ದರ್ಶನ್ ಮನುಷ್ಯನ ರಾಕ್ಷಸನಾ ಎಂದ ಸಿಎಂ ಸಿದ್ದರಾಮಯ್ಯ: ಹಾಗಾದ್ರೆ ಮುಗಿದೇ ಹೋಯ್ತಾ ಮಾಜಿ ‘ಡಿ-ಬಾಸ್‌’ ಅಟ್ಟಹಾಸದ ಕಥೆ?

ನಟ ದರ್ಶನ್ ಅಲಿಯಾಸ್ ದರ್ಶನ್ ನಾಯ್ಡು & ಗ್ಯಾಂಗ್ ರೇಣುಕಾಸ್ವಾಮಿ ಕೊಲೆ ಮಾಡಿರುವ ಕುರಿತು ಕ್ಷಣಕ್ಕೊಂದು ಸತ್ಯ ಬಯಲಾಗುತ್ತಿದೆ. ಅದರಲ್ಲೂ ಕೊಲೆಯಾದ ರೇಣುಕಾಸ್ವಾಮಿ ಮೇಲೆ ದರ್ಶನ್ ಹಲ್ಲೆ ಮಾಡುವ ವಿಡಿಯೋ ಇದ್ದು, ಅದನ್ನ ನೋಡಿದ ಸಿಎಂ ಸಿದ್ದರಾಮಯ್ಯ ಏನ್ ಹೇಳಿದ್ದಾರಂತೆ ಗೊತ್ತಾ? ದರ್ಶನ್ ರಾಕ್ಷಸ ಕೃತ್ಯದ ಬಗ್ಗೆ ತಿಳಿಯಲು ಮುಂದೆ ಓದಿ.

ಹೌದು, ದರ್ಶನ್ ತಾನೊಬ್ಬನೇ ಹೀರೋ ಯಾರಿಗೆ ಬೇಕಾದರೂ ಹೊಡೆಯಬಹುದು ಅಂತಾನೇ ಅಂದುಕೊಂಡಿದ್ದ ಅನಿಸುತ್ತೆ. ಯಾಕಂದ್ರೆ ಸ್ವತಃ ದರ್ಶನ್ ಅಭಿಮಾನಿಗಳೇ ಇವನಿಂದ ಏಟನ್ನು ತಿಂದಿದ್ದಾರೆ. ಕಂಡ ಕಂಡವರ ಮೇಲೆ ಕೈಮಾಡುವ ಈ ದರ್ಶನ್ ಗಟ್ಟಿಯಾಗಿ ಇರುವವರನ್ನ ಕಂಡ್ರೆ ಓಡಿ ಹೋಗೋದು ಗ್ಯಾರಂಟಿ ಅಂತಾರೆ ಅವನ ವಿರೋಧಿಗಳು. ಈಗ ವಿರೋಧಿಗಳ ಮಾತು ಬಿಡಿ ಸ್ವತಃ ದರ್ಶನ್ ಜೊತೆಗೆ ಅತ್ಯುತ್ತಮ ಸಂಬಂಧ ಹೊಂದಿದ್ದ ಸಿಎಂ ಸಿದ್ದರಾಮಯ್ಯ ಕೂಡ ನಟ & ಕೊಲೆ ಆರೋಪಿ ದರ್ಶನ್ ಕೃತ್ಯ ಕಂಡು ರೊಚ್ಚಿಗೆದ್ದಿದ್ದಾರಂತೆ.

This Is What Karnataka CM Siddaramaiah Said About Darshan Thoogudeepa

ದರ್ಶನ್ ಮನುಷ್ಯನ ರಾಕ್ಷಸನಾ...

ಕರ್ನಾಟಕದಲ್ಲಿ ದರ್ಶನ್ ದೊಡ್ಡ ಹೆಸರು ಮಾಡಿದ್ದಾನೆ. ನಟನೆ ಮೂಲಕ ಕೋಟ್ಯಂತರ ಫ್ಯಾನ್ಸ್ ಸಂಪಾದನೆ ಮಾಡಿದ್ದಾನೆ. ಇದೇ ಕಾರಣಕ್ಕೆ ದರ್ಶನ್‌ಗೆ ದೊಡ್ಡ ಜವಾಬ್ದಾರಿ ಇತ್ತು. ಆದರೆ ಹೀಗೆ ಜವಾಬ್ದಾರಿ ಸ್ಥಾನದಲ್ಲಿ ಇದ್ದು, ಸರಿಯಾಗಿ ನಡೆದುಕೊಳ್ಳಬೇಕಿದ್ದ ಈತ ಕೆಟ್ಟದಾಗಿ ನಡೆದುಕೊಂಡು ಈಗ ಕಂಬಿ ಎಣಿಸುತ್ತಿದ್ದಾನೆ.

ಅದರಲ್ಲೂ ನಟ ದರ್ಶನ್ ಕೊಲೆ ಆರೋಪದಲ್ಲಿ ಅರೆಸ್ಟ್ ಆಗುವ ಮೊದಲು, ಆತ ಮಾಡಿದ ಕೃತ್ಯದ ವಿಡಿಯೋಗಳನ್ನ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ವೀಕ್ಷಣೆ ಮಾಡಿದ್ದರಂತೆ. ಖುದ್ದು ಬೆಂಗಳೂರು ಕಮೀಷನರ್ ದರ್ಶನ್ ಅಟ್ಟಹಾಸದ ವಿಡಿಯೋ ತೋರಿಸಿ, ಸಿಎಂ ಬಳಿ ಅನುಮತಿ ಪಡೆದು ಕೊಲೆ ಆರೋಪಿ ದರ್ಶನ್ ನಾಯ್ಡು ಬಂಧಿಸಿದ್ದರಂತೆ.

ತಪ್ಪಾಯ್ತು ನನ್ನ ಬಿಟ್ಟುಬಿಡಿ!

ಹೀಗೆ ದರ್ಶನ್ ನಾಯ್ಡು ಅಮಾಯಕರ ಮೇಲೆ ಅಟ್ಟಹಾಸ ಮೆರೆಯುತ್ತಿರುವ ವಿಡಿಯೋ ನೋಡಿ ಒಂದು ಕ್ಷಣ ಸಿಎಂ ಸಿದ್ದರಾಮಯ್ಯ ಕೂಡ ಬೆಚ್ಚಿಬಿದ್ದು, 'ದರ್ಶನ್ ಮನುಷ್ಯನ ರಾಕ್ಷಸನಾ' ಅಂತಾ ಪ್ರಶ್ನೆ ಕೂಡ ಮಾಡಿದ್ದರಂತೆ. ಆ ನಂತರವೇ ಖಾಕಿ ಪಡೆ ಮೈಸೂರಿಗೆ ನುಗ್ಗಿ ಕೊಲೆಯ ಆರೋಪಿ ದರ್ಶನ್‌ನ ಅರೆಸ್ಟ್ ಮಾಡಿ ಕರೆದುಕೊಂಡು ಬಂದಿದೆ.

ಹೀಗೆ ಪೊಲೀಸರ ವಿಚಾರಣೆ ವೇಳೆ ಸಖತ್ ಡ್ರಾಮಾ ಮಾಡುತ್ತಿದ್ದ ದರ್ಶನ್ ನಿನ್ನೆ ಸತ್ಯ ಕಕ್ಕಿದ್ದಾನೆ ಎನ್ನಲಾಗಿದೆ. ಅಲ್ಲದೆ ಪೊಲೀಸರ ಕಾಲು ಹಿಡಿದು ತಪ್ಪಾಯ್ತು ನನ್ನ ಬಿಟ್ಟುಬಿಡಿ ಎಂದಿದ್ದಾನಂತೆ ಕೊಲೆ ಆರೋಪಿ ದರ್ಶನ್ ನಾಯ್ಡು.

118 ಸಾಕ್ಷ್ಯ ಸಂಗ್ರಹಿಸಿದ ಪೊಲೀಸರು?

ದರ್ಶನ್ ತೂಗುದೀಪ್ & ಗ್ಯಾಂಗ್ ವಿರುದ್ಧ ಕೇಳಿಬಂದಿರುವ ಕೊಲೆ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸರು ಖಡಕ್ ತನಿಖೆ ನಡೆಸುತ್ತಿದ್ದಾರೆ. ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಈ ವಿಚಾರದಲ್ಲಿ ಕರ್ನಾಟಕದ ಪೊಲೀಸರಿಗೆ ಫುಲ್ ಪವರ್ ಕೊಟ್ಟಿದ್ದು, ಯಾವುದೇ ರೀತಿಯ ಒತ್ತಡಗಳಿಗೆ ಮಣಿಯಬೇಡಿ ಎಂದಿದ್ದಾರೆ. ಹೀಗಾಗಿ ಕೇಸ್ ಕೂಡ ತುಂಬಾ ಸ್ಟ್ರಾಂಗ್ ಆಗುತ್ತಿದೆ. ಅದರಲ್ಲೂ ದರ್ಶನ್ & ಗ್ಯಾಂಗ್ ವಿರುದ್ಧ ಈವರೆಗೂ ಸುಮಾರು 118 ಸಾಕ್ಷ್ಯ ಸಂಗ್ರಹವಾಗಿದೆ ಎಂಬ ಸುದ್ದಿ ತಿಳಿದುಬಂದಿದೆ. ಹೀಗಾಗಿ ಕೇಸ್ ಕೂಡ ತುಂಬಾ ಸ್ಟ್ರಾಂಗ್ ಆಗುತ್ತಿದ್ದು, ಈಗ ದರ್ಶನ್‌ಗೆ ಜೈಲೂಟ ಗ್ಯಾರಂಟಿ ಆಗಿದೆ.

ಡಿ-ಗ್ಯಾಂಗ್‌ಗೆ ಮಾನಸಿಕ ವಿಕೃತಿ?

ದರ್ಶನ್ & ಗ್ಯಾಂಗ್ ಸೇರಿ ರೇಣುಕಾಸ್ವಾಮಿ ಕೊಲೆ ಮಾಡಿರುವ ರೀತಿ ನೋಡಿದರೆ, ಈ ಗ್ಯಾಂಗ್ ಮಾನಸಿಕ ವಿಕೃತಿ ಹೊಂದಿದೆಯಾ? ಎಂಬ ಅನುಮಾನ ಮೂಡಿದೆ ಯಾಕಂದ್ರೆ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆಯಲ್ಲಿ ಭಯಾನಕ ಸಂಗತಿ ಗೊತ್ತಾಗಿದೆ. ರೇಣುಕಾಸ್ವಾಮಿ ಚರ್ಮಕ್ಕೆ, ತಲೆಗೆ ಹಾಗೂ ಮರ್ಮಾಂಗಕ್ಕೆ ಭಾರಿ ಗಾಯ ಮಾಡಲಾಗಿದೆ. ಹಾಗೇ ಮರ್ಮಾಂಗದ ಚರ್ಮ ಸುಲಿದು ಟಾರ್ಚರ್ ಕೊಟ್ಟಿದ್ದಾರೆ. ಈ ಮೂಲಕ ವಿಕೃತವಾಗಿ ರೇಣುಕಾಸ್ವಾಮಿ ಕೊಲೆ ಮಾಡಿದೆ ಈ ವಿಕೃತರ ಗ್ಯಾಂಗ್. ಹೀಗಾಗಿಯೇ ಪೊಲೀಸರು ಈ ಗ್ಯಾಂಗ್‌ಗೆ ವಿಕೃತ ಮನಸ್ಥಿತಿ ಇದೆಯಾ? ಎಂಬ ಆಂಗಲ್ ಮೂಲಕವೂ ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ಇವರಿಂದ ಇನ್ನೂ ಯಾರು, ಯಾರೆಲ್ಲಾ ಸಮಸ್ಯೆ ಎದುರಿಸಿದ್ದಾರೆ? ಅನ್ನೋದನ್ನ ಕೂಡ ಪರಿಶೀಲನೆ ಮಾಡಲಾಗುತ್ತಿದೆ.

ಮುಂದೆ ಐತೆ ಮಾರಿ ಹಬ್ಬ?

ದರ್ಶನ್ & ಗ್ಯಾಂಗ್ ರೇಣುಕಾಸ್ವಾಮಿ ಕೊಲೆ ಮಾಡಿದೆ ಅಂತಾ ಗಂಭೀರ ಆರೋಪವು ಕೇಳಿಬಂದ ನಂತರದಲ್ಲಿ ಇಡೀ ಗ್ಯಾಂಗ್‌ನ ಜೀಪ್‌ಗೆ ಎತ್ತಾಕಿ ಪೊಲೀಸ್ ಠಾಣೆಗೆ ಕರೆತಂದ ಪೊಲೀಸರು, ಕಳೆದ 10 ದಿನದಿಂದ ನಿರಂತರ ವಿಚಾರಣೆ ನಡೆಸುತ್ತಿದ್ದಾರೆ. ದರ್ಶನ್ ನೇರವಾಗಿ ರೇಣುಕಾಸ್ವಾಮಿಯ ಕೊಲೆಯಲ್ಲಿ ಭಾಗಿ ಆಗಿದ್ದಾರೆ ಎಂಬ ಆರೋಪಗಳ ನಡುವೆ, ಈಗಾಗಲೇ ಎರಡು ಬಾರಿ ದರ್ಶನ್ & ಗ್ಯಾಂಗ್‌ನ ವಶಕ್ಕೆ ಪಡೆದಿದ್ದ ಪೊಲೀಸರು, ವಿಚಾರಣೆ ನಡೆಸಿದ್ದಾರೆ. ಇದೀಗ ಮತ್ತೊಮ್ಮೆ, ದರ್ಶನ್ ಮತ್ತು ಸಹಚರರ ವಶಕ್ಕೆ ಪಡೆದು ವಿಚಾರಣೆ ನಡೆಸಲು ಮುಂದಾಗಿದ್ದಾರೆ. ಕೋರ್ಟ್ ಕೂಡ ಪೊಲೀಸರ ಮನವಿ ಪುರಸ್ಕರಿಸಿ, ದರ್ಶನ್ & ಗ್ಯಾಂಗ್‌ನ ಪೊಲೀಸರ ವಶಕ್ಕೆ ನೀಡಲಾಗಿದೆ.

ದರ್ಶನ್ ಅಲಿಯಾಸ್ ರೌಡಿ ದರ್ಶನ್?

2011ರ ಸಮಯದಲ್ಲಿ ತನ್ನ ಹೆಂಡತಿ ಮೇಲೆಯೇ ದರ್ಶನ್ ರಾಕ್ಷಸನ ರೀತಿ ಹಲ್ಲೆ ಮಾಡಿರುವುದು ಸೇರಿದಂತೆ, ಪದೇ ಪದೇ ದರ್ಶನ್ & ಗ್ಯಾಂಗ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿವೆ. ಹೀಗೆ ಕನ್ನಡ ನಾಡಿನಲ್ಲಿ ತನ್ನ ಪಟಾಲಂ ಕಟ್ಟಿಕೊಂಡು ದರ್ಶನ್ & ಗ್ಯಾಂಗ್ ಜನರಿಗೆ ಹಾಗೂ ಹಲವು ನಿರ್ಮಾಪಕ, ನಿರ್ದೇಶಕರಿಗೆ ಟಾರ್ಚರ್ ಮಾಡಿದೆ ಎಂಬ ಆರೋಪ ಇದೆ. ಹೀಗಾಗಿಯೇ ಇದೀಗ, ದರ್ಶನ್ ಮತ್ತು ಆತನ ಸಹಚರರ ವಿರುದ್ಧ ರೌಡಿಶೀಟ್ ತೆರೆಯಲು ಕನ್ನಡ ನಾಡಿನ ಪೊಲೀಸರು ಅಂತಿಮ ಹಂತದ ಸಿದ್ಧತೆ ನಡೆಸಿದ್ದಾರೆ. ಈ ಹಿನ್ನೆಲೆ ಎಲ್ಲಾ ದಾಖಲೆಗಳನ್ನ ಸಂಗ್ರಹಿಸುವ ಮೂಲಕ, ದರ್ಶನ್ & ಗ್ಯಾಂಗ್‌ಗೆ ಶಾಕ್ ನೀಡಲು ಸಜ್ಜಾಗಿದ್ದಾರೆ ಎನ್ನಲಾಗಿದೆ.

ದರ್ಶನ್ ಮುಂದಿನ ಸಿನಿಮಾ 'ಪರಪ್ಪನ ಅಗ್ರಹಾರ'?

ಕಲಾಸಿಪಾಳ್ಯ, ಮೆಜೆಸ್ಟಿಕ್ ಅಂತಾ ಬೆಂಗಳೂರಿನ ಏರಿಯಾಗಳ ಹೆಸರನ್ನು ಇಟ್ಟುಕೊಂಡೇ ಭಾರಿ ಭರ್ಜರಿ ಸಿನಿಮಾ ನೀಡಿದ್ದ ದರ್ಶನ್, ಈಗ 'ಪರಪ್ಪನ ಅಗ್ರಹಾರ' ಸೇರಿದ್ದಾರೆ. ದರ್ಶನ್ ತಾನೇ ಮಾಡಿಕೊಂಡ ಎಡವಟ್ಟಿಗೆ & ದುರಹಂಕಾರಕ್ಕೆ ಇಂದು ವಿಲವಿಲ ಒದ್ದಾಡುವ ಪರಿಸ್ಥಿತಿ ಬಂದಿದೆ ಅಂತಾರೆ ಅವರ ಸ್ನೇಹಿತರು. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಭಾರಿ ದೊಡ್ಡ ಚರ್ಚೆ ನಡೆಯುತ್ತಿದೆ. ಹೀಗೆ ದರ್ಶನ್ ಕೊಲೆ ಆರೋಪದಲ್ಲಿ ಸೆಂಟ್ರಲ್ ಜೈಲ್ 'ಪರಪ್ಪನ ಅಗ್ರಹಾರ'ಕ್ಕೆ ಹೋಗಿದ್ದು, ಕೊಲೆ ಆರೋಪಿ ದರ್ಶನ್ ಮುಂದಿನ ಸಿನಿಮಾ 'ಪರಪ್ಪನ ಅಗ್ರಹಾರ' ಆಗಿರಲಿದೆ ಅಂತಿದ್ದಾರೆ ದರ್ಶನ್ ವಿರೋಧಿಗಳು. ಹೀಗಾಗಿ ದರ್ಶನ್ & ಅವರ ವಿರೋಧಿಗಳ ಫೈಟಿಂಗ್‌ಗೆ ಭರ್ಜರಿ ತಿರುವು ಸಿಕ್ಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+