Year Ender 2025: ಅತಿ ಹೆಚ್ಚು ಸಂಭಾವನೆ ಪಡೆಯುವ ಟಾಪ್ 10 ನಟರು
ಈ ವರ್ಷ ಭಾರತೀಯ ಚಿತ್ರರಂಗದಲ್ಲಿ ಹಲವು ನಟರ ಸಿನಿಮಾಗಳು ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿವೆ. ಸ್ಟಾರ್ ನಟರ ಸಂಭಾವನೆ ಕೂಡ ಗಗನಕ್ಕೇರಿದೆ. ಒಂದೇ ಸಿನಿಮಾಗೆ ನೂರಾರು ಕೋಟಿ ಸಂಭಾವನೆ ಪಡೆಯುವ ಮೂಲಕ ನಟರು ಹುಬ್ಬೇರಿಸಿದ್ದಾರೆ. ಅದರಂತೆ ಭಾರತದಲ್ಲಿ ಈ ವರ್ಷ ಅತಿ ಹೆಚ್ಚು ಸಂಭಾವನೆ ಪಡೆದ ಟಾಪ್ ನಟರ ವಿವರ ಇಲ್ಲಿದೆ..
1. ಅಲ್ಲು ಅರ್ಜುನ್: ಸದ್ಯ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರ ಪೈಕಿ ತೆಲುಗು ಚಿತ್ರರಂಗದ ಅಲ್ಲು ಅರ್ಜುನ್ ಮೊದಲ ಸ್ಥಾನದಲ್ಲಿದ್ದಾರೆ. ಈಗ ಅವರ ನಿವ್ವಳ ಮೌಲ್ಯ ಸುಮಾರು 350 ಕೋಟಿ ರೂಪಾಯಿ ಎನ್ನಲಾಗಿದೆ. ಪ್ರತಿ ಸಿನಿಮಾಗೆ ₹100-125 ಕೋಟಿ ಸಂಭಾವನೆ ಪಡೆಯುತ್ತಾರೆ ಎನ್ನಲಾಗಿದ್ದು, ವರದಿಗಳ ಪ್ರಕಾರ "ಪುಷ್ಪ-2" ಸಿನಿಮಾದಲ್ಲಿ ಅಲ್ಲು ಅರ್ಜುನ್ ತಮ್ಮ ಪಾತ್ರಕ್ಕಾಗಿ 300 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಇದು ಅವರನ್ನು ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟನನ್ನಾಗಿ ಮಾಡಿದೆ. ಸದ್ಯ ಇವರೇ ಸಂಭಾವನೆಯಲ್ಲಿ ನಂಬರ್ ಒನ್ ನಟ ಎನಿಸಿಕೊಂಡಿದ್ದಾರೆ.

2. ದಳಪತಿ ವಿಜಯ್: ತಮಿಳು ನಟ ದಳಪತಿ ವಿಜಯ್ ಅತಿ ಹೆಚ್ಚು ಸಂಭಾವನೆ ಪಡೆಯುವ ಟಾಪ್ ನಟರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ವರದಿಗಳ ಪ್ರಕಾರ ಈ ನಟ ಪ್ರತಿ ಚಿತ್ರಕ್ಕೂ 130-285 ಕೋಟಿಯವರೆಗೆ ಸಂಭಾವನೆ ಪಡೆಯುತ್ತಾರೆ. ಅವರು ಇತ್ತೀಚೆಗೆ ತಮ್ಮದೇ ಆದ ರಾಜಕೀಯ ಪಕ್ಷವನ್ನು ಸಹ ಪ್ರಾರಂಭಿಸಿದ್ದಾರೆ. ಒಂದೇ ಸಿನಿಮಾಗೆ ನೂರಾರು ಕೋಟಿ ಸಂಭಾವನೆ ಪಡೆಯುವ ಮೂಲಕ ಟಾಪ್ ನಟನ ಸ್ಥಾನ ಪಡೆದಿದ್ದಾರೆ.
3. ಶಾರುಖ್ ಖಾನ್: ಬಾಲಿವುಡ್ ನಟ ಶಾರುಖ್ ಖಾನ್ ಸಂಭಾವನೆಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಕಿಂಗ್ ಖಾನ್ ಪ್ರತಿ ಚಿತ್ರಕ್ಕೆ ₹90-110 ಕೋಟಿ ರೂಪಾಯಿವರೆಗೆ ಸಂಭಾವನೆ ಪಡೆಯುತ್ತಾರೆ ಎಂದು ವರದಿಯಾಗಿದೆ. ಇವರ ಸಿನಿಮಾಗಳು ಸಾವಿರಾರು ಕೋಟಿ ಕಲೆಕ್ಷನ್ ಮಾಡಿದ್ದು, ಬಾಲಿವುಡ್‌ನ ಅತ್ಯಂತ ಯಶಸ್ವಿ ನಟರಲ್ಲಿ ಒಬ್ಬರೆಂದು ಪ್ರಸಿದ್ಧರಾಗಿದ್ದಾರೆ.
4. ರಜನಿಕಾಂತ್: ದಕ್ಷಿಣ ಭಾರತದ ಸಿನಿಮಾಗಳಲ್ಲಿ ಅತಿ ದೊಡ್ಡ ಸೂಪರ್‌ಸ್ಟಾರ್ ಹಾಗೂ ಭಾರತದ ಅತ್ಯಂತ ಶ್ರೀಮಂತ ನಟ ರಜನಿಕಾಂತ್. ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಾಗಿದ್ದು, ಒಂದು ಚಿತ್ರಕ್ಕೆ 125 ಕೋಟಿಯಿಂದ 270 ಕೋಟಿ ರೂಪಾಯಿವರೆಗೆ ಸಂಭಾವನೆ ಪಡೆಯುತ್ತಾರೆ. ಅವರ ಇತ್ತೀಚಿನ ಚಿತ್ರ ವೆಟ್ಟೈಯನ್‌ನಲ್ಲಿ ತಮ್ಮ ಪಾತ್ರಕ್ಕಾಗಿ 125 ಕೋಟಿ ರೂ.ಗಳನ್ನು ಗಳಿಸಿದ್ದಾರೆ.
5. ಆಮೀರ್ ಖಾನ್: ಆಮೀರ್ ಖಾನ್ ಬಾಲಿವುಡ್‌ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಾಗಿದ್ದಾರೆ. ಒಂದು ಸಿನಿಮಾಗೆ ಸುಮಾರು 75 ರಿಂದ 80 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಅಲ್ಲದೆ ಸಿನಿಮಾ ಗಳಿಸುವ ಲಾಭದ ದೊಡ್ಡ ಮೊತ್ತದಲ್ಲಿ ಲಾಭ ಪಡೆಯುತ್ತಾರೆ. ದೇಶದ ಅತ್ಯಂತ ಯಶಸ್ವಿ ಮತ್ತು ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರಾಗಿದ್ದಾರೆ.
6. ಪ್ರಭಾಸ್: ಪ್ರಭಾಸ್ ಇಂದು ಭಾರತದ ಅತ್ಯಂತ ಜನಪ್ರಿಯ ನಟರಲ್ಲಿ ಒಬ್ಬರು. ಡಾರ್ಲಿಂಗ್, ಬಾಹುಬಲಿ ಖ್ಯಾತಿಯ ನಟ ಒಂದು ಚಿತ್ರಕ್ಕೆ 100 ಕೋಟಿಯಿಂದ 200 ಕೋಟಿ ರೂಪಾಯಿಗಳವರೆಗೆ ಸಂಭಾವನೆ ಪಡೆಯುತ್ತಾರೆ. ರಾಜಮೌಳಿ ನಿರ್ದೇಶನದ ಬಾಹುಬಲಿ ಬಳಿಕ ಅವರ ಸಂಪತ್ತು ಹಾಗೂ ನಿವ್ವಳ ಮೌಲ್ಯವು ಸುಮಾರು ಶೇ 94ರಷ್ಟು ಏರಿಕೆಯಾಗಿದೆ.

7. ಅಜಿತ್ ಕುಮಾರ್: ತಮಿಳು ನಟ ಅಜಿತ್ ಕುಮಾರ್ ಭಾರತದ ಅತಿ ಹೆಚ್ಚು ಸಂಭಾವನೆ ಪಡೆಯುವ ಟಾಪ್ 10 ನಟರ ಪಟ್ಟಿಯಲ್ಲಿದ್ದಾರೆ. ಅವರ ಚಲನಚಿತ್ರಗಳು ಚಿತ್ರಮಂದಿರಗಳು ಮತ್ತು ಬಾಕ್ಸಾಫೀಸ್‌ನಲ್ಲಿ ಅತ್ಯುತ್ತಮ ಗಳಿಕೆ ಮಾಡುತ್ತವೆ. ಸಿನಿಮಾಗಳಲ್ಲಿ ತಮ್ಮ ಪಾತ್ರಕ್ಕಾಗಿ ಅವರು ಸುಮಾರು 105 ಕೋಟಿ ರೂ.ನಿಂದ 165 ಕೋಟಿ ರೂ.ವರೆಗೆ ಸಂಭಾವನೆ ಪಡೆಯುತ್ತಾರೆ.
8. ಸಲ್ಮಾನ್ ಖಾನ್: 1988ರಲ್ಲಿ ತಮ್ಮ ನಟನಾ ವೃತ್ತಿ ಆರಂಭಿಸಿದ ಸಲ್ಮಾನ್ ಖಾನ್ ಸುಮಾರು 2,900 ಕೋಟಿ ರೂ. ನಿವ್ವಳ ಮೌಲ್ಯವನ್ನು ಹೊಂದಿದ್ದಾರೆ. ಒಂದು ಸಿನಿಮಾಗೆ ಇವರ ಸಂಭಾವನೆ ₹100-120 ಕೋಟಿ ರೂಪಾಯಿ ಎಂದು ವರದಿಯಾಗಿದೆ.
9. ಕಮಲ್ ಹಾಸನ್: 1960ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಟ ಕಮಲ್ ಹಾಸನ್, ದಕ್ಷಿಣ ಭಾರತದ ಪ್ರಸಿದ್ಧ ನಟ. ಅವರು ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ನಟಿಸಿದ್ದಾರೆ. ಅವರ ನಿವ್ವಳ ಮೌಲ್ಯ ಸುಮಾರು 150 ಕೋಟಿ ರೂಪಾಯಿ ಎಂದು ವರದಿಯಾಗಿದೆ.
10. ಅಕ್ಷಯ್ ಕುಮಾರ್: ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟ ಅಕ್ಷಯ್ ಕುಮಾರ್ ಒಬ್ಬರು. ಇವರು ಸುಮಾರು 2,500 ಕೋಟಿ ರೂ. ನಿವ್ವಳ ಮೌಲ್ಯವನ್ನು ಹೊಂದಿದ್ದಾರೆ.
-
CBFC: "ಜನ ನಾಯಗನ್" ಸಿನಿಮಾ ಲೀಕ್ ವರದಿ ಆಧಾರರಹಿತ: ಆರೋಪಗಳಿಗೆ ಸಿಬಿಎಫ್ಸಿ ಸ್ಪಷ್ಟನೆ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್












Click it and Unblock the Notifications