Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ
ತಮಿಳು ಚಿತ್ರರಂಗದ ಹಿರಿಯ ನಟ ಮತ್ತು ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷ ದಳಪತಿ ವಿಜಯ್ (Thalapathy Vijay) ಅವರ 25 ವರ್ಷಗಳ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿರುವ ಸುದ್ದಿ ಎಲ್ಲೆಡೆ ಚರ್ಚೆಯಾಗುತ್ತಿದೆ. ವಿಜಯ್ ಪತ್ನಿ ಸಂಗೀತಾ ಸ್ವರ್ಣಲಿಂಗಂ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎನ್ನುವ ವಿಚಾರ ಇಡೀ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಇದರ ಬೆನ್ನಲ್ಲೇ ಸಂಗೀತಾ ಯಾರು? ಅವರ ಹಿನ್ನೆಲೆ ಮತ್ತು ಈ ವಿಚ್ಛೇದನಕ್ಕೆ ಕಾರಣವೇನು? ಎಂಬ ಪ್ರಶ್ನೆಗಳು ಕೂಡ ಮುನ್ನೆಲೆಗೆ ಬಂದಿವೆ.
ಯಾರು ಈ ಸಂಗೀತಾ ಸ್ವರ್ಣಲಿಂಗಂ?
ಸಂಗೀತಾ ಅವರು ಲಂಡನ್ ಮೂಲದ ಶ್ರೀಲಂಕನ್ ತಮಿಳು ಕುಟುಂಬಕ್ಕೆ ಸೇರಿದವರು. ಇವರ ತಂದೆ ಸ್ವರ್ಣಲಿಂಗಂ ಅವರು ಲಂಡನ್‌ನಲ್ಲಿ ನೆಲೆಸಿರುವ ದೊಡ್ಡ ಉದ್ಯಮಿ. ಸಂಗೀತಾ ಅವರು ಸುಮಾರು 400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ ಎನ್ನಲಾಗಿದೆ. ಲಂಡನ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡಿರುವ ಇವರು, ಸದ್ಯ ಲಂಡನ್‌ನಲ್ಲೇ ತಮ್ಮ ಕುಟುಂಬದ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಾರೆ.

ವಿಜಯ್ ಫ್ಯಾನ್ ಆಗಿದ್ದ ಸಂಗೀತಾ
ನಟ ದಳಪತಿ ವಿಜಯ್ ಅವರಿಗೆ ಕೋಟ್ಯಂತರ ಅಭಿಮಾನಿಗಳಾಗಿದ್ದಾರೆ. ಅವರಲ್ಲಿ ಪತ್ನಿ ಸಂಗೀತಾ ಸ್ವರ್ಣಲಿಂಗಂ ಕೂಡ ಒಬ್ಬರು. ವಿಜಯ್ ಮತ್ತು ಸಂಗೀತಾ ಅವರ ಪ್ರೇಮಕಥೆ ಸಿನಿಮಾ ಕಥೆಯಷ್ಟೇ ರೋಚಕವಾಗಿದ್ದು, ಅಭಿಮಾನಿಯಾದವಳು ಅರ್ಧಾಂಗಿಯಾದ ಕಥೆ ತೆರೆದುಕೊಳ್ಳುತ್ತದೆ. 1996ರಲ್ಲಿ ಬಿಡುಗಡೆಯಾದ ವಿಜಯ್ ಅವರ 'ಪೂವೆ ಉನಕ್ಕಾಗ' ಸಿನಿಮಾ ನೋಡಿ ಸಂಗೀತಾ ಮಾರು ಹೋಗಿದ್ದರು.
ನಂತರ ವಿಜಯ್ ಅವರನ್ನು ಭೇಟಿ ಮಾಡಲೆಂದೇ ಇವರು ಲಂಡನ್‌ನಿಂದ ಚೆನ್ನೈಗೆ ಬಂದಿದ್ದರು. ಮೊದಲು ಸ್ನೇಹದಿಂದ ಆರಂಭವಾದ ಇವರ ಸಂಬಂಧ ಬಳಿಕ ಪ್ರೀತಿಗೆ ತಿರುಗಿತು. ಬಳಿಕ 1999ರ ಆಗಸ್ಟ್ 25ರಂದು ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದಂತೆ ಇಬ್ಬರೂ ಕುಟುಂಬಸ್ಥರ ಸಮ್ಮುಖದಲ್ಲಿ ವಿವಾಹವಾದರು.

ಮಕ್ಕಳು ಮತ್ತು ಕುಟುಂಬ
ವಿಜಯ್-ಸಂಗೀತಾ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಜೇಸನ್ ಸಂಜಯ್ (ಮಗ) ತಂದೆಯೊಂದಿಗೆ 'ವೆಟ್ಟೈಕಾರನ್' ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ 'Sigma' ಎಂಬ ಚಿತ್ರದ ಮೂಲಕ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇತ್ತೀಚೆಗೆ ಇವರು ಇನ್‌ಸ್ಟಾಗ್ರಾಂನಲ್ಲಿ ವಿಜಯ್ ಅವರನ್ನು ಅನ್‌ಫಾಲೋ ಮಾಡಿರುವುದು ಡಿವೋರ್ಸ್‌ಗೆ ವದಂತಿಗೆ ಪುಷ್ಟಿ ನೀಡಿತ್ತು. ಇನ್ನು ಮಗಳು ದಿವ್ಯ ಸಾಶಾ, 'ಥೇರಿ' ಚಿತ್ರದಲ್ಲಿ ಸಣ್ಣ ಪಾತ್ರ ಮಾಡಿದ್ದ ಇವರು, ಸದ್ಯ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದಾರೆ.
ವಿಜಯ್ ಅವರಿಗಿಂತ ಹೆಚ್ಚಾಗಿ ಸಂಗೀತಾ ಅವರಿಗೆ ಚಿತ್ರರಂಗದಲ್ಲಿ ಆಪ್ತ ಗೆಳೆಯರಿದ್ದಾರೆ. ನಟ ಅಜಿತ್ ಕುಮಾರ್ ಪತ್ನಿ ಶಾಲಿನಿ ಅಜಿತ್ ಮತ್ತು ಜಯಂ ರವಿ ಅವರ ಮಾಜಿ ಪತ್ನಿ ಆರತಿ ರವಿ ಸಂಗೀತಾ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಸದ್ಯ ವಿಜಯ್ ಅವರು ರಾಜಕೀಯದಲ್ಲಿ ಸಕ್ರಿಯರಾಗಲು ತಯಾರಿ ನಡೆಸುತ್ತಿರುವಾಗಲೇ ಈ ಕೌಟುಂಬಿಕ ಕಲಹ ಬೀದಿಗೆ ಬಂದಿರುವುದು ಅವರ ರಾಜಕೀಯ ಭವಿಷ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

ವಿಚ್ಛೇದನಕ್ಕೆ ಕಾರಣವೇನು?
ಇತ್ತೀಚೆಗೆ ಸಂಗೀತಾ ಅವರು ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಅರ್ಜಿಯಲ್ಲಿ ಅವರು ನೀಡಿರುವ ಪ್ರಮುಖ ಕಾರಣಗಳು ಹೀಗಿವೆ. ಪತಿ ವಿಜಯ್‌ಗೆ ಪರಸ್ತ್ರೀ ಸಂಬಂಧದ ಆರೋಪ ಮಾಡಿರುವ ಸಂಗೀತಾ, ವಿಜಯ್ ಅವರು ಒಬ್ಬ ನಟಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಸಂಗೀತಾ ಗಂಭೀರ ಆರೋಪ ಮಾಡಿದ್ದಾರೆ. 2021ರಲ್ಲೇ ಈ ವಿಷಯ ಸಂಗೀತಾ ಅವರಿಗೆ ತಿಳಿದಿತ್ತು. ವಿಜಯ್ ಅವರು ಈ ಸಂಬಂಧವನ್ನು ಕಡಿದುಕೊಳ್ಳುವುದಾಗಿ ಭರವಸೆ ನೀಡಿದ್ದರೂ, ಅದು ಮುಂದುವರಿದಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications