ಲಿ ದಾಖಲಾಗಿದ್ದ ಎಫ್‌ಐಆರ್‌, ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ, ಆರೋಪಿಗಳ ಹಿನ್ನೆಲೆ ಮಾಹಿತಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ, ಜಾಮೀನು ಅರ್ಜಿ ಈ ಹಿಂದೆ ವಜಾಗೊಂಡಿದ್ದ ದಾಖಲೆ, ದರ್ಶನ್ ಅವರ ಅನಾರೋಗ್ಯ ಸಂಬಂಧಿಸಿದಂತೆ ವೈದ್ಯರ ವರದಿ ಎಲ್ಲವೂ ಇದರಲ್ಲಿದೆ.

ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಒಪ್ಪದ ಸುಪ್ರೀಂ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 17 ಆರೋಪಿಗಳಿಗೆ ಮೆರಿಟ್ ಆಧಾರದಲ್ಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಜಾಮೀನು ರದ್ದು ಕೋರಿ ಸರ್ಕಾರದ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಇಂದು ವಿಚಾರಣೆ ಮಾಡಲಾಗುತ್ತಿದೆ. ಆದರೆ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿಲ್ಲ. ಹೀಗಾಗಿ ಜಾಮೀನು ರದ್ದು ಅರ್ಜಿ ವಿಚಾರಣೆ ಮುಂದೂಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+