Channe Gowda Death: ಸ್ಯಾಂಡಲ್ ವುಡ್ ಹಿರಿಯ ನಟ ಗಡ್ದಪ್ಪ ನಿಧನ!
ಮಂಡ್ಯ, ನವೆಂಬರ್12: ಕನ್ನಡದ ತಿಥಿ ಸಿನಿಮಾ ಮೂಲಕ ಖ್ಯಾತಿಯಾಗಿದ್ದ ಗಡ್ಡಪ್ಪ ನಿಧನರಾಗಿದ್ದಾರೆ. ತಿಥಿ ಸಿನಿಮಾ ಮೂಲಕ ಸಿಕ್ಕಾಪಟ್ಟೆ ಜನಪ್ರಿಯತೆ ಪಡೆದ ಗ್ರಾಮೀಣ ಪ್ರತಿಭೆ ಗಡ್ಡಪ್ಪ ಅವರು ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು, ಗಡ್ಡಪ್ಪ ಅಲಿಯಾಸ್ ಚನ್ನೇಗೌಡ ವಿಧಿವಶರಾಗಿದ್ದಾರೆ. ಗಡ್ಡಪ್ಪ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ಕೆಲ ದಿನಗಳಿಂದ ಚನ್ನೇಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಚನ್ನೇಗೌಡ ಇಂದು (ನವೆಂಬರ್ 12) ಕೊನೆಯುಸಿರೆಳೆದಿದ್ದಾರೆ.
ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ ಕಾಯಿಲೆ, ಕೆಮ್ಮು ಮತ್ತು ಉಬ್ಬಸ, ಶ್ರವಣದೋಷ ಮತ್ತು ಇತರ ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳು ಇದ್ದವು. ಗಡ್ಡಪ್ಪ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೆ ಇಹಲೋಕದ ಪ್ರಯಾಣ ಮುಗಿಸಿದ್ದಾರೆ.

ಗಡ್ಡಪ್ಪ ಅವರು ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದವರು. ಬೆಂಗಳೂರು-ಮೈಸೂರು ಹೆದ್ದಾರಿಯಿಂದ ಪಾಂಡವಪುರಕ್ಕೆ ಹೋಗುವ ರಸ್ತೆಯಲ್ಲಿ ಈ ಊರು ಸಿಗುತ್ತದೆ. ಗಡ್ಡಪ್ಪ ಅಲಿಯಾಸ್ ಚನ್ನೇಗೌಡ 'ತಿಥಿ' ಸಿನಿಮಾದಲ್ಲಿ ಗಡ್ಡಪ್ಪ ಹೆಸರಿನ ಪಾತ್ರ ಮಾಡಿ ಫೇಮಸ್ ಆದರು. ಎಲ್ಲರೂ ಅವರನ್ನು ಗಡ್ಡಪ್ಪ ಎಂದೇ ಗುರುತಿಸುತ್ತಿದ್ದರು. ಗಡ್ಡಪ್ಪ ಪಾತ್ರವನ್ನು ನೋಡಿ ಅನೇಕರು ಮೂಕವಿಸ್ಮಿತರಾದರು. ಅವರು ತಮ್ಮ ಸಹಜ ನಟನಾ ಕೌಶಲ್ಯದಿಂದ ಜನಪ್ರಿಯರಾದರು. ಆ ಬಳಿಕ ಹಲವು ಸಿನಿಮಾಗಳಲ್ಲಿ ಚನ್ನೇಗೌಡ ಅವರು ನಟಿಸಿದ್ದರು. ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದರೂ ಆರ್ಥಿಕವಾಗಿ ಸೃಧಡರಾಗಲು ಸಾಧ್ಯವಾಗಲೇ ಇಲ್ಲ. ಇದೀಗ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಗಡ್ಡಪ್ಪ ನಿಧನಕ್ಕೆ ವಿಜಯೇಂದ್ರ ಸಂತಾಪ
ಮಂಡ್ಯ ಜಿಲ್ಲೆಯ ಗಡ್ಡಪ್ಪ ಖ್ಯಾತಿಯ ನಟ ಚನ್ನೇಗೌಡ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಸುಮಾರು 10 ವರ್ಷಗಳ ಹಿಂದೆ ತೆರೆಗೆ ಬಂದ 'ತಿಥಿ' ಚಿತ್ರ ಜನಮೆಚ್ಚುಗೆ ಪಡೆದಿತ್ತು; ಹಲವು ಪ್ರಶಸ್ತಿಗಳನ್ನು ಕೂಡ ಬಾಚಿಕೊಂಡಿತ್ತು. ಈ ಸಿನಿಮಾದಲ್ಲಿ ಚನ್ನೇಗೌಡ ಅವರು ಗಡ್ಡಪ್ಪ ಹೆಸರಿನ ಪಾತ್ರ ಮಾಡಿದ್ದರು. ಬಳಿಕ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದರು ಎಂದು ತಿಳಿಸಿದ್ದಾರೆ.
ಮೃತರ ಕುಟುಂಬದವರಿಗೆ, ಬಂಧುಮಿತ್ರರು ಮತ್ತು ಅಭಿಮಾನಿಗಳಿಗೆ ಅಗಲುವಿಕೆಯನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ಇನ್ನೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿ, ರಾಷ್ಟ್ರ ಪ್ರಶಸ್ತಿ ವಿಜೇತ 'ತಿಥಿ' ಚಲನಚಿತ್ರದಲ್ಲಿ ಗಡ್ಡಪ್ಪನ ಪಾತ್ರದಲ್ಲಿ ಅಮೋಘವಾಗಿ ನಟಿಸಿದ್ದ ಮಂಡ್ಯ ತಾಲೂಕಿನ ನೊದೆಕೊಪ್ಪಲು ಗ್ರಾಮದ ಚನ್ನೇಗೌಡ ಅವರು ನಿಧನರಾದ ಸುದ್ದಿ ತಿಳಿದು ಬಹಳ ದುಃಖವಾಯಿತು. ಜತೆಗೆ 'ತರ್ಲೆ ವಿಲೇಜ್', 'ಜಾನಿ ಮೇರಾ ನಾಮ್', 'ಹಳ್ಳಿ ಪಂಚಾಯಿತಿ' ಸೇರಿ ಸುಮಾರು ಎಂಟು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications