ಕಾಂತಾರ ಸಿನಿಮಾದಲ್ಲಿ ನಟಿಸಿದ್ದ ಹಿರಿಯ ನಟ ಹೃದಯಾಘಾತದಿಂದ ನಿಧನ

ಕಾಂತಾರ ಸಿನಿಮಾದಲ್ಲಿ ಅಭಿನಯಿಸಿದ್ದ ಹಿರಿಯ ನಟ ಹಾಗೂ ರಂಗಭೂಮಿ ಕಲಾವಿದ ಟಿ.ಪ್ರಭಾಕರ್ ಕಲ್ಯಾಣಿ ಹೃದಯಾಘಾತದಿಂದ ಇಂದು (ಆಗಸ್ಟ್‌ 8) ನಿಧನರಾಗಿದ್ದಾರೆ. ಹಿರಿಯಡ್ಕದಲ್ಲಿ ಇರುವ ತಮ್ಮ ನಿವಾಸದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕಾಂತಾರ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ಟಿ.ಪ್ರಭಾಕರ್ ಕಲ್ಯಾಣಿ ಹೃದಯಾಘಾತದಿಂದ ಹಿರಿಯಡ್ಕದಲ್ಲಿ ಇರುವ ತಮ್ಮ ನಿವಾಸದಲ್ಲಿ ಕುಸಿದು ಬಿದ್ದು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

Theatre Artist Who Acted in Kantara Movie Passes Away due to heart

ಕಳೆದ 3 ದಿನಗಳ ಹಿಂದೆ ಹಿರಿಯಡಕ ಪೇಟೆಯಲ್ಲಿ ತಲೆ ಸುತ್ತಿ ಬಿದ್ದಿದ್ದರು. ಇಂದು (ಆಗಸ್ಟ್‌ 8) ಮಲಗಿದಲ್ಲಿಯೇ ಹೃದಯಘಾತದಿಂದ ನಿಧನರಾಗಿದ್ದಾರೆ. 5 ವರ್ಷದ ಹಿಂದೆ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಮೃತ ಟಿ.ಪ್ರಭಾಕರ್ ಕಲ್ಯಾಣಿ ಅವರು ರಂಗಭೂಮಿಯಲ್ಲಿ ಅಪಾರ ಆಸಕ್ತಿ ಹೊಂದಿದ್ದ ಪ್ರಭಾಕರ್, ವಿವಿಧ ರಂಗ ನಾಟಕಗಳಲ್ಲಿ ಸಕ್ರಿಯವಾಗಿ ಅಭಿನಯಿಸಿದ್ದರು. ಅಲ್ಲದೆ, ಕಾಂತಾರ ಚಿತ್ರದಲ್ಲಿ ಕಲಾವಿದರಾಗಿ ಅಭಿನಯಿಸಿದ್ದಾರೆ. ಇನ್ನು ಅವರು ಇದೀಗ ಪತ್ನಿ, ಓರ್ವ ಪುತ್ರ, ಅನೇಕ ಬಂಧು-ಮಿತ್ರರನ್ನು ಅಗಲಿದ್ದಾರೆ. ಅವರ ಅಂತಿಮ ವಿಧಿ-ವಿಧಾನಗಳನ್ನು ಬೀಡಿನಗುಡ್ಡೆ ಸ್ಮಶಾನದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳಿಂದ ತಿಳಿದುಬಂದಿದೆ.

ರಾಕೇಶ್ ಪೂಜಾರಿ ನಿಧನ: ಕಳೆದ ಕೆಲ ದಿನಗಳ ಹಿಂದೆಯಷ್ಟೇ ಕಾಂತಾರ ಚಾಪ್ಟರ್​ 1 ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನರಾಗಿದ್ದು, ಚಿತ್ರತಂಡಕ್ಕೆ ದೊಡ್ಡ ಆಘಾತ ಆಗಿತ್ತು.

ಹಾಸ್ಯದ ಮೂಲಕ ಜನರನ್ನು ರಂಜಿಸುತ್ತಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ನಿಧನದ ಸುದ್ದಿ ಕೇಳಿ ಚಿತ್ರತಂಡ ಬೆಚ್ಚಿಬಿದ್ದಿತ್ತು. ಜೀ ಕನ್ನಡದ ವಾಹಿನಿಯಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿಗಳು ಶೋ ಮೂಲಕ ರಾಕೇಶ್ ಪೂಜಾರ್ ಜನಪ್ರಿಯರಾದರು. ಸೀಸನ್​ 3ರ ವಿನ್ನರ್​ ಆದ ರಾಕೇಶ್ ಅವರಿಗೆ ಚಿತ್ರರಂಗದಿಂದ ಅವಕಾಶಗಳು ಹರಿದುಬಂದಿದ್ದವು. ಅನೇಕ ಸಿನಿಮಾಗಳಲ್ಲಿ ರಾಕೇಶ್ ಪೂಜಾರ್ ನಟನೆ ಮಾಡಿದ್ಸಿದಾರೆ. ರಿಷಬ್ ಶೆಟ್ಟಿಯ ಕಾಂತಾರ ಚಾಪ್ಟರ್ 1 ಚಿತ್ರದಲ್ಲೂ ಪ್ರಮುಖ ಪಾತ್ರದಲ್ಲಿ ನಟನೆ ಮಾಡಿದ್ದಾರೆ.

ಕಾಂತಾರ ಚಾಪ್ಟರ್ 1 ಸೆಟ್​​ನಲ್ಲಿದ್ದ ಜ್ಯೂನಿಯರ್ ಆರ್ಟಿಸ್ಟ್ ಕಪಿಲ್​ ಕೊಲ್ಲೂರು ಸೌಪರ್ಣಿಕಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಇದಾದ ಬಳಿಕ ಹಾಸ್ಯನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು.

ಅವರಿಗೆ ಯಾವುದೇ ಕಾಯಿಲೆ ಅಥವಾ ಅನಾರೋಗ್ಯ ಆಗಲಿ ಇರಲಿಲ್ಲ. ಮೇ 11ರ ಮಿಯ್ಯಾರಿನ ತನ್ನ ಗೆಳೆಯನ ಮೆಹೆಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಖುಷಿಯಾಗೇ ಸಮಯ ಕಳೆದಿದ್ದರು. ಅಷ್ಟೇ ಅಲ್ಲದೇ, ಅಲ್ಲಿ ನೃತ್ಯವನ್ನೂ ಕೂಡ ಮಾಡಿ ಸಂಭ್ರಮಿಸಿದ್ದರು. ನೃತ್ಯದ ವೇಳೆ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಕಾರ್ಕಳದ ಗಾಜ್ರಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆಂದು ತಿಳಿದುಬಂದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+