ಸಿನಿಮಾ ತಾರೆಯರಿಗೆ ಬೆಟ್ಟಿಂಗ್ ಬಿಸಿ: ವಿಜಯ್ ದೇವರಕೊಂಡ ವಿರುದ್ಧ ಕೇಸ್
ಸಾಮಾಜಿಕ ಜಾಲತಾಣದಲ್ಲಿ ಬೆಟ್ಟಿಂಗ್ ಆ್ಯಪ್ ಹಾಗೂ ಅಪ್ಲಿಕೇಶನ್‌ಗಳ ಪ್ರಚಾರ ಇತ್ತೀಚಿಗೆ ಜೋರಾಗಿಯೇ ನಡೆಯುತ್ತಿದೆ. ಬೆಟ್ಟಿಂಗ್‌ನಿಂದ ಸಾವಿರಾರು ಜನರು ಲಕ್ಷಾಂತರ ರೂಪಾಯಿ ಕಳೆದುಕೊಂಡು ಬೀದಿಗೆ ಬಿದ್ದರೂ ಸಹ ಸಿನಿಮಾ ತಾರೆಯರು ಸೇರಿದಂತೆ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳು ಬೆಟ್ಟಿಂಗ್ ಆ್ಯಪ್ ಪ್ರಚಾರ ಮುಂದುವರಿಸಿದ್ದಾರೆ. ಈ ವಿಚಾರವಾಗಿ ಸಾರ್ವಜನಿಕರ ಅಸಮಾಧಾನ ಹೆಚ್ಚಾಗಿದ್ದು, ಇದೀಗ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಬೆಟ್ಟಿಂಗ್ ಆ್ಯಪ್ ಪ್ರಚಾರ ಮಾಡಿದವರಿಗೆ ಬಿಸಿಮುಟ್ಟಿಸಲಾಗಿದೆ.
ಬೆಟ್ಟಿಂಗ್ ಆ್ಯಪ್ ಪ್ರಚಾರ ಮಾಡಿದ ಆರೋಪದ ಮೇಲೆ ತೆಲುಗಿನ ಹಲವು ನಟ ಹಾಗೂ ನಟಿಯರ ಮೇಲೆ ಹಾಗೂ ಕೆಲವು ಜನಪ್ರಿಯ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಮೇಲೆ ದೂರು ದಾಖಲಾಗಿದೆ. ಸೈಬರಾಬಾದ್‌ನ ಮಿಯಾಪುರ್ ಪೊಲೀಸರು ಸುಮಾರು 25 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಹಿನ್ನೆಲೆಯಲ್ಲಿ ಈಗಾಗಲೇ ಕೆಲವರಿಗೆ ನೋಟಿಸ್ ಕೂಡ ನೀಡಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಜನಪ್ರಿಯ ವ್ಯಕ್ತಿಗಳು ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿ ಯುವ ಜನತೆಯನ್ನು ಹಾಳು ಮಾಡುತ್ತಿದ್ದಾರೆ ಎಂದು ಮಿಯಾಪುರದ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ಈ ರೀತಿಯ ಪ್ರಚಾರದ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತೆಲುಗು ಚಿತ್ರರಂಗದ ನಟರಾದ ವಿಜಯ್ ದೇವರಕೊಂಡ, ಪ್ರಕಾಶ್ ರಾಜ್, ರಾಣಾ ದಗ್ಗುಬಾಟಿ, ನಟಿ ಪ್ರಣೀತಾ, ಶ್ರೀಮುಖಿ, ರಿತು ಚೌಧರಿ, ಮಂಚು ಲಕ್ಷ್ಮಿ ಸೇರಿದಂತೆ ಒಟ್ಟು 25 ಜನರ ವಿರುದ್ಧ ಸದ್ಯ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.












Click it and Unblock the Notifications