Vaishnavi Gowda: ಈ ಕಾರಣಕ್ಕೆ ನಾನು ತಾಳಿ ಹಾಕಲ್ಲ, ಅಷ್ಟು ಬೆಲೆ ಕೊಡಲ್ಲ: ವೈಷ್ಣವಿ ಗೌಡ
ವೈಷ್ಣವಿ ಗೌಡ ಕನ್ನಡದ ಪ್ರಸಿದ್ಧ ಕಿರುತೆರೆ ಮತ್ತು ಚಲನಚಿತ್ರ ನಟಿ. ವೈಷ್ಣವಿ ಗೌಡ ಅವರು ಮುಖ್ಯವಾಗಿ "ಅಗ್ನಿಸಾಕ್ಷಿ" ಧಾರಾವಾಹಿಯ ಸನ್ನಿಧಿ ಪಾತ್ರದ ಮೂಲಕ ಮನೆಮಾತಾಗಿದ್ದರು. "ಬಿಗ್ ಬಾಸ್ ಕನ್ನಡ ಸೀಸನ್ 8"ರಲ್ಲಿ ಸ್ಪರ್ಧಿಯಾಗಿದ್ದರು. ಇತ್ತೀಚೆಗೆ ಝೀ ಕನ್ನಡ ವಾಹಿನಿಯಲ್ಲಿ ಇನ್ನೊಂದು ಪ್ರಮುಖ ಧಾರಾವಾಹಿ "ಸೀತಾ ರಾಮ"ದಲ್ಲಿ ನಾಯಕಿಯಾಗಿ ಹೆಚ್ಚು ಹೆಸರುವಾಸಿಯಾಗಿದ್ದಾರೆ.
ವೈಷ್ಣವಿ ಗೌಡ 2025ರ ಜೂನ್‌ನಲ್ಲಿ ಅನುಕೂಲ್ ಮಿಶ್ರಾ ಅವರೊಂದಿಗೆ ವಿವಾಹವಾಗಿದ್ದಾರೆ. ಮದುವೆಯ ನಂತರ ಅವರು ಪತಿ ಜೊತೆಗೆ ಉತ್ತರಾಖಂಡ, ಮನಾಲಿ, ಮತ್ತು ಶಿವಪುರಿ ಸೇರಿದಂತೆ ವಿವಿಧ ಪ್ರವಾಸ ಸ್ಥಳಗಳಿಗೆ ಹನಿಮೂನ್‌ಗೆ ಹೋಗಿರುವುದು ಸುದ್ದಿಯಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಇಬ್ಬರೂ ತುಂಬಾ ಸಕ್ರಿಯರಾಗಿದ್ದು, ತಮ್ಮ ಹೊಸ ಜೀವನದ ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಸದ್ಯ ವೈಷ್ಣವಿ ಗೌಡ ಅವರು ಮದುವೆಯಾಗಿ ಒಂದು ತಿಂಗಳಲಾಗಿದ್ದು, ತಾಳಿ ಯಾಕೆ ಹಾಕಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಪ್ರಶ್ನಿಸಿದ್ದಾರೆ.

ವೈಷ್ಣವಿ ಗೌಡ ಅನುಕೂಲ್ ಮಿಶ್ರಾ ಜೊತೆ ಅದ್ಧೂರಿಯಾಗಿ ಮದುವೆ ಮಾಡಿಕೊಂಡಿದ್ದರು. ಹಲವು ಬಾರಿ ವೈಷ್ಣವಿ ಗೌಡ ಅವರಿಗೆ ನೆಟ್ಟಿಗರು ತಾಳಿ ಹಾಕುತ್ತಿಲ್ಲ ಏಕೆ ಎಂಬ ಪ್ರಶ್ನೆ ಕೇಳುತ್ತಲೇ ಇದ್ದರು. ಇದೀಗ ತಮ್ಮ ಯುಟ್ಯೂಬ್ ಮೂಲಕ ನಟಿ ವೈಷ್ಣವಿ ಗೌಡ ಅವರು ಈ ಬಗ್ಗೆ ಕ್ಲಾರಿಟಿ ಕೊಟ್ಟಿದ್ದಾರೆ.
ಈ ಬಗ್ಗೆ ತಮ್ಮ ಯೂಟ್ಯೂಬ್ ಚಾನೆಲ್ ನಲ್ಲಿ ನಟಿ ವೈಷ್ಣವಿ ಗೌಡ ಮಾತನಾಡಿ, ನಮ್ಮ ಸಂಪ್ರದಾಯಕ್ಕೆ ಗೌರವ ಹಾಗೂ ಬೆಲೆ ಕೊಡೋದಿಲ್ವಾ? ತಾಳಿ ಬೇಡ ಅಂದ್ರೆ ಯಾಕೆ ಮದುವೆ ಆದ್ರಿ ಅಂತ ಕೆಲವರು ಕೇಳಿದ್ದಾರೆ. ಹುಡುಗನ ಮನೆಯಲ್ಲಿ ಯಾವ ಪದ್ಧತಿ ಇದೆಯೋ ಅದನ್ನೇ ಹುಡುಗಿ ಕೂಡ ಅನುಸರಿಸುತ್ತಾಳೆ. ಅದೇ ಪದ್ಧತಿ ರೂಢಿಯಲ್ಲಿದೆ. ಹೀಗಾಗಿ ಹುಡುಗನ ಪದ್ಧತಿಯಂತೆ ನಮ್ಮ ಮದುವೆ ಆಯ್ತು. ತಾಳಿ ಹಾಕಿಲ್ಲ ಅಂತ ಕೆಲವರು ಕೇಳಿದ್ದೀರಾ. ನನ್ನ ಅತ್ತೆ ಕೂಡ ಇದುವರೆಗೂ ತಾಳಿ ಹಾಕಿಲ್ಲ. ತಾಳಿ ಹಾಕುವ ಪದ್ಧತಿ ನನ್ನ ಗಂಡನ ಮನೆ ಕಡೆ ಇಲ್ಲ ಹೀಗಾಗಿ ನಾನು ತಾಳಿ ಹಾಕಿಲ್ಲ ನಮ್ಮಲ್ಲಿ ಆ ಪದ್ದತಿ ಇಲ್ಲ ಎಂದು ವೈಷ್ಣವಿ ಗೌಡ ಸ್ಪಷ್ಟಪಡಿಸಿದ್ದಾರೆ.
ತಾಳಿ ಹಾಕೋದು ಅವರ ಪದ್ಧತಿಯಲ್ಲಿ ಇಲ್ಲ, ಅದು ನಮಗೆ ಮುಖ್ಯ ಅಲ್ಲ . ಮೂಗು ಚುಚ್ಚಿಸಿರಬೇಕು, ಕೈಯಲ್ಲಿ ಗಾಜಿನ ಬಳೆ ಇರಬೇಕು, ಕೈಯಲ್ಲಿ ಒಂದು ದಾರ ಇರಬೇಕು, ಕಾಲುಂಗುರ ಹಾಕಿರಬೇಕು. ನಮ್ಮ ಸಂಪ್ರದಾಯ, ಸಂಸ್ಕೃತಿ ಬಗ್ಗೆ ನನಗೆ ಗೌರವವಿದೆ. ಆದರೆ ಅವರ ಮನೆಯಲ್ಲಿ ಈ ಪದ್ಧತಿ ಇಲ್ಲ ಎಂದು ಹಾಕುತ್ತಿಲ್ಲ ಅಷ್ಟೇ ಎಂದು ವೈಷ್ಣವಿ ಗೌಡ ಹೇಳಿದ್ದಾರೆ.
ಮೆಟ್ರಿಮೋನಿಯಲ್ಲಿ ವೈಷ್ಣವಿ ಗೌಡ ಹಾಗೂ ಅನುಕೂಲ್ ಮಿಶ್ರಾ ಪರಿಚಯ ಆಗಿದೆ. ಒಂದು ವರ್ಷದ ಹಿಂದೆಯೇ ಇವರ ಮದುವೆ ಫಿಕ್ಸ್ ಆಗಿತ್ತು. ಈ ವರ್ಷ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡು, ಮದುವೆ ಆಗಿದ್ದಾರೆ. ಅನುಕೂಲ್ ಮಿಶ್ರಾ ಅವರು ಇಂಡಿಯನ್ ಆರ್ಮಿಯಲ್ಲಿ ಲೆಫ್ಟಿನೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಇನ್ನು ನಟಿ ವೈಷ್ಣವಿ ಗೌಡ ಅವರು ಅನುಕೂಲ್ ಮಿಶ್ರಾ ಜೊತೆಗಿನ ಟ್ರಿಪ್‌ನಲ್ಲಿ ಒಂದಷ್ಟು ಸ್ಥಳಗಳಿಗೆ ಭೇಟಿಯ ಬಗ್ಗೆ ತಮ್ಮ ಯೂಟ್ಯೂಬ್ ನಲ್ಲಿ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಕುಲದೇವತೆಯ ದರ್ಶನ ಮಾಡಿದ್ದಾರೆ. ಇನ್ನು ಟ್ರಿಪ್ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.












Click it and Unblock the Notifications