Thalapathy Vijay divorce: ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು: ತಂದೆಯನ್ನ ಅನ್‌ಫಾಲೋ ಮಾಡಿದ ಮಗ ಜೇಸನ್ ಸಂಜಯ್
ತಮಿಳು ಸೂಪರ್ ಸ್ಟಾರ್ ದಳಪತಿ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಅವರ ನಡುವಿನ ವಿಚ್ಛೇದನದ ವದಂತಿಗಳು ಕಳೆದ ಕೆಲವು ಸಮಯದಿಂದ ಸದ್ದು ಮಾಡುತ್ತಿವೆ. ಈಗ ಈ ಬೆಂಕಿಗೆ ತುಪ್ಪ ಸುರಿಯುವಂತೆ ವಿಜಯ್ ಅವರ ಪುತ್ರ ಜೇಸನ್ ಸಂಜಯ್ (Jason Sanjay) ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ತಂದೆಯನ್ನೇ ಅನ್‌ಫಾಲೋ ಮಾಡಿದ್ದಾರೆ ಎಂಬ ಸುದ್ದಿ ಕಾಲಿವುಡ್‌ನಲ್ಲಿ ಸಂಚಲನ ಮೂಡಿಸಿದೆ.
ತಂದೆಯಿಂದ ಅಂತರ
ಇನ್‌ಸ್ಟಾಗ್ರಾಮ್‌ನಲ್ಲಿ ಸಕ್ರಿಯರಾಗಿರುವ ಜೇಸನ್ ಸಂಜಯ್ ದಿಢೀರ್ ತಮ್ಮ ತಂದೆ ವಿಜಯ್ ಅವರನ್ನು ಅನ್‌ಫಾಲೋ ಮಾಡಿದ್ದಾರೆ. ಇದು ಕುಟುಂಬದೊಳಗಿನ ಭಿನ್ನಾಭಿಪ್ರಾಯದ ಸೂಚನೆ ಇರಬಹುದೇ ಎಂದು ಅಭಿಮಾನಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಲೈಕಾ ಪ್ರೊಡಕ್ಷನ್ಸ್ ಅಡಿಯಲ್ಲಿ ಸಂಜಯ್ ತಮ್ಮ ಚೊಚ್ಚಲ ಚಿತ್ರವನ್ನು ನಿರ್ದೇಶಿಸಲು ಸಜ್ಜಾಗುತ್ತಿದ್ದಾರೆ. ಈ ಹಂತದಲ್ಲಿ ಅವರು ತಂದೆಯಿಂದ ಅಂತರ ಕಾಯ್ದುಕೊಳ್ಳುತ್ತಿರುವುದು ಕುತೂಹಲ ಮೂಡಿಸಿದೆ.

ಕಳೆದ ಒಂದು ವರ್ಷದಿಂದ ವಿಜಯ್ ಮತ್ತು ಸಂಗೀತಾ ಪರಸ್ಪರ ದೂರವಾಗಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ವಿಜಯ್ ಅವರ ಸಿನಿಮಾಗಳ ಆಡಿಯೋ ಲಾಂಚ್ ಅಥವಾ ಇತರೆ ಕೌಟುಂಬಿಕ ಕಾರ್ಯಕ್ರಮಗಳಲ್ಲಿ ಸಂಗೀತಾ ಅವರು ದೀರ್ಘಕಾಲದಿಂದ ಕಾಣಿಸಿಕೊಳ್ಳದಿರುವುದು ಈ ಅನುಮಾನಗಳನ್ನು ಮತ್ತಷ್ಟು ಬಲಪಡಿಸಿದೆ.
ತಮ್ಮ ನೆಚ್ಚಿನ ನಟ ರಾಜಕೀಯಕ್ಕೆ (ಟಿವಿಕೆ ಪಕ್ಷದ ಮೂಲಕ) ಪ್ರವೇಶಿಸುತ್ತಿರುವ ಈ ಸಂದರ್ಭದಲ್ಲಿ ಕುಟುಂಬದಲ್ಲಿ ಇಂತಹ ಸಮಸ್ಯೆಗಳು ಎದುರಾಗಿರುವುದು ಅಭಿಮಾನಿಗಳಿಗೆ ಬೇಸರ ತಂದಿದೆ. ಆದರೆ ವಿಜಯ್ ಆಗಲಿ ಅಥವಾ ಅವರ ಕುಟುಂಬದ ಸದಸ್ಯರಾಗಲಿ ಈ ವದಂತಿಗಳ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ.
ನಟ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಸೊರ್ನಲಿಂಗಂ ಅವರ 25 ವರ್ಷಗಳ ದಾಂಪತ್ಯ ಅಂತ್ಯವಾಗುತ್ತಿದೆ ಎಂಬ ವದಂತಿ ನಡುವೆ ಸಂಗೀತಾ ಅವರು ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಸಂಗೀತಾ ಅವರು ಈಗಾಗಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಕಾನೂನು ಹೋರಾಟ ಆರಂಭಿಸಿದ್ದಾರೆ ಎನ್ನಲಾಗಿದೆ.
ಈ ವಿಚ್ಛೇದನಕ್ಕೆ ವಿಜಯ್ ಅವರ ಅಕ್ರಮ ಸಂಬಂಧ ಕಾರಣ ಎಂಬ ಆರೋಪವೂ ಕೇಳಿಬಂದಿದೆ. ವಿಜಯ್ ಅವರು ಸೌತ್ ಇಂಡಸ್ಟ್ರಿಯ ಖ್ಯಾತ ನಟಿಯೊಬ್ಬರ ಜೊತೆ ಸಂಬಂಧ ಹೊಂದಿದ್ದಾರೆ ಎಂಬ ಗಂಭೀರ ಆರೋಪವನ್ನು ಸಂಗೀತಾ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಇಷ್ಟೆಲ್ಲಾ ಗಂಭೀರ ವದಂತಿಗಳು ಹರಡುತ್ತಿದ್ದರೂ, ನಟ ವಿಜಯ್ ಆಗಲಿ ಅಥವಾ ಸಂಗೀತಾ ಆಗಲಿ ಈ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ. ಕುಟುಂಬದ ಗೌಪ್ಯತೆಯನ್ನು ಕಾಪಾಡುವ ಸಲುವಾಗಿ ಇಬ್ಬರೂ ಮೌನಕ್ಕೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ವಿಜಯ್‌ಗೆ ಅಭಿಮಾನಿ, ನಂತರ ಅರ್ಧಾಂಗಿಯಾಗಿದ್ದ ಸಂಗೀತಾ
ಇಂದು ವಿಚ್ಛೇದನದ ವದಂತಿಗಳಿಂದ ಸುದ್ದಿಯಲ್ಲಿರುವ ಈ ಜೋಡಿಯ ಆರಂಭಿಕ ದಿನಗಳು ಸಿನಿಮೀಯ ಮಾದರಿಯಲ್ಲಿದ್ದವು. ಶ್ರೀಲಂಕಾ ಮೂಲದ ತಮಿಳು ಕುಟುಂಬಕ್ಕೆ ಸೇರಿದ ಸಂಗೀತಾ, ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಬೆಳೆದವರು. ಅವರ ತಂದೆ ಲಂಡನ್‌ನಲ್ಲಿ ನೆಲೆಸಿದ್ದ ದೊಡ್ಡ ಉದ್ಯಮಿ. 1996ರಲ್ಲಿ ವಿಜಯ್ ನಟನೆಯ 'ಪೂವೆ ಉನಕ್ಕಾಗ' ಸಿನಿಮಾ ಭಾರಿ ಯಶಸ್ಸು ಕಂಡಿತ್ತು. ಆಗ ಚೆನ್ನೈಗೆ ಭೇಟಿ ನೀಡಿದ್ದ ಸಂಗೀತಾ, ವಿಜಯ್ ಅವರಿಗೆ ಶುಭ ಕೋರಲು ಫಿಲ್ಮ್ ಸಿಟಿಗೆ ಹೋಗಿದ್ದರು. ಅಲ್ಲಿಯೇ ಇಬ್ಬರ ಮೊದಲ ಭೇಟಿಯಾಯಿತು.

ಸಂಗೀತಾರ ಗುಣ ಇಷ್ಟಪಟ್ಟ ವಿಜಯ್, ಅವರನ್ನು ತಮ್ಮ ಮನೆಗೆ ಕರೆದೊಯ್ದು ಪೋಷಕರಾದ ಎಸ್.ಎ. ಚಂದ್ರಶೇಖರ್ ಮತ್ತು ಶೋಭಾ ಅವರಿಗೆ ಪರಿಚಯಿಸಿದ್ದರು. ಸಂಗೀತಾರನ್ನು ಕಂಡ ವಿಜಯ್ ಪೋಷಕರಿಗೂ ಅವರು ತುಂಬಾ ಇಷ್ಟವಾಗಿದ್ದರು. ಇವರ ಸಂಬಂಧ ಬೆಳೆಯುತ್ತಿದ್ದಂತೆ, ವಿಜಯ್ ಪೋಷಕರೇ ಮದುವೆಯ ಪ್ರಸ್ತಾಪ ಮುಂದಿಟ್ಟರು. ಮದುವೆ ಮಾತುಕತೆಗಾಗಿ ವಿಜಯ್ ಕುಟುಂಬ ಲಂಡನ್‌ಗೆ ಪ್ರಯಾಣ ಬೆಳೆಸಿ ಸಂಗೀತಾರ ಪೋಷಕರನ್ನು ಭೇಟಿ ಮಾಡಿದ್ದರು.
ವಿಜಯ್ ಕ್ರೈಸ್ತ ಧರ್ಮಕ್ಕೆ ಸೇರಿದವರಾಗಿದ್ದರೂ, ಹಿಂದೂ ಧರ್ಮದ ಸಂಗೀತಾರ ಸಂಪ್ರದಾಯದಂತೆ ಹಿಂದೂ ಪದ್ಧತಿಯಲ್ಲಿ 1999ರಲ್ಲಿ ಮದುವೆಯಾದರು. ನಂತರ ಚೆನ್ನೈನಲ್ಲಿ ಅದ್ಧೂರಿ ರಿಸೆಪ್ಷನ್ ಏರ್ಪಡಿಸಲಾಗಿತ್ತು. ಬ್ರಿಟಿಷ್ ಪೌರತ್ವ ಹೊಂದಿದ್ದ ಸಂಗೀತಾ, ಮದುವೆಯ ನಂತರ ಭಾರತದಲ್ಲಿ ನೆಲೆಸಿ ವಿಜಯ್ ಅವರ ಯಶಸ್ವಿ ವೃತ್ತಿಜೀವನಕ್ಕೆ ದೊಡ್ಡ ಬೆಂಬಲವಾಗಿ ನಿಂತಿದ್ದರು. ಇಷ್ಟು ಸುಂದರವಾದ ಇತಿಹಾಸ ಹೊಂದಿರುವ ಈ ಜೋಡಿ ಈಗ ವಿಚ್ಛೇದನದ ಅಂಚಿಗೆ ಬಂದಿರುವುದು ಕಾಲಿವುಡ್ ಮಾತ್ರವಲ್ಲದೆ ಇಡೀ ದಕ್ಷಿಣ ಭಾರತದ ಸಿನಿಪ್ರಿಯರಿಗೆ ಅಚ್ಚರಿ ಮತ್ತು ಬೇಸರ ತಂದಿದೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ












Click it and Unblock the Notifications