ಉಮಾಪತಿ ಕೊಲೆಗೂ ‘ಡಿ-ಗ್ಯಾಂಗ್’ ಸ್ಕೆಚ್? ಟೇಬಲ್ ಮೇಲೆ ಗನ್ ಇಟ್ಟು ಉಮಾಪತಿಗೆ ಹೇಳಿದ್ದೇನು?

ದರ್ಶನ್ ವಿರುದ್ಧ ಈಗ ಕೊಲೆ ಆರೋಪ ಕೇಳಿಬಂದಿರುವ ಸಮಯದಲ್ಲೇ ಕನ್ನಡದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಸ್ಫೋಟಕ ಆರೋಪ ಮಾಡಿದ್ದಾರೆ. ಅದು ಏನೇಂದರೆ ಉಮಾಪತಿ ಎದುರು ಗನ್ ಇಟ್ಟಿದ್ದ 'ಡಿ-ಗ್ಯಾಂಗ್' ಹೇಳಿದ್ದು ಏನು ಗೊತ್ತಾ? ನಿರ್ಮಾಪಕ ಉಮಾಪತಿ ಅಂದು ಜೀವ ಉಳಿಸಿಕೊಂಡಿದ್ದು ಹೇಗೆ? ದರ್ಶನ್ ವಿರುದ್ಧದ ಸ್ಫೋಟಕ ಆರೋಪದ ಕುರಿತು ತಿಳಿಯಲು ಮುಂದೆ ಓದಿ.

ದರ್ಶನ್ & ಉಮಾಪತಿ ನಡುವೆ 2 ವರ್ಷಗಳ ಹಿಂದೆ ದೊಡ್ಡ ಜಗಳ ಆಗಿತ್ತು. ಆಗ ನಿರ್ಮಾಪಕ ಉಮಾಪತಿಗೆ ನಟ ದರ್ಶನ್ & ಗ್ಯಾಂಗ್ ಬೆದರಿಕೆ ಹಾಕಿತ್ತು ಎಂಬ ಆರೋಪ ಕೇಳಿಬಂದಿತ್ತು. ಆದ್ರೆ ಈ ಕುರಿತು ಉಮಾಪತಿ ಯಾವುದೇ ಗುಟ್ಟು ಬಿಟ್ಟುಕೊಡದೆ ಸೈಲೆಂಟ್ ಆಗಿದ್ದರು. ಈಗ ಆ ದಿನ, ಮೈಸೂರಿನ ಕ್ಲಬ್ ಒಂದರಲ್ಲಿ ತಮ್ಮ ಮೇಲೆ ದರ್ಶನ್ & ಗ್ಯಾಂಗ್ ಹೇಗೆಲ್ಲಾ ದೌರ್ಜನ್ಯ ಮಾಡಿತ್ತು? ಎಂಬ ಭಯಾನಕ ಸತ್ಯವನ್ನು ಹೊರ ಹಾಕಿದ್ದಾರೆ ಕನ್ನಡದ ನಿರ್ಮಾಪಕ ಉಮಾಪತಿ. ಹಾಗಾದ್ರೆ, ನಿರ್ಮಾಪಕ ಉಮಾಪತಿ ಎದುರಿಗೆ ಟೇಬಲ್ ಮೇಲೆ ಗನ್ ಇಟ್ಟಿದ್ದ ದರ್ಶನ್ & ಗ್ಯಾಂಗ್ ಏನಂತ ಹೇಳಿತ್ತು ಗೊತ್ತಾ? ನಿರ್ಮಾಪಕ ಉಮಾಪತಿ ಈಗ ದರ್ಶನ್ & ಗ್ಯಾಂಗ್ ಕುರಿತು ಹೇಳುತ್ತಿರುವುದು ಏನು? ಮುಂದೆ ಓದಿ.

This Is What Kannada Producer Umapathy Srinivas Said About Darshan Thoogudeepa

ದರ್ಶನ್ VS ಉಮಾಪತಿ ಕದನ!

ಕನ್ನಡ ಸಿನಿಮಾ ಪ್ರೇಮಿಗಳ ಮನಸ್ಸು ಗೆದ್ದ ಮಾತ್ರಕ್ಕೆ ದರ್ಶನ್ ಏನು ಮಾಡಿದರೂ ನಡೆಯುತ್ತೆ, ನನ್ನ ಯಾರು ಪ್ರಶ್ನೆ ಮಾಡೋದು? ಅಂತಾ ತಲೆಯಲ್ಲಿ ತುಂಬಿಕೊಂಡಿದ್ದ ಅಂತಾ ಕಾಣುತ್ತದೆ. ಇದೇ ಕಾರಣಕ್ಕೆ ಆತನ ವಿರುದ್ಧ ಹತ್ತಾರು ಕೇಸ್ ದಾಖಲಾಗಿವೆ. ಅದರಲ್ಲೂ, ದರ್ಶನ್ ವಿರುದ್ಧ ಹಲ್ಲೆ ಆರೋಪದ ಕೇಸ್ ಜಾಸ್ತಿ ಇದೆ. ಅದೇ ರೀತಿ ಕನ್ನಡದ ನಿರ್ಮಾಪಕ ಉಮಾಪತಿಗೆ ಕೂಡ, ನಟ ದರ್ಶನ್ ತೂಗುದೀಪ್ & ಗ್ಯಾಂಗ್ ಗನ್ ತೋರಿಸಿ ಬೆದರಿಕೆ ಹಾಕಿತ್ತು ಎಂಬ ಸ್ಫೋಟಕ ವಿಚಾರ ಈಗ ಬಯಲಾಗಿದೆ. ಹಾಗಾದ್ರೆ ನಿಜಕ್ಕೂ ಉಮಾಪತಿ ಹತ್ಯೆಗೆ ದರ್ಶನ್ & ಗ್ಯಾಂಗ್ ಸ್ಕೆಚ್ ಹಾಕಿತ್ತಾ? ಉಮಾಪತಿ ಹೇಳಿದ್ದೇನು? ಬನ್ನಿ ತಿಳಿಯೋಣ.

ಅಟ್ಟಹಾಸ ಮೆರೆದ ದರ್ಶನ್ & ಗ್ಯಾಂಗ್?

ದರ್ಶನ್ ವಿರುದ್ಧ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗಂಭೀರ ಆರೋಪ ಮಾಡಿದ್ದಾರೆ. ಅದು ಏನು ಅಂದ್ರೆ, ಉಮಾಪತಿ ಶ್ರೀನಿವಾಸ್ ವಿರುದ್ಧ 'ರಾಬರ್ಟ್' ಸಿನಿಮಾ ಬಿಡುಗಡೆ ನಂತರ ಇದೇ ದರ್ಶನ್ & ಗ್ಯಾಂಗ್ ರೊಚ್ಚಿಗೆದ್ದಿತ್ತು. ಅಲ್ಲದೆ ಉಮಾಪತಿಗೆ ಎಚ್ಚರಿಕೆ ಕೂಡ ನೀಡಿತ್ತು ಎನ್ನುವ ಆರೋಪ ಕೇಳಿಬಂದಿದೆ. ಮೈಸೂರಿನ ಖಾಸಗಿ ಕ್ಲಬ್‌ಗೆ ಉಮಾಪತಿಯನ್ನ ಕರೆಸಿಕೊಂಡಿದ್ದ ಇದೇ ದರ್ಶನ್ & ಗ್ಯಾಂಗ್ ಸದಸ್ಯರು, ನಿರ್ಮಾಪಕ ಉಮಾಪತಿ ಎದುರಲ್ಲಿ ಇದ್ದ ಟೇಬಲ್ ಮೇಲೆಯೇ ಗನ್ ಇಟ್ಟು ಬೆದರಿಕೆ ಕೂಡ ಹಾಕಿತ್ತು ಎಂಬ ಆರೋಪ ಕೇಳಿಬಂದಿದೆ. ಆದರೆ ಆ ಸಮಯದಲ್ಲಿ ನಾನು ಬದುಕಿ ಬರ್ತೀನಿ ಎಂಬ ನಂಬಿಕೆಯೇ ಇರಲಿಲ್ಲ ಎಂದು ಉಮಾಪತಿ ಈಗ ಹೇಳಿದ್ದಾರೆ.

ದರ್ಶನ್ ಮನುಷ್ಯನ ರಾಕ್ಷಸನಾ...

ಕರ್ನಾಟಕದಲ್ಲಿ ದರ್ಶನ್ ದೊಡ್ಡ ಹೆಸರು ಮಾಡಿದ್ದಾನೆ. ನಟನೆ ಮೂಲಕ ಕೋಟ್ಯಂತರ ಫ್ಯಾನ್ಸ್ ಸಂಪಾದನೆ ಮಾಡಿದ್ದಾನೆ. ಇದೇ ಕಾರಣಕ್ಕೆ ದರ್ಶನ್‌ಗೆ ದೊಡ್ಡ ಜವಾಬ್ದಾರಿ ಇತ್ತು. ಆದರೆ ಹೀಗೆ ಜವಾಬ್ದಾರಿ ಸ್ಥಾನದಲ್ಲಿ ಇದ್ದು, ಸರಿಯಾಗಿ ನಡೆದುಕೊಳ್ಳಬೇಕಿದ್ದ ಈತ ಕೆಟ್ಟದಾಗಿ ನಡೆದುಕೊಂಡು ಈಗ ಕಂಬಿ ಎಣಿಸುತ್ತಿದ್ದಾನೆ. ಅದರಲ್ಲೂ ನಟ ದರ್ಶನ್ ಕೊಲೆ ಆರೋಪದಲ್ಲಿ ಅರೆಸ್ಟ್ ಆಗುವ ಮೊದಲು, ಆತ ಮಾಡಿದ ಕೃತ್ಯದ ವಿಡಿಯೋಗಳನ್ನ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ವೀಕ್ಷಣೆ ಮಾಡಿದ್ದರಂತೆ. ಖುದ್ದು ಬೆಂಗಳೂರು ಕಮೀಷನರ್ ದರ್ಶನ್ ಅಟ್ಟಹಾಸದ ವಿಡಿಯೋ ತೋರಿಸಿ, ಸಿಎಂ ಬಳಿ ಅನುಮತಿ ಪಡೆದು ಕೊಲೆ ಆರೋಪಿ ದರ್ಶನ್ ಬಂಧಿಸಿದ್ದರಂತೆ.

118 ಸಾಕ್ಷ್ಯ ಸಂಗ್ರಹಿಸಿದ ಪೊಲೀಸರು?

ದರ್ಶನ್ ತೂಗುದೀಪ್ & ಗ್ಯಾಂಗ್ ವಿರುದ್ಧ ಕೇಳಿಬಂದಿರುವ ಕೊಲೆ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸರು ಖಡಕ್ ತನಿಖೆ ನಡೆಸುತ್ತಿದ್ದಾರೆ. ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಈ ವಿಚಾರದಲ್ಲಿ ಕರ್ನಾಟಕದ ಪೊಲೀಸರಿಗೆ ಫುಲ್ ಪವರ್ ಕೊಟ್ಟಿದ್ದು, ಯಾವುದೇ ರೀತಿಯ ಒತ್ತಡಗಳಿಗೆ ಮಣಿಯಬೇಡಿ ಎಂದಿದ್ದಾರೆ. ಹೀಗಾಗಿ ಕೇಸ್ ಕೂಡ ತುಂಬಾ ಸ್ಟ್ರಾಂಗ್ ಆಗುತ್ತಿದೆ. ಅದರಲ್ಲೂ ದರ್ಶನ್ & ಗ್ಯಾಂಗ್ ವಿರುದ್ಧ ಈವರೆಗೂ ಸುಮಾರು 118 ಸಾಕ್ಷ್ಯ ಸಂಗ್ರಹವಾಗಿದೆ ಎಂಬ ಸುದ್ದಿ ತಿಳಿದುಬಂದಿದೆ. ಹೀಗಾಗಿ ಕೇಸ್ ಕೂಡ ತುಂಬಾ ಸ್ಟ್ರಾಂಗ್ ಆಗುತ್ತಿದ್ದು, ಈಗ ದರ್ಶನ್‌ಗೆ ಜೈಲೂಟ ಗ್ಯಾರಂಟಿ ಆಗಿದೆ.

ಡಿ-ಗ್ಯಾಂಗ್‌ಗೆ ಮಾನಸಿಕ ವಿಕೃತಿ?

ದರ್ಶನ್ & ಗ್ಯಾಂಗ್ ಸೇರಿ ರೇಣುಕಾಸ್ವಾಮಿ ಕೊಲೆ ಮಾಡಿರುವ ರೀತಿ ನೋಡಿದರೆ, ಈ ಗ್ಯಾಂಗ್ ಮಾನಸಿಕ ವಿಕೃತಿ ಹೊಂದಿದೆಯಾ? ಎಂಬ ಅನುಮಾನ ಮೂಡಿದೆ ಯಾಕಂದ್ರೆ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆಯಲ್ಲಿ ಭಯಾನಕ ಸಂಗತಿ ಗೊತ್ತಾಗಿದೆ. ರೇಣುಕಾಸ್ವಾಮಿ ಚರ್ಮಕ್ಕೆ, ತಲೆಗೆ ಹಾಗೂ ಮರ್ಮಾಂಗಕ್ಕೆ ಭಾರಿ ಗಾಯ ಮಾಡಲಾಗಿದೆ. ಹಾಗೇ ಮರ್ಮಾಂಗದ ಚರ್ಮ ಸುಲಿದು ಟಾರ್ಚರ್ ಕೊಟ್ಟಿದ್ದಾರೆ. ಈ ಮೂಲಕ ವಿಕೃತವಾಗಿ ರೇಣುಕಾಸ್ವಾಮಿ ಕೊಲೆ ಮಾಡಿದೆ ಈ ವಿಕೃತರ ಗ್ಯಾಂಗ್. ಹೀಗಾಗಿಯೇ ಪೊಲೀಸರು ಈ ಗ್ಯಾಂಗ್‌ಗೆ ವಿಕೃತ ಮನಸ್ಥಿತಿ ಇದೆಯಾ? ಎಂಬ ಆಂಗಲ್ ಮೂಲಕವೂ ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ಇವರಿಂದ ಇನ್ನೂ ಯಾರು, ಯಾರೆಲ್ಲಾ ಸಮಸ್ಯೆ ಎದುರಿಸಿದ್ದಾರೆ? ಅನ್ನೋದನ್ನ ಕೂಡ ಪರಿಶೀಲನೆ ಮಾಡಲಾಗುತ್ತಿದೆ.

ಮುಂದೆ ಐತೆ ಮಾರಿ ಹಬ್ಬ?

ದರ್ಶನ್ & ಗ್ಯಾಂಗ್ ರೇಣುಕಾಸ್ವಾಮಿ ಕೊಲೆ ಮಾಡಿದೆ ಅಂತಾ ಗಂಭೀರ ಆರೋಪವು ಕೇಳಿಬಂದ ನಂತರದಲ್ಲಿ ಇಡೀ ಗ್ಯಾಂಗ್‌ನ ಜೀಪ್‌ಗೆ ಎತ್ತಾಕಿ ಪೊಲೀಸ್ ಠಾಣೆಗೆ ಕರೆತಂದ ಪೊಲೀಸರು, ಕಳೆದ 10 ದಿನದಿಂದ ನಿರಂತರ ವಿಚಾರಣೆ ನಡೆಸುತ್ತಿದ್ದಾರೆ. ದರ್ಶನ್ ನೇರವಾಗಿ ರೇಣುಕಾಸ್ವಾಮಿಯ ಕೊಲೆಯಲ್ಲಿ ಭಾಗಿ ಆಗಿದ್ದಾರೆ ಎಂಬ ಆರೋಪಗಳ ನಡುವೆ, ಈಗಾಗಲೇ ಎರಡು ಬಾರಿ ದರ್ಶನ್ & ಗ್ಯಾಂಗ್‌ನ ವಶಕ್ಕೆ ಪಡೆದಿದ್ದ ಪೊಲೀಸರು, ವಿಚಾರಣೆ ನಡೆಸಿದ್ದಾರೆ. ಇದೀಗ ಮತ್ತೊಮ್ಮೆ, ದರ್ಶನ್ ಮತ್ತು ಸಹಚರರ ವಶಕ್ಕೆ ಪಡೆದು ವಿಚಾರಣೆ ನಡೆಸಲು ಮುಂದಾಗಿದ್ದಾರೆ. ಕೋರ್ಟ್ ಕೂಡ ಪೊಲೀಸರ ಮನವಿ ಪುರಸ್ಕರಿಸಿ, ದರ್ಶನ್ & ಗ್ಯಾಂಗ್‌ನ ಪೊಲೀಸರ ವಶಕ್ಕೆ ನೀಡಲಾಗಿದೆ.

ದರ್ಶನ್ ಅಲಿಯಾಸ್ ರೌಡಿ ದರ್ಶನ್?

2011ರ ಸಮಯದಲ್ಲಿ ತನ್ನ ಹೆಂಡತಿ ಮೇಲೆಯೇ ದರ್ಶನ್ ರಾಕ್ಷಸನ ರೀತಿ ಹಲ್ಲೆ ಮಾಡಿರುವುದು ಸೇರಿದಂತೆ, ಪದೇ ಪದೇ ದರ್ಶನ್ & ಗ್ಯಾಂಗ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿವೆ. ಹೀಗೆ ಕನ್ನಡ ನಾಡಿನಲ್ಲಿ ತನ್ನ ಪಟಾಲಂ ಕಟ್ಟಿಕೊಂಡು ದರ್ಶನ್ & ಗ್ಯಾಂಗ್ ಜನರಿಗೆ ಹಾಗೂ ಹಲವು ನಿರ್ಮಾಪಕ, ನಿರ್ದೇಶಕರಿಗೆ ಟಾರ್ಚರ್ ಮಾಡಿದೆ ಎಂಬ ಆರೋಪ ಇದೆ. ಹೀಗಾಗಿಯೇ ಇದೀಗ, ದರ್ಶನ್ ಮತ್ತು ಆತನ ಸಹಚರರ ವಿರುದ್ಧ ರೌಡಿಶೀಟ್ ತೆರೆಯಲು ಕನ್ನಡ ನಾಡಿನ ಪೊಲೀಸರು ಅಂತಿಮ ಹಂತದ ಸಿದ್ಧತೆ ನಡೆಸಿದ್ದಾರೆ. ಈ ಹಿನ್ನೆಲೆ ಎಲ್ಲಾ ದಾಖಲೆಗಳನ್ನ ಸಂಗ್ರಹಿಸುವ ಮೂಲಕ, ದರ್ಶನ್ & ಗ್ಯಾಂಗ್‌ಗೆ ಶಾಕ್ ನೀಡಲು ಸಜ್ಜಾಗಿದ್ದಾರೆ ಎನ್ನಲಾಗಿದೆ.

ದರ್ಶನ್ ಮುಂದಿನ ಸಿನಿಮಾ 'ಪರಪ್ಪನ ಅಗ್ರಹಾರ'?

ಕಲಾಸಿಪಾಳ್ಯ, ಮೆಜೆಸ್ಟಿಕ್ ಅಂತಾ ಬೆಂಗಳೂರಿನ ಏರಿಯಾಗಳ ಹೆಸರನ್ನು ಇಟ್ಟುಕೊಂಡೇ ಭಾರಿ ಭರ್ಜರಿ ಸಿನಿಮಾ ನೀಡಿದ್ದ ದರ್ಶನ್, ಈಗ 'ಪರಪ್ಪನ ಅಗ್ರಹಾರ' ಸೇರಿದ್ದಾರೆ. ದರ್ಶನ್ ತಾನೇ ಮಾಡಿಕೊಂಡ ಎಡವಟ್ಟಿಗೆ & ದುರಹಂಕಾರಕ್ಕೆ ಇಂದು ವಿಲವಿಲ ಒದ್ದಾಡುವ ಪರಿಸ್ಥಿತಿ ಬಂದಿದೆ ಅಂತಾರೆ ಅವರ ಸ್ನೇಹಿತರು. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಭಾರಿ ದೊಡ್ಡ ಚರ್ಚೆ ನಡೆಯುತ್ತಿದೆ. ಹೀಗೆ ದರ್ಶನ್ ಕೊಲೆ ಆರೋಪದಲ್ಲಿ ಸೆಂಟ್ರಲ್ ಜೈಲ್ 'ಪರಪ್ಪನ ಅಗ್ರಹಾರ'ಕ್ಕೆ ಹೋಗಿದ್ದು, ಕೊಲೆ ಆರೋಪಿ ದರ್ಶನ್ ಮುಂದಿನ ಸಿನಿಮಾ 'ಪರಪ್ಪನ ಅಗ್ರಹಾರ' ಆಗಿರಲಿದೆ ಅಂತಿದ್ದಾರೆ ದರ್ಶನ್ ವಿರೋಧಿಗಳು. ಹೀಗಾಗಿ ದರ್ಶನ್ & ಅವರ ವಿರೋಧಿಗಳ ಫೈಟಿಂಗ್‌ಗೆ ಭರ್ಜರಿ ತಿರುವು ಸಿಕ್ಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+