ದರ್ಶನ್ ವಿಲವಿಲ.. ಪ್ರಿಯತಮೆ ನೋಡಲು ಪರದಾಡುತ್ತಿರುವ ದರ್ಶನ್?

ದರ್ಶನ್ ತಮ್ಮ ಸಿನಿಮಾಗಳಲ್ಲಿ ಹೇಳಿರುವ ರೀತಿ ಹೆಣ್ಣು ಮಕ್ಕಳಿಗಾಗಿ ಏನು ಬೇಕಾದರೂ ಮಾಡ್ತಾರೆ, ಹಾಗೇ ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ. ಇದೇ ಕಾರಣಕ್ಕೆ ದರ್ಶನ್ ಅವರ ಪ್ರಿಯತಮೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿ ಹತ್ಯೆಯನ್ನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇಂತಹ ಪರಿಸ್ಥಿತಿಯಲ್ಲಿ ಮತ್ತೊಂದು ಸಮಸ್ಯೆಗೆ ದರ್ಶನ್ ಸಿಲುಕಿದ್ದು ಪ್ರಿಯತಮೆ ನೋಡಲು ಆಗದೆ ಮಾಜಿ 'ಡಿ-ಬಾಸ್' ವಿಲವಿಲ ಒದ್ದಾಡುತ್ತಿದ್ದಾರೆ ಎಂಬ ಬಗ್ಗೆ ಚರ್ಚೆ ಶುರುವಾಗಿದೆ.

ಹೌದು, ದರ್ಶನ್ & ಪವಿತ್ರಾ ಗೌಡ ಸಂಬಂಧದ ಬಗ್ಗೆ ಈಗ ಹೆಚ್ಚು ಗುಟ್ಟು ಉಳಿದಿಲ್ಲ. ಹಾಗೂ ಇತ್ತೀಚೆಗೆ ಪವಿತ್ರಾ ಗೌಡ ದರ್ಶನ್‌ಗೆ 2ನೇ ಹೆಂಡತಿ ಎಂಬ ಬಗ್ಗೆಯೂ ಆರೋಪಗಳು ಕೇಳಿಬಂದವು. ಇಷ್ಟೆಲ್ಲದರ ನಡುವೆ ವಿಜಯಲಕ್ಷ್ಮೀ ದರ್ಶನ್ ರೊಚ್ಚಿಗೆದ್ದು, ಮಾಧ್ಯಮಗಳ ವಿರುದ್ಧ ಯುದ್ಧವನ್ನೇ ಸಾರಿದ್ದಾರೆ. ಹೀಗಿದ್ದಾಗ ಪವಿತ್ರ ಗೌಡ ಪರಪ್ಪನ ಅಗ್ರಹಾರದಲ್ಲಿ ಇದೀಗ ಮುದ್ದೆ ಮುರಿಯುತ್ತಿದ್ರೆ ಮತ್ತೊಂದು ಕಡೆ ದರ್ಶನ್ ಮಾತ್ರ ಪೊಲೀಸರ ಕಸ್ಟಡಿಯಲ್ಲಿ ಒದ್ದಾಡುತ್ತಿದ್ದಾನೆ. ಈ ಹಿನ್ನೆಲೆ ತನ್ನ ಪ್ರಿಯತಮೆಯ ಮುಖ ನೋಡಲು ಆಗದೆ ದರ್ಶನ್ ಒದ್ದಾಡುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ ಹಾಗೇ ಈ ಬಗ್ಗೆ ಚರ್ಚೆ ಸಿಕ್ಕಾಪಟ್ಟೆ ಜೋರಾಗಿದೆ.

This Is Why The Kannada Actor Darshan Thoogudeepa Is Suffering

ಕೊಲೆ ಆರೋಪಿಯಾದರೂ ಪ್ರಿಯತಮೆ ದೂರ!

ದರ್ಶನ್ ಈಗ ಕೊಲೆ ಆರೋಪ ಹೊತ್ತಿರುವುದು ತನ್ನ ಪ್ರಿಯತಮೆ ಪವಿತ್ರಾ ಗೌಡಾಳ ಕಾರಣಕ್ಕೆ, ಎನ್ನುವ ಗಂಭೀರ ಆರೋಪ ಇದೆ. ಈ ಪವಿತ್ರಾ ಕಾರಣಕ್ಕೆ ರೇಣುಕಾಸ್ವಾಮಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ ದರ್ಶನ್ ಎಂಬ ಆರೋಪಗಳ ನಡುವೆ, ನಿನ್ನೆ ನ್ಯಾಯಾಲಯ ದರ್ಶನ್ & ಆತನ ಕೆಲವು ಸಹಚರರನ್ನ ಪೊಲೀಸರ ಕಸ್ಟಡಿಗೆ ನೀಡಿತ್ತು. ಆದರೆ ದರ್ಶನ್ ಪ್ರಿಯತಮೆ ಪವಿತ್ರಾ ಗೌಡಾಳನ್ನ ಸೆಂಟ್ರಲ್ ಜೈಲಿಗೆ ಕಳುಹಿಸಿದೆ. ಹೀಗಾಗಿ ಪವಿತ್ರಾ ಗೌಡ ಜೈಲಿನಲ್ಲಿ ಒಂಟಿಯಾಗಿದ್ದು, ಈ ಕಡೆ ದರ್ಶನ್‌ಗೆ ಕೂಡ ಒಂಟಿತನ ಕಾಡುತ್ತಿದೆ ಅಂತಿದ್ದಾರೆ ಮಾಜಿ 'ಡಿ-ಬಾಸ್' ವಿರೋಧಿಗಳು.

ದರ್ಶನ್ ಅಲಿಯಾಸ್ ರೌಡಿ ದರ್ಶನ್?

2011ರ ಸಮಯದಲ್ಲಿ ತನ್ನ ಹೆಂಡತಿ ಮೇಲೆಯೇ ದರ್ಶನ್ ರಾಕ್ಷಸನ ರೀತಿ ಹಲ್ಲೆ ಮಾಡಿರುವುದು ಸೇರಿದಂತೆ, ಪದೇ ಪದೇ ದರ್ಶನ್ & ಗ್ಯಾಂಗ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿವೆ. ಹೀಗೆ ಕನ್ನಡ ನಾಡಿನಲ್ಲಿ ತನ್ನ ಪಟಾಲಂ ಕಟ್ಟಿಕೊಂಡು ದರ್ಶನ್ & ಗ್ಯಾಂಗ್ ಜನರಿಗೆ ಹಾಗೂ ಹಲವು ನಿರ್ಮಾಪಕ, ನಿರ್ದೇಶಕರಿಗೆ ಟಾರ್ಚರ್ ಮಾಡಿದೆ ಎಂಬ ಆರೋಪ ಇದೆ. ಹೀಗಾಗಿಯೇ ಇದೀಗ, ದರ್ಶನ್ ಮತ್ತು ಆತನ ಸಹಚರರ ವಿರುದ್ಧ ರೌಡಿಶೀಟ್ ತೆರೆಯಲು ಕನ್ನಡ ನಾಡಿನ ಪೊಲೀಸರು ಅಂತಿಮ ಹಂತದ ಸಿದ್ಧತೆ ನಡೆಸಿದ್ದಾರೆ. ಈ ಹಿನ್ನೆಲೆ ಎಲ್ಲಾ ದಾಖಲೆಗಳನ್ನ ಸಂಗ್ರಹಿಸುವ ಮೂಲಕ, ದರ್ಶನ್ & ಗ್ಯಾಂಗ್‌ಗೆ ಶಾಕ್ ನೀಡಲು ಸಜ್ಜಾಗಿದ್ದಾರೆ ಎನ್ನಲಾಗಿದೆ.

118 ಸಾಕ್ಷ್ಯ ಸಂಗ್ರಹಿಸಿದ ಪೊಲೀಸರು?

ದರ್ಶನ್ ತೂಗುದೀಪ್ & ಗ್ಯಾಂಗ್ ವಿರುದ್ಧ ಕೇಳಿಬಂದಿರುವ ಕೊಲೆ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸರು ಖಡಕ್ ತನಿಖೆ ನಡೆಸುತ್ತಿದ್ದಾರೆ. ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಈ ವಿಚಾರದಲ್ಲಿ ಕರ್ನಾಟಕದ ಪೊಲೀಸರಿಗೆ ಫುಲ್ ಪವರ್ ಕೊಟ್ಟಿದ್ದು, ಯಾವುದೇ ರೀತಿಯ ಒತ್ತಡಗಳಿಗೆ ಮಣಿಯಬೇಡಿ ಎಂದಿದ್ದಾರೆ. ಹೀಗಾಗಿ ಕೇಸ್ ಕೂಡ ತುಂಬಾ ಸ್ಟ್ರಾಂಗ್ ಆಗುತ್ತಿದೆ. ಅದರಲ್ಲೂ ದರ್ಶನ್ & ಗ್ಯಾಂಗ್ ವಿರುದ್ಧ ಈವರೆಗೂ ಸುಮಾರು 118 ಸಾಕ್ಷ್ಯ ಸಂಗ್ರಹವಾಗಿದೆ ಎಂಬ ಸುದ್ದಿ ತಿಳಿದುಬಂದಿದೆ. ಹೀಗಾಗಿ ಕೇಸ್ ಕೂಡ ತುಂಬಾ ಸ್ಟ್ರಾಂಗ್ ಆಗುತ್ತಿದೆ.

ದರ್ಶನ್ ಮುಂದಿನ ಸಿನಿಮಾ 'ಪರಪ್ಪನ ಅಗ್ರಹಾರ'?

ಕಲಾಸಿಪಾಳ್ಯ, ಮೆಜೆಸ್ಟಿಕ್ ಅಂತಾ ಬೆಂಗಳೂರಿನ ಏರಿಯಾಗಳ ಹೆಸರನ್ನು ಇಟ್ಟುಕೊಂಡೇ ಭಾರಿ ಭರ್ಜರಿ ಸಿನಿಮಾ ನೀಡಿದ್ದ ದರ್ಶನ್, ಈಗ 'ಪರಪ್ಪನ ಅಗ್ರಹಾರ' ಸೇರಿದ್ದಾರೆ. ದರ್ಶನ್ ತಾನೇ ಮಾಡಿಕೊಂಡ ಎಡವಟ್ಟಿಗೆ & ದುರಹಂಕಾರಕ್ಕೆ ಇಂದು ವಿಲವಿಲ ಒದ್ದಾಡುವ ಪರಿಸ್ಥಿತಿ ಬಂದಿದೆ ಅಂತಾರೆ ಅವರ ಸ್ನೇಹಿತರು. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಭಾರಿ ದೊಡ್ಡ ಚರ್ಚೆ ನಡೆಯುತ್ತಿದೆ. ಹೀಗೆ ದರ್ಶನ್ ಕೊಲೆ ಆರೋಪದಲ್ಲಿ ಸೆಂಟ್ರಲ್ ಜೈಲ್ 'ಪರಪ್ಪನ ಅಗ್ರಹಾರ'ಕ್ಕೆ ಹೋಗಿದ್ದು, ಕೊಲೆ ಆರೋಪಿ ದರ್ಶನ್ ಮುಂದಿನ ಸಿನಿಮಾ 'ಪರಪ್ಪನ ಅಗ್ರಹಾರ' ಆಗಿರಲಿದೆ ಅಂತಿದ್ದಾರೆ ದರ್ಶನ್ ವಿರೋಧಿಗಳು. ಹೀಗಾಗಿ ದರ್ಶನ್ & ಅವರ ವಿರೋಧಿಗಳ ಫೈಟಿಂಗ್‌ಗೆ ಭರ್ಜರಿ ತಿರುವು ಸಿಕ್ಕಿದೆ.

ದರ್ಶನ್ ಬೆನ್ನಿಗೆ ನಾಗ & ಸೈಕಲ್ ರವಿ?

ನಟ ದರ್ಶನ್ ಇದೀಗ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ A2 ಆರೋಪಿ ಆಗಿದ್ದಾರೆ ಅಲ್ಲದೆ ಕಂಬಿ ಎಣಿಸುತ್ತಿದ್ದಾರೆ. ಹೀಗಿದ್ದಾಗಲೇ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ನಟ ದರ್ಶನ್‌ಗೆ ಸೇವೆ ಮಾಡಲು ಅಂದ್ರೆ ಆತಿಥ್ಯ ನೀಡಲು ಬೆಂಗಳೂರಿನ ರೌಡಿ ಶೀಟರ್ ನಾಗ & ಸೈಕಲ್ ರವಿ ನಡುವೆ ಇದೀಗ ಭರ್ಜರಿಯಾಗಿ ಪೈಪೋಟಿ ನಡೆಯುತ್ತಿದೆ ಎನ್ನಲಾಗಿದೆ.

ಈ ಬಗ್ಗೆ ಸ್ಫೋಟಕ ಹಾಗೂ ಭಯಾನಕ ಮಾಹಿತಿಯನ್ನ ಕನ್ನಡದ ಟಿವಿ ಮಾಧ್ಯಮಗಳು ವರದಿ ಮಾಡಿವೆ. ಅಲ್ಲದೆ ಇದೇ ಸಮಯದಲ್ಲಿ ರೌಡಿ ಶೀಟರ್ ನಾಗ ಜೈಲಿನಲ್ಲೇ ಇದ್ದು, ಜೈಲಿನಿಂದ ಹೊರಗೆ ಇರುವ ಸೈಕಲ್ ರವಿ ತನ್ನ ಹುಡುಗರ ಮೂಲಕ ದರ್ಶನ್‌ಗೆ ಆತಿಥ್ಯ ನೀಡಲು ಮುಂದಾಗಿರುವ ಆರೋಪ ಕೇಳಿಬಂದಿದೆ. ಈ ಸುದ್ದಿ ಇದೀಗ ಸಂಚಲನವನ್ನೇ ಸೃಷ್ಟಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+