ಡಿವೋರ್ಸ್‌ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್‌ಗೆ ಮನವಿ
Thalapathy Vijay Divorce Case: ತಮಿಳು ಚಿತ್ರರಂಗದ ಖ್ಯಾತ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಅವರ ವಿಚ್ಛೇದನ ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ, ಸಂಗೀತಾ ಅವರು ಚೆಂಗಲ್ಪಟ್ಟು ಜಿಲ್ಲಾ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಸಂಗೀತಾ ಅವರು ಹೊಸ ಕಾನೂನು ಅರ್ಜಿ ಸಲ್ಲಿಸಿದ್ದು, ವಿಚ್ಛೇದನ ಪ್ರಕರಣ ಮುಂದುವರಿದಿರುವ ಅವಧಿಯಲ್ಲಿ ಚೆನ್ನೈನ ನೀಲಂಕರೈಯಲ್ಲಿರುವ ಪತಿಯ ನಿವಾಸದಲ್ಲೇ ವಾಸಿಸಲು ಅವಕಾಶ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಚೆಂಗಲ್ಪಟ್ಟು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿರುವ ಈ ಅರ್ಜಿ, ದಂಪತಿಗಳ ನಡುವೆ ನಡೆಯುತ್ತಿರುವ ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದೆ. ಫೆಬ್ರವರಿ 22ರಂದು ಸಲ್ಲಿಸಲಾದ ಪ್ರಮಾಣಪತ್ರದೊಂದಿಗೆ ಈ ಮಧ್ಯಂತರ ಅರ್ಜಿಯನ್ನು ನ್ಯಾಯಾಲಯಕ್ಕೆ ನೀಡಲಾಗಿದೆ. ಪ್ರಕರಣ ಅಂತಿಮ ತೀರ್ಪು ಬರುವವರೆಗೆ ಅಥವಾ ಸಮಾನ ಸೌಲಭ್ಯಗಳಿರುವ ಮತ್ತೊಂದು ವಸತಿ ಒದಗಿಸುವವರೆಗೆ ಚೆನ್ನೈನ ಈಸ್ಟ್ ಕೋಸ್ಟ್ ರೋಡ್‌ನ ನೀಲಂಕರೈಯಲ್ಲಿರುವ ಪತಿಯ ಮನೆಯಲ್ಲಿ ವಾಸಿಸುವ ಹಕ್ಕನ್ನು ಮಾನ್ಯಗೊಳಿಸಬೇಕು ಎಂದು ಸಂಗೀತಾ ಮನವಿ ಮಾಡಿದ್ದಾರೆ.

ಮನೆಯ ಹಕ್ಕಿಗಾಗಿ ಕಾನೂನು ಹೋರಾಟ
ವಿಚ್ಛೇದನ ಅರ್ಜಿ ಬಾಕಿ ಇರುವವರೆಗೂ ಅಥವಾ ಪರ್ಯಾಯ ವ್ಯವಸ್ಥೆ ಮಾಡುವವರೆಗೂ ನೀಲಂಕರೈನಲ್ಲಿರುವ ದಂಪತಿಯ ವೈವಾಹಿಕ ಮನೆಯಲ್ಲೇ ತಮಗೆ ವಾಸಿಸಲು ಹಕ್ಕಿದೆ ಎಂದು 48 ವರ್ಷದ ಸಂಗೀತಾ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ವಿಚ್ಛೇದನಕ್ಕಾಗಿ ಕಾನೂನು ಕ್ರಮ ಕೈಗೊಂಡರೆ ನೀಲಂಕರೈಯಲ್ಲಿರುವ ದಾಂಪತ್ಯ ಮನೆಯಲ್ಲಿ ಮುಂದುವರಿದು ವಾಸಿಸಲು ಅವಕಾಶ ನೀಡಲಾಗುವುದಿಲ್ಲ ಎಂದು ವಿಜಯ್ ಪರ ವಕೀಲರು ಸೂಚಿಸಿರುವುದಾಗಿ ಸಂಗೀತಾ ಹೇಳಿದ್ದಾರೆ. ಇದರಿಂದ ವಸತಿ ಕಳೆದುಕೊಳ್ಳುವ ಸಾಧ್ಯತೆಯ ಬಗ್ಗೆ ಆತಂಕ ಉಂಟಾಗಿದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
26 ವರ್ಷಗಳಿಂದ ಸಂಸಾರ ನಡೆಸಿರುವೆ
ಇದರಿಂದಾಗಿ ತಮಗೆ ವಸತಿ ಇಲ್ಲದಂತಾಗುವ ಆತಂಕ ಎದುರಾಗಿದೆ ಎಂದೂ ಅವರು ಹೇಳಿದ್ದಾರೆ. ಕಳೆದ 26 ವರ್ಷಗಳಿಂದ ವಿಜಯ್ ಅವರೊಂದಿಗೆ ಸುಖೀ ಸಂಸಾರ ನಡೆಸಿದ್ದು, ಗೃಹಿಣಿಯಾಗಿ ಮಕ್ಕಳಾದ ಜೇಸನ್ ಸಂಜಯ್ (25) ಮತ್ತು ದಿವ್ಯಾ ಸಾಶಾ (20) ಅವರ ಜವಾಬ್ದಾರಿಯನ್ನು ಹೊತ್ತಿದ್ದಾಗಿ ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ತಾವು ಯುನೈಟೆಡ್ ಕಿಂಗ್‌ಡಮ್‌ನ (ಯುಕೆ) ಪೌರತ್ವ ಹೊಂದಿದ್ದು, ಲಂಡನ್‌ನಲ್ಲಿ ಬಯೋಮೆಡಿಕಲ್ ಸೈನ್ಸ್ ಪದವಿ ಪಡೆದಿರುವುದಾಗಿ ತಿಳಿಸಿರುವ ಸಂಗೀತಾ, ಪ್ರಸ್ತುತ ವಿಜಯ್ ಅವರ ಸ್ಥಾನಮಾನಕ್ಕೆ ಅನುಗುಣವಾದ ಬೇರೆ ಯಾವುದೇ ಪರ್ಯಾಯ ಮನೆ ತಮಗೆ ಲಭ್ಯವಿಲ್ಲ ಎಂದೂ ಅರ್ಜಿಯಲ್ಲಿ ವಿವರಿಸಿದ್ದಾರೆ.
ಮುಖ್ಯ ಪ್ರಕರಣದ ತೀರ್ಪು ಬರುವವರೆಗೆ ನೀಲಂಕರೈ ಮನೆಯಲ್ಲೇ ಎಲ್ಲಾ ಸೌಲಭ್ಯಗಳೊಂದಿಗೆ ವಾಸಿಸಲು ಅನುಮತಿ ನೀಡುವ ಮಧ್ಯಂತರ ಆದೇಶ ನೀಡಬೇಕು ಎಂದು ನ್ಯಾಯಾಲಯವನ್ನು ಅವರು ಮನವಿ ಮಾಡಿದ್ದಾರೆ. ವಿಶೇಷ ವಿವಾಹ ಕಾಯ್ದೆ 1954ರ ಅಡಿಯಲ್ಲಿ ವಿಚ್ಛೇದನಕ್ಕಾಗಿ ಮುಖ್ಯ ಅರ್ಜಿಯನ್ನು ಸಲ್ಲಿಸಲಾಗಿದ್ದು, ಅದರ ಜೊತೆಗೆ ಶಾಶ್ವತ ಜೀವನಾಂಶ ಮತ್ತು ವಸತಿ ಹಕ್ಕನ್ನು ಅವರು ಕೋರಿದ್ದಾರೆ. ಮಧ್ಯಂತರ ಆದೇಶಕ್ಕಾಗಿ ಮನವಿ ಮಾಡಲಾಗಿದ್ದು, ನ್ಯಾಯಾಲಯವು ಈ ಬಗ್ಗೆ ಯಾವ ಕ್ರಮ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ. ನಟ ವಿಜಯ್ ಅವರ ರಾಜಕೀಯ ಜೀವನದ ಈ ನಿರ್ಣಾಯಕ ಹಂತದಲ್ಲಿ ಎದುರಾಗಿರುವ ಈ ಕೌಟುಂಬಿಕ ಕಾನೂನು ಸಮರವು ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದಾದ್ಯಂತ ಚರ್ಚೆಗೆ ಗ್ರಾಸವಾಗಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications