ಖ್ಯಾತ ನಟ ಯೋಗಿ ಬಾಬು ಚಲಿಸುತ್ತಿದ್ದ ಕಾರು ಭೀಕರ ಅಪಘಾತ
ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ಯೋಗಿ ಬಾಬು ಅವರ ಕಾರು ಅಪಘಾತಕ್ಕೀಡಾಗಿದೆ. ಭಾನುವಾರ ಮುಂಜಾನೆ ವಾಲಾಜಪೇಟೆ ಟೋಲ್ ಪ್ಲಾಜಾ ಬಳಿ ನಟ ಯೋಗಿ ಬಾಬು ಅವರ ಕಾರು ಅಪಘಾತಕ್ಕೀಡಾಗಿದ್ದು, ವಾಹನವು ನಿಯಂತ್ರಣ ಕಳೆದುಕೊಂಡು ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.
ಕಾರು ಅಪಘಾತ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿವೆ. ಅಪಘಾತದಲ್ಲಿ ನಟ ಯೋಗಿ ಬಾಬು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಯೋಗಿ ಬಾಬು ಅವರ ವಾಹನ ಕಂಟ್ರೋಲ್ ತಪ್ಪಿ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದೆ. ಆದರೆ ಯೋಗಿ ಬಾಬು ಅವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಹೇಳಲಾಗುತ್ತಿದೆ.

ಈ ವಿಚಾರ ತಿಳಿದು ಯೋಗಿ ಬಾಬು ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ವಂದಂತಿಗಳನ್ನು ನಂಬಬೇಡಿ. ನಾನು ಕ್ಷೇಮವಾಗಿದ್ದೇನೆ ಎಂದು ನಟ ತಿಳಿಸಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.
"ಅದು ಯಾವುದೋ ಕಂಪನಿ ಕಾರು. ಬ್ಯಾರಿಕೇಡ್‌ಗೆ ಚೂರು ತಾಗಿ ಘಟನೆ ನಡೆದಿದೆ ಅಷ್ಟೇ. ಎಲ್ಲರೂ ಕ್ಷೇಮವಾಗಿದ್ದೇವೆ, ಯಾರಿಗೂ ಯಾವುದೇ ಅನಾಹುತ ನಡೆದಿಲ್ಲ. ನಾನು ಅಲ್ಲಿ ಏನಾಗಿದೆ ಎಂಬುದನ್ನು ನೋಡಿ ಕೊನೆಗೆ ಎಲ್ಲರನ್ನೂ ಅಲ್ಲಿಂದ ಕಳಿಸಿಕೊಟ್ಟೆವು ಎಂದು ಯೋಗಿ ಬಾಬು ಅವರು ಸ್ಪಷ್ಟನೆ ನೀಡಿದ್ದಾರೆ. ಸುಮ್ಮನೆ ಈ ಬಗ್ಗೆ ಏನೇನೋ ವದಂತಿಗಳು ಹಬ್ಬುತ್ತಿದೆ. ಅದೆಲ್ಲವೂ ಸುಳ್ಳು, ದಯವಿಟ್ಟು ಯಾರೂ ವದಂತಿಗಳನ್ನು ನಂಬಬೇಡಿ" ಎಂದು ಯೋಗಿ ಬಾಬು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಅಪಘಾತದ ಬಗ್ಗೆ ಅಭಿಮಾನಿಗಳು ಮತ್ತು ಸಿನಿಮಾ ತಾರೆಯರು ತೀವ್ರ ಕಳವಳ ವ್ಯಕ್ತಪಡಿಸುತ್ತಿದ್ದು, ಯೋಗಿ ಬಾಬು ಸುರಕ್ಷಿತವಾಗಿದ್ದಾರಾ? ಎಂದು ವಿಚಾರಿಸುತ್ತಿದ್ದಾರೆ. ಆದರೆ ಪೊಲೀಸರು ಬಹಿರಂಗಪಡಿಸಿರುವ ಇತ್ತೀಚಿನ ಮಾಹಿತಿ ಪ್ರಕಾರ ಯೋಗಿ ಬಾಬು ಸುರಕ್ಷಿತವಾಗಿದ್ದಾರೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಯೋಗಿ ಬಾಬು ಅವರ ಅಪಘಾತ ವಿಚಾರವಾಗಿ ಹಲವು ವದಂತಿಗಳು ಹಬ್ಬುತ್ತಿವೆ. ಈ ಅವಘಡದ ಬಗ್ಗೆ ಖುದ್ದು ಯೋಗಿ ಬಾಬು ಪ್ರತಿಕ್ರಿಯಿಸಿದರೆ ಮತ್ತಷ್ಟು ರಿಲೀಫ್ ಆಗಲಿದೆ ಎಂಬುದು ಅಭಿಮಾನಿಗಳು ಕೋರಿದ್ದಾರೆ. ನಟ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ ನಾನು ಕ್ಷೇಮವಾಗಿದ್ದೇನೆ ಎಂದು ಹೇಳಿರುವುದಲ್ಲದೆ, ಎಕ್ಸ್‌ನಲ್ಲೂ ನಾನು ಕ್ಷೇಮ, ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಪೋಸ್ಟ್ ಮಾಡಿದ್ದಾರೆ.
ತಮಿಳು ಚಿತ್ರರಂಗದಲ್ಲಿ ಹಾಸ್ಯನಟನಾಗಿ ಖ್ಯಾತಿ ಗಳಿಸಿರುವ ಯೋಗಿ ಬಾಬು ಅವರು ಅತಿ ಹೆಚ್ಚು ಸಂಭಾವನೆ ಪಡೆಯುವ ಹಾಸ್ಯ ನಟರ ಪೈಕಿ ಸ್ಥಾನ ಗಳಿಸಿದ್ದಾರೆ. ಇತ್ತೀಚೆಗೆ ತೆರೆಕಂಡಿರುವ ಬಹುತೇಕ ಸ್ಟಾರ್ ನಟರ ತಮಿಳು ಸಿನಿಮಾಗಳಲ್ಲಿ ನಟ ಯೋಗಿ ಬಾಬು ಅವರ ಪಾತ್ರ ಇದ್ದೇ ಇರುತ್ತೆ. ಅಷ್ಟರಮಟ್ಟಿಗೆ ಅವರ ಕ್ರೇಜ್ ತಮಿಳುನಾಡಿನಲ್ಲಿದೆ.












Click it and Unblock the Notifications