Bank Janardhan: ಬ್ಯಾಂಕ್ ಜನಾರ್ಧನ್ ವೃತ್ತಿ ಜೀವನ ಬದಲಿಸಿದ್ದು ಆ ಇಬ್ಬರು ವ್ಯಕ್ತಿಗಳು
500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (76) ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್ ಜನಾರ್ಧನ್ ಕೊನೆಯುಸಿರೆಳೆದಿದ್ದಾರೆ.
ಕೆಲ ತಿಂಗಳ ಹಿಂದಷ್ಟೇ ಬ್ಯಾಂಕ್ ಜನಾರ್ಧನ ಅವರಿಗೆ ಹೃದಯಾಘಾತವಾಗಿತ್ತು. ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದರು. ಕನ್ನಡ ಸಿನಿಮಾ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.
ಕನ್ನಡ ನಟ ಬ್ಯಾಂಕ್ ಜನಾರ್ಧನ್ ಅವರು ಬ್ಯಾಂಕ್ ಉದ್ಯೋಗಿಯಾಗಿದ್ದ ಅವರು, ನಾಟಕದ ಮೂಲಕ ಚಿತ್ರರಂಗ ಪ್ರವೇಶಿಸಿ, ಹಾಸ್ಯ ಪಾತ್ರಗಳಿಂದ ಜನಪ್ರಿಯರಾದರು. ಆರಂಭದಲ್ಲಿ ಸಾಕಷ್ಟು ಕಷ್ಟಗಳನ್ನ ಅನುಭವಿಸಿದ್ದ ಬ್ಯಾಂಕ್ ಜನಾರ್ಧನ್ ಅವರಿಗೆ ಧೀರೇಂದ್ರ ಗೋಪಾಲ್ ಮತ್ತು ಕಾಶೀನಾಥ್ ಅವರ ಸಹಕಾರದಿಂದ ಅವರ ಚಿತ್ರರಂಗ ಜೀವನ ಉತ್ತುಂಗಕ್ಕೇರಿತು ಎಂದು ಹೇಳಲಾಗಿದೆ.

ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರು ವಿಜಯ ಬ್ಯಾಂಕ್ನಲ್ಲಿ ಕೆಲಸ ಮಾಡಿಕೊಂಡಿದ್ದವರು. ನಂತರ ನಟನೆ ಕಡೆಗೆ ಆಸಕ್ತಿ ಬೆಳಸಿಕೊಂಡ ಅವರು, ಆರಂಭದಲ್ಲಿ ನಾಟಕ ಮಾಡಿಕೊಂಡಿದ್ದರು. ನಂತರ, ಸಿನಿಮಾಗಳಲ್ಲಿ ಮಿಂಚಿದರು. ಹಾಸ್ಯ ಪಾತ್ರಗಳ ಮೂಲಕ ಜನಾರ್ಧನ್ ಅವರು ಗಮನ ಸೆಳೆದರು. ಬ್ಯಾಂಕ್ ಜನಾರ್ಧನ್ ಅವರು ಚಿತ್ರರಂಗಕ್ಕೆ ಬರೋಕೆ ಕಾರಣ ಆಗಿದ್ದು ಧೀರೇಂದ್ರ ಗೋಪಾಲ್ ಅವರು ಕೊಟ್ಟ ಆಫರ್. ಚಿತ್ರರಂಗದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಕ್ಕೆ ಕಾರಣ ಆಗಿದ್ದು, ಕಾಶೀನಾಥ್ ಅವರು ಎಂದು ಹೇಳಲಾಗಿದೆ.
ಇನ್ನೂ ಜನಾರ್ಧನ್ ಅವರು ಎಸ್ಎಸ್ಎಲ್ಸಿ ಪಾಸ್ ಆಗಿದ್ದರು. ಆಗಿನ ಕಾಲಕ್ಕೆ ಅವರಿಗೆ ಬ್ಯಾಂಕ್ನಲ್ಲಿ ಕೆಲಸ ಸಿಕ್ಕಿತು. ಬ್ಯಾಂಕ್ ಕೆಲಸದ ಜೊತೆ ಅವರು ನಾಟಕಗಳಲ್ಲಿ ನಟಿಸಿದರು. ಚಿತ್ರದುರ್ಗದ ಹೊಳಲ್ಕೆರೆಯಲ್ಲೇ ವಾಸವಾಗಿದ್ದ ಅವರು, 'ಗೌಡರ ಗದ್ದಲ' ನಾಟಕ ಮಾಡಿದರು. ಇದರಲ್ಲಿ ಅವರ ನಟನೆ ನೋಡಿ ಅನೇಕರು ಮೆಚ್ಚಿಕೊಂಡರು. ಒಂದು ದಿನ ಇವರ ನಾಟಕವನ್ನು ಹಿರಿಯ ನಟ ಧೀರೇಂದ್ರ ಗೋಪಾಲ್ ಅವರು ನೋಡಿದರು. ಆಗ ನೀವು ಚಿತ್ರರಂಗಕ್ಕೆ ಬರಬೇಕು ಎಂದು ಆಹ್ವಾನ ಕೊಟ್ಟರು.
ನಟ ಧೀರೇಂದ್ರ ಗೋಪಾಲ್ ಅವರು ಆಹ್ವಾನದ ಮೇರೆಗೆ ಕೆಲ ಸಮಯ ಬಿಟ್ಟು ಜನಾರ್ಧನ್ ಅವರು ಧೀರೇಂದ್ರ ಗೋಪಾಲ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದರು. ಕಾಶೀನಾಥ್ ಅವರು 'ಅಜಗಜಾಂತರ' ಹೆಸರಿನ ಸಿನಿಮಾ ಮಾಡಿದರು. ಇದಕ್ಕೆ ಬ್ಯಾಂಕ್ ಜನಾರ್ಧನ್ ಅವರಿಗೆ ಆಫರ್ ಕೊಟ್ಟರು. ಅಲ್ಲಿಂದ ಅವರ ವೃತ್ತಿ ಜೀವನ ಬದಲಾಗಿ ಹೋಯಿತು.
ಬ್ಯಾಂಕ್ ಜನಾರ್ಧನ್ ನಿಧನಕ್ಕೆ ಹೆಚ್ ಡಿ ಕುಮಾರಸ್ವಾಮಿ ಸಂತಾಪ
ಕನ್ನಡ ಚಿತ್ರರಂಗದ ಹಿರಿಯ ನಟರು, ಸುಮಾರು ಐನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅನೇಕ ವೈವಿದ್ಯಮಯ ಪಾತ್ರಗಳಲ್ಲಿ ನಟಿಸಿದ್ಧ ಶ್ರೀ ಬ್ಯಾಂಕ್ ಜನಾರ್ಧನ್ ಅವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ. ತಮ್ಮ ಅಭಿನಯದಿಂದ ಪ್ರೇಕ್ಷಕರಲ್ಲಿ ಕಚಗುಳಿಯ ಕಡಲನ್ನೇ ಉಕ್ಕಿಸುತ್ತಿದ್ದ ಜನಾರ್ಧನ್ ಅವರು, ಪ್ರತಿ ಪಾತ್ರಕ್ಕೂ ಜೀವ ತುಂಬುತ್ತಿದ್ದರು. ಆ ಪಾತ್ರದ ಮೂಲಕ ಎಲ್ಲರನ್ನೂ ಸಮ್ಮೋಹನಗೊಳಿಸುತ್ತಿದ್ದರು. ಅವರ ನಿಧನ ನಮ್ಮ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ.ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications