Varthur Santosh: ಬಿಗ್ ಬಾಸ್ ಮನೆಗೆ ವರ್ತೂರು ಸಂತೋಷ್ ರೀ ಎಂಟ್ರಿ ಯಾವಾಗ ಗೊತ್ತಾ?
Varthur Santosh: ಬೆಂಗಳೂರು, ಅಕ್ಟೋಬರ್ 28: ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಪ್ರಕರಣ ಹೆಚ್ಚು ಸದ್ದು ಮಾಡಿದ್ದು, ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್‌ಗೆ ಶುಕ್ರವಾರ ಜಾಮೀನು ಸಿಕ್ಕಿದೆ. ಆದರೆ, ಬಿಗ್ ಬಾಸ್ ಮನೆಗೆ ಸಂತೋಷ್ ರೀ ಎಂಟ್ರಿ ಯಾವಾಗ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.
ಹೌದು, ಹುಲಿ ಉಗುರು ಧರಿಸಿದ ಆರೋಪದ ಮೇರೆಗೆ ಬಿಗ್ ಬಾಸ್ ಕಾರ್ಯಕ್ರಮದ ಮನೆಯಿಂದಲೇ ವರ್ತೂರ್ ಸಂತೋಷ್‌ರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಗುರುವಾರ ವರ್ತೂರ್ ಸಂತೋಷ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಬೆಂಗಳೂರಿನ ಕೋರ್ಟ್ ಶುಕ್ರವಾರ ಆದೇಶ ಪ್ರಕಟಿಸಿ, ವರ್ತೂರ್ ಸಂತೋಷ್‌ಗೆ ಜಾಮೀನು ನೀಡಿದೆ.

ಶುಕ್ರವಾರ ಬೆಂಗಳೂರಿನ 2ನೇ ಎಸಿಜೆಎಂ ನ್ಯಾಯಾಲಯ ವರ್ತೂರ್ ಸಂತೋಷ್‌ಗೆ ಜಾಮೀನು ನೀಡಿದೆ. 4 ಸಾವಿರ ರೂ ನಗದು ಭದ್ರತೆ ಅಥವ ಒಬ್ಬರ ಶ್ಯೂರಿಟಿ ಒದಗಿಸುವಂತೆ ಷರತ್ತು ಹಾಕಿ ಜಾಮೀನು ಮಂಜೂರು ಮಾಡಲಾಗಿದೆ. ಅಲ್ಲದೇ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಬಳಿಕ ವರ್ತೂರ್ ಸಂತೋಷ್ ಮತ್ತೆ ಬಿಗ್ ಬಾಸ್ ಮನೆಗೆ ಹೋಗಲಿದ್ದಾರೆಯೇ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಹೌದು, ಬಿಗ್ ಬಾಸ್ ಕಾರ್ಯಕ್ರಮ ಮೂರನೇ ವಾರ ಪೂರ್ಣಗೊಳ್ಳುವ ಹಂತದಲ್ಲಿದೆ. ಈ ಮಧ್ಯೆ ಹುಲಿ ಉಗುರು ಹೊಂದಿರುವ ಪ್ರಕಣದಲ್ಲಿ ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಅವರು ಪೋಲಿಸರು ಅರೆಸ್ಟ್ ಮಾಡಿದ್ದು, ಇದೀಗ ಜಾಮೀನು ಸಿಕ್ಕಿದೆ. ಈ ನಡುವೆ ಮತ್ತೆ ಬಿಗ್ ಬಾಸ್ ಮನೆ (ಅಕ್ಟೋಬರ್ 28) ಶನಿವಾರ ರೀ ಎಂಟ್ರಿಯಾಗುತ್ತಾರೆ ಎಂದು ಹೇಳಲಾಗಿದೆ. ಅಲ್ಲದೇ ಈ ವಿಕೇಂಡ್ ಎಪಿಸೋಡ್ ನಲ್ಲಿ ವರ್ತೂರ್ ಸಂತೋಷ್ ಭಾಗಿಯಾಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಇನ್ನೂ ಶುಕ್ರವಾರ ಜಮೀನು ಸಿಕ್ಕಿದ್ದು, ಕೋರ್ಟ್ ಬಳಿ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಸಂಬಂಧಿಸಿದ ಕಾರ್ ಒಂದು ಕಂಡು ಬಂದಿದೆ ಎನ್ನಲಾಗಿದೆ. ಹೀಗಾಗಿ ಶನಿವಾರ ಬಿಗ್ ಬಾಸ್ ಮನೆಗೆ ವರ್ತೂರ್ ಸಂತೋಷ್ ರೀ ಎಂಟ್ರಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಜಾಮೀನು ನೀಡಿರುವ ಕೋರ್ಟ್ ಯಾವುದೇ ರೀತಿಯ ಹೆಚ್ಚಿನ ಷರತ್ತನ್ನು ಹಾಕಿಲ್ಲ. ಹೀಗಾಗಿ ಬಿಗ್ ಬಾಸ್ ಮನೆಗೆ ಮತ್ತೆ ಮರಳಲು ಅವಕಾಶವಿದೆ ಎನ್ನಲಾಗಿದೆ. ಈ ಕಾರಣದಿಂದಲೇ ಸಂತೋಷ್ ಅವರು ಬಿಗ್ ಬಾಸ್ಗೆ ರೀ ಎಂಟ್ರಿ ಪಡೆಯಲಿದ್ದಾರೆ.












Click it and Unblock the Notifications