Actor Darshan Case: ನಟ ದರ್ಶನ್‌ ಚಿತ್ತ ಸುಪ್ರೀಂ ಕೋರ್ಟ್‌ನತ್ತ: ರದ್ದಾಗುತ್ತಾ ಜಾಮೀನು?

Actor Darshan Case: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮಲೆ ನಟ ದರ್ಶನ್‌ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಪೊಲೀಸರು ಹೈಕೋರ್ಟ್‌ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದು, ಇಂದು (ಜನವರಿ 24) ವಿಚಾರಣೆ ನಡೆಯಲಿದೆ ಎನ್ನುವ ಮಾಹಿತಿ ಇದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ​ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಲಾಗಿತ್ತು. ಇದರ ಬೆನ್ನಲ್ಲೇ ಕೊಲೆ ಪ್ರಕರಣದಲ್ಲಿ ಜಾಮೀನು ನೀಡಿದ್ದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಪೊಲೀಸರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದು, ಇಂದು ವಿಚಾರಣೆ ನಡೆಯಲಿದೆ. ಈ ಹಿನ್ನೆಲೆ ಜಾಮೀನು ರದ್ದಾಗುವ ಆತಂಕ ದರ್ಶನ್‌ಗೆ ಎದುರಾಗಿದೆ.

Supreme court to Hear Plea on Actor Darshan s bail application cancellation today

ಕೊಲೆ ಪ್ರಕರಣದಲ್ಲಿ 17 ಜನ ಆರೋಪಿಗಳಿಗೂ ಜಾಮೀನು ಸಿಕ್ಕಿದೆ. ಅದರಲ್ಲೂ ಈ ಕೃತ್ಯದಲ್ಲಿ ನೇರವಾಗಿ ಭಾಗಿಯಾದ 7 ಆರೋಪಿಗಳ ಜಾಮೀನು ರದ್ದು ಕೋರಿ 1,492 ಪುಟಗಳ ಕಡತವನ್ನು ಸುಪ್ರೀಂಗೆ ಸಲ್ಲಿಕೆ ಮಾಡಿದ್ದಾರೆ. ವಕೀಲ ಅನಿಲ್ ನಿಶಾನಿ ಮುಖಾಂತರ ರಾಜ್ಯ ಪ್ರಾಸಿಕ್ಯೂಷನ್ ಸುಪ್ರೀಂಗೆ ಮೇಲ್ಮನವಿ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಪೊಲೀಸರು ಒಟ್ಟು 15 ಅಂಶಗಳನ್ನು ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.

ಜಾಮೀನು ಪಡೆದು ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ನಟ ದರ್ಶನ್‌ ಅವರು ಕೆಲ ದಿನ ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ಕಾಲ ಕಳೆದಿದ್ದರು. ಎಲ್ಲಾ ಮುಗೀತು ಅನ್ನೋದರೊಳಗೆ ಇದೀಗ ದರ್ಶನ್‌ ಅವರಿಗೆ ಜಾಮೀನು ರದ್ದಾಗುವ ಆತಂಕ ಎದುರಾದಂತಾಗಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ ಪರಿದಿವಾಲಾ ಮತ್ತು ಆರ್.ಮಹದೇವನ್ ಅವರ ದ್ವಿಸದಸ್ಯ ಪೀಠ ವಿಚಾರಣೆ ನಡೆಸಲಿದ್ದಾರೆ. ಈ ವೇಳಗೆ ದರ್ಶನ್‌ಗೆ ರಿಲೀಫ್ ಸಿಗುತ್ತಾ ಅಥವಾ ಮತ್ತೆ ಜಾಮೀನು ರದ್ದಾಲಿದ್ಯಾ ಎಂದು ಕಾದುನೋಡಬೇಕಿದೆ.

ಕೊಲೆ ಬೆದರಿಕೆ ಆರೋಪ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ ಜಾಮೀನಿನ ಮೇಲೆ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದರು. ಅಲ್ಲದೆ ಇದೀಗ ಇನ್ನೇನು ಎಲ್ಲಾ ಮುಗಿತು ಅನ್ನೋದರೊಳಗೆ ದರ್ಶನ್‌ ವಿರುದ್ಧ ಇದೀಗ ಕೊಲೆ ಬೆದರಿಕೆ ಆರೋಪವೊಂದು ಕೇಳಿಬಂದಿದೆ. ಹಾಗಾದರೆ ಆರೋಪ ಮಾಡಿದವರು ಯಾರು ಹಾಗೂ ಯಾಕೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ ಇತ್ತೀಚೆಗಷ್ಟೇ ಬಿಡುಗಡೆ ಆಗಿದ್ದರು. ಬೆನ್ನು ನೋವು ಹಿನ್ನೆಲೆ ಮನೆಯಲ್ಲೇ ವಿಶ್ರಾಂತಿ ಪಡೆದು ನಿರಾಳರಾಗುವ ವೇಳೆಯೇ ಇದೀಗ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಗನ್‌ ಪರವಾನಗಿ ರದ್ದು ಒಂದು ಕಡೆಯಾದರೆ, ಮತ್ತೊಂದೆಡೆ ಕೊಲೆ ಬೆದರಿಕೆ ಆದರೋಪ ಎದುರಾಗಿದೆ.

ಕನ್ನಡ ಚಿತ್ರರಂಗದ ಭಗವಾನ್ ಶ್ರೀಕೃಷ್ಣ ಸಿನಿಮಾದ ನಿರ್ಮಾಪಕ ಭರತ್ ಅವರಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣವನ್ನು ಇದೀಗ ಸ್ವತಃ ನಿರ್ಮಾಪಕರೇ ಕೋರ್ಟ್‌ಗೆ ತೆಗೆದುಕೊಂಡು ಹೋಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ಮುನ್ನ ಹಲವು ನಿರ್ದೇಶಕರು, ನಿರ್ಮಾಪಕರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಕಳೆದ ಎರಡು ವರ್ಷಗಳ ಹಿಂದೆ ಕನ್ನಡ ಚಿತ್ರರಂಗದ ನಿರ್ಮಾಪಕ ಭರತ್ ಅವರು ಹಲ್ಲೆ ಮಾಡಿ, ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆಂದು ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು. ಆದರೆ, ಪೊಲೀಸರು ಈ ಬಗ್ಗೆ ಎಫ್‌ಐಆರ್ ದಾಖಲಿಸಿಕೊಂಡಿರಲಿಲ್ಲ. ಕೆವಲ ಎನ್‌ಸಿಆರ್ ಮಾಡಿಕೊಂಡು ಸುಮ್ಮನಾಗಿಬಿಟಿದ್ದರು.

ಬಳಿಕ ಪವಿತ್ರಾ ಗೌಡಗೆ ಅಶ್ಲೀಲವಾಗಿ ಸಂದೇಶ ಮಾಡಿದ್ದಾನೆಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ನಟ ದರ್ಶನ್‌ & ಗ್ಯಾಂಡ್‌ ಅಪಹರಿಸಿ ಭೀಕರವಾಗಿ ಹಲ್ಲೆಗೈದು ಕೊಲೆ ಮಾಡಿದ್ದರು ಎನ್ನುವುದು ಪೊಲೀಸ್‌ ದಾಖಲೆಗಳಲ್ಲಿ ಉಲ್ಲೇಖವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+