Trisha Krishnan: ಬ್ರೇಕಪ್ ಸುದ್ದಿ ನಡುವೆ ಅಚ್ಚರಿಯ ಬರಹ, ಫೋಟೋ ಹಂಚಿಕೊಂಡ ನಟಿ ತ್ರಿಶಾ - ವಿಜಯ್ ಬಗ್ಗೆ ಹೇಳಿದ್ದೇನು

Trisha Krishnan: ತಮಿಳುನಾಡಿನ ದಳಪತಿ ಹಾಗೂ ಮುಖ್ಯಮಂತ್ರಿ ವಿಜಯ್ ಮತ್ತು ತ್ರಿಶಾ ನಡುವೆ ಬ್ರೇಕ್‌ಅಪ್ ಆಗಿದೆ ಎನ್ನುವ ವಿಷಯ ಭಾರೀ ಚರ್ಚೆಗೆ ಕಾರಣವಾಗಿತ್ತು. ವಿಜಯ್ ಅವರನ್ನು ಸೋಶಿಯಲ್ ಮೀಡಿಯಾ ಹಾಗೂ ಇನ್‌ಸ್ಟಾಗ್ರಾಮ್‌ನಲ್ಲಿ ತ್ರಿಶಾ ಅವರು ಅನ್‌ಫಾಲೋ ಮಾಡಿದ್ದಾರೆ ಎಂದೇ ಹೇಳಲಾಗಿತ್ತು. ಆದರೆ, ಇದರ ನಡುವೆಯೇ ತ್ರಿಶಾ ಅವರು ಶಾಕ್ ಕೊಟ್ಟಿದ್ದಾರೆ. ನಟ ಹಾಗೂ ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಅವರೊಂದಿಗೆ ಅದ್ಧೂರಿ ಸಂಭ್ರಮಾಚರಣೆ ನಡೆಸಿದ್ದಾರೆ. ತಮಿಳುನಾಡಿನ ರಾಜಕೀಯಕ್ಕೆ ಪ್ರವೇಶಿಸಿದಾಗಿನಿಂದಲೂ ನಟ, ಮುಖ್ಯಮಂತ್ರಿ ವಿಜಯ್ ಹಾಗೂ ನಟಿ ತ್ರಿಶಾ ಅವರ ನಡುವಿನ ಆತ್ಮೀಯತೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಚರ್ಚೆಗಳು ಕಾವು ಪಡೆದುಕೊಳ್ಳುವಂತೆಯೇ ತ್ರಿಶಾ ಹಾಗೂ ವಿಜಯ್ ನಡೆದುಕೊಂಡಿದ್ದರು. ಆದರೆ, ಮಂಗಳವಾರ ಬೆಳಿಗ್ಗೆಯಿಂದಲೇ ಇಬ್ಬರು ಬ್ರೇಕ್ಅಪ್ ಮಾಡಿಕೊಂಡಿದ್ದಾರೆಯೇ ಎನ್ನುವ ಚರ್ಚೆ ಜೋರಾಗಿತ್ತು. ಆದರೆ ಸಂಜೆ ವೇಳೆಗೆ ನಟಿ ತ್ರಿಶಾ ಅವರು ಮಾಡಿದ ಪೋಸ್ಟ್‌ ಎಲ್ಲ ಅನುಮಾನಗಳಿಗೂ ತೆರೆ ಎಳೆದಂತೆ ಆಗಿದೆ.

ತಮಿಳು ನಟ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿ ಆಗಿ ಅಧಿಕಾರ ನಡೆಸುತ್ತಿದ್ದಾರೆ. ಜೂನ್ 22ರಂದು ವಿಜಯ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ದಳಪತಿ ರಾಜಕೀಯ ಜೀವನದ ಜೊತೆ ಜೊತೆಗೆ ವೈಯಕ್ತಿಕ ಜೀವನ ಕೂಡ ಭಾರೀ ಸದ್ದು ಮಾಡುತ್ತಿದ್ದಾರೆ. ರಾಜಕೀಯದಲ್ಲಿ ಅವರು ಭಾರೀ ಪ್ರಗತಿ ಸಾಧಿಸಿ, ಒಂದೇ ಪ್ರಯತ್ನದಲ್ಲಿಯೇ ಯಶಸ್ಸು ಸಾಧಿಸಿದ್ದಾರೆ. ಒಂದೇ ಪ್ರಯತ್ನದಲ್ಲಿ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದಾರೆ.

Trisha Krishnan

ರಾಜಕೀಯ ಪಕ್ಷ ಪ್ರಾರಂಭಿಸಿದ ಎರಡು ವರ್ಷದ ಅವಧಿಯಲ್ಲಿಯೇ ತಮಿಳಗ ವೆಟ್ರಿ ಕಳಗಂ ಪಕ್ಷವು ಅಧಿಕಾರಕ್ಕೆ ಬರುವುದರಲ್ಲಿ ಯಶಸ್ವಿಯಾಗಿದೆ. ಆದರೆ ರಾಜಕೀಯ ಪ್ರವೇಶ ಮಾಡಿದ ಬೆನ್ನಲ್ಲೇ ವಿಜಯ್ ಅವರ ಪತ್ನಿ ಸಂಗೀತಾ ಡಿವೋರ್ಸ್ ಕೇಳಿ ಕೋರ್ಟ್ ಮೆಟ್ಟಿಲೇರಿದ್ದರು. ಮತ್ತೊಂದು ಕಡೆ ನಟಿ ತ್ರಿಶಾ ಜೊತೆಗಿನ ಒಡನಾಟ ವಿವಾದಕ್ಕೆ ಕಾರಣವಾಗಿತ್ತು. ನಟ, ತಮಿಳುನಾಡಿನ ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಅವರ ನಡುವಿನ ಸಂಬಂಧ, ಆತ್ಮೀಯತೆಯೂ ಭಾರೀ ಚರ್ಚೆಗೆ ಕಾರಣವಾಗಿತ್ತು. ಇದು ರಾಜಕೀಯವಾಗಿಯೂ ಪ್ರಭಾವ ಬೀರುವ ಆತಂಕ ಮೂಡಿತ್ತು.

ವಿಜಯ್ ಹಾಗೂ ತ್ರಿಶಾ ಆತ್ಮೀಯ ಸ್ನೇಹಿತರು, ಹಲವು ವರ್ಷಗಳಿಂದ ತಮಿಳು ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದು, ಈ ಜೋಡಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದಾರೆ. ಇನ್ನು ಈಚೆಗೆ ನಟಿಯೊಬ್ಬರ ಕಾರಣಕ್ಕೆ ತಮ್ಮ ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಮೂಡಿದೆ ಎಂದೂ ವಿಜಯ್ ಅವರ ಮಾಜಿ ಪತ್ನಿ ಸಂಗೀತಾ ಅವರು ಡಿವೋರ್ಸ್ ಅರ್ಜಿಯಲ್ಲಿ ಉಲ್ಲೇಖಿಸಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ಆಡಿಕೊಳ್ಳುವವರ ಬಾಯಿ ಮುಚ್ಚಿಸುವುದಕ್ಕೆಂದೇ ತ್ರಿಶಾ ಜೊತೆ ವಿಜಯ್ ಮದುವೆ ಸಮಾರಂಭದಲ್ಲಿ ಭಾಗಿ ಆಗಿದ್ದರು. ಇದೂ ಸಹ ಭಾರೀ ಸದ್ದು ಮಾಡಿತ್ತು.

ವಿಜಯ್ - ತ್ರಿಶಾ ಬ್ರೇಕ್ ಅಪ್ ಸುದ್ದಿ - ಸತ್ಯ ಬೇರೆ

ಇನ್ನು ಇನ್‌ಸ್ಟಾಗ್ರಾಮ್‌ನಲ್ಲಿ ನಟಿ ತ್ರಿಶಾ ಅವರು ವಿಜಯ್ ಅವರನ್ನು ಅನ್‌ಫಾಲೋ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಇದು ಭಾರೀ ಚರ್ಚೆಗೆ ಕಾರಣವಾಗಿತ್ತು. ನಟಿ ಹಾಗೂ ವಿಜಯ್ ಆಪ್ತೆ ತ್ರಿಶಾ ಅವರು, ವಿಜಯ್ ಅವರಿಂದ ದೂರವಾಗುತ್ತಿದ್ದಾರೆಯೇ ಎನ್ನುವ ಅನುಮಾನ ಶುರುವಾಗಿತ್ತು. ಈ ಬೆಳವಣಿಗೆಯು ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಹಾಗೂ ತ್ರಿಶಾ ನಡುವೆ ಬ್ರೇಕಪ್ ಆಗಿದೆ ಎಂದೇ ಹೇಳಲಾಗಿತ್ತು. ಆದರೆ ಇದಕ್ಕೆ ಟ್ವಿಸ್ಟ್‌ ಸಿಕ್ಕಂತಾಗಿದೆ. ವಿಜಯ್ ಅವರ ಹುಟ್ಟುಹಬ್ಬಕ್ಕೂ ತ್ರಿಶಾ ಅವರು ಶುಭಾಶಯ ಕೋರಲಿಲ್ಲ. ಇದರ ಬೆನ್ನಲ್ಲೇ ಆಕೆ ಇನ್‌ಸ್ಟಾಗ್ರಾಮ್‌ನಲ್ಲಿ ವಿಜಯ್ ಅಕೌಂಟ್ ಅನ್‌ಫಾಲೋ ಮಾಡಿದ್ದಾರೆ ಎಂದೇ ಹೇಳಲಾಗಿತ್ತು. ಆದರೆ ಮಂಗಳವಾರ ಸಂಜೆ ವಿಜಯ್ ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿರುವ ಫೋಟೋಗಳನ್ನು ನಟಿ ತ್ರಿಶಾ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿಯೇ ಹಂಚಿಕೊಂಡಿದ್ದಾರೆ.

ನಟಿ ತ್ರಿಶಾ ಪೋಸ್ಟ್‌ನಲ್ಲಿ ಏನಿದೆ

ಇನ್ನು ನಟಿ ತ್ರಿಶಾ ಅವರು ವಿಜಯ್ ಅವರ ಜನ್ಮದಿನವನ್ನು ಆಚರಿಸಿದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು. ಎಲ್ಲವನ್ನೂ ಸಾರ್ಥಕಗೊಳಿಸುವ ವ್ಯಕ್ತಿಗೆ, HBD❤️🧿 ಎಂದು ಹೇಳಿದ್ದಾರೆ. ಈ ಪೋಸ್ಟ್‌ ಇದೀಗ ವೈರಲ್ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+