Actor Umesh: ಕನ್ನಡದ ಖ್ಯಾತ ನಟ ಉಮೇಶ್ ಆಸ್ಪತ್ರೆಗೆ ದಾಖಲು, ಸ್ಥಿತಿ ಗಂಭೀರ!
ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟರಾದ ಎಂ.ಎಸ್.ಉಮೇಶ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 80 ವರ್ಷ ವಯಸ್ಸಿನವರಾದ ಉಮೇಶ್ ಕನ್ನಡದ ಬಹುತೇಕ ನಟರೊಂದಿಗೆ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ತೆರೆ ಹಂಚಿಕೊಂಡಿದ್ದಾರೆ. ತಮ್ಮ ಹಾಸ್ಯಪಾತ್ರದ ಮೂಲಕ ಅವರು ರಾಜ್ಯದಾದ್ಯಂತ ಜನಪ್ರಿಯತೆ ಪಡೆದಿದ್ದರು. ಉಮೇಶ್ ಅವರು ಇತ್ತೀಚೆಗೆ ತಮ್ಮ ಮನೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದರು ಎನ್ನಲಾಗಿದೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ವಾಸವಾಗಿದ್ದ ಉಮೇಶ್ ಅವರು ಮನೆಯಲ್ಲಿ ಕೆಳಗೆ ಬಿದ್ದು ಪ್ರಜ್ಞೆ ತಪ್ಪಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಆರೋಗ್ಯ ಸ್ಥಿತಿ ಸದ್ಯ ಗಂಭೀರವಾಗಿದೆ ಎಂದು ವರದಿಯಾಗಿದೆ. ಸಹಜ ತೊಂದರೆಗಳಿಂದ ಬಳಲುತ್ತಿರುವ ಉಮೇಶ್ ಅವರು ಮನೆಯಲ್ಲೇ ಬಿದ್ದು ಕಾಲು ಮುರಿದುಕೊಂಡಿದ್ದಾರೆ.

ಇಂದು ಬೆಳಿಗ್ಗೆ ಮನೆಯಲ್ಲೇ ಜಾರಿ ಬಿದ್ದ ಉಮೇಶ್ ನೋವಿನಿಂದಾಗಿ ಪ್ರಜ್ಞೆ ತಪ್ಪಿದ್ದರು. ಕೂಡಲೇ ಅವರನ್ನು ಮುದ್ದಿನಪಾಳ್ಯದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಚಾರ ಕೇಳಿ ಚಿತ್ರರಂಗದ ಗಣ್ಯರು ಕೂಡ ಆತಂಕದಲ್ಲಿದ್ದಾರೆ. ಉಮೇಶ್ ಅವರ ಆರೋಗ್ಯ ಸುಧಾರಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.
ಅಪಾರ್ಥ ಮಾಡ್ಕೋಬೇಡಿ ಡೈಲಾಗ್‌ನಿಂದ ಫೇಮಸ್
ಇವರ ಪೂರ್ಣ ಹೆಸರು ಮೈಸೂರು ಶ್ರೀಕಂಠಯ್ಯ ಉಮೇಶ್. ಆದರೆ ಕನ್ನಡ ಚಿತ್ರರಂಗದಲ್ಲಿ ಎಂ.ಎಸ್. ಉಮೇಶ್ ಎಂದೇ ಜನಪ್ರಿಯರಾಗಿದ್ದಾರೆ. ಆರು ದಶಕಗಳಿಂದಲೂ ಅವರು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಮೊದಲಿಗೆ ಅವರನ್ನು ಮಕ್ಕಳ ರಾಜ್ಯ (1960) ಸಿನಿಮಾದಲ್ಲಿ ಪ್ರಮುಖ ಪಾತ್ರಕ್ಕಾಗಿ ಆಯ್ಕೆ ಮಾಡಲಾಗಿತ್ತು. ಉಮೇಶ್ ತಮ್ಮ ವಿಶಿಷ್ಟ ಸಂಭಾಷಣೆ, ಮುಖಭಾವ ಮತ್ತು ಹಾಸ್ಯ ಸಮಯಪ್ರಜ್ಞೆಗೆ ಹೆಸರುವಾಸಿಯಾಗಿದ್ದಾರೆ.
1977ರಲ್ಲಿ ತೆರೆಕಂಡ ಕಥಾ ಸಂಗಮದಲ್ಲಿ "ತಿಮ್ಮರಾಯ್" ಪಾತ್ರದಲ್ಲಿ ಅವರ ಪಾತ್ರವು ಅವರಿಗೆ ಅತ್ಯುತ್ತಮ ಪೋಷಕ ನಟನಿಗಾಗಿ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ತಂದುಕೊಟ್ಟಿತು. ನಾಗರ ಹೊಳೆ, ಗುರು ಶಿಷ್ಯರು, ಕಾಮನ ಬಿಲ್ಲು, ಅಪೂರ್ವ ಸಂಗಮ, ಶ್ರುತಿ ಸೇರಿದಾಗ, ಮಲಯ ಮಾರುತ, ಹಾಲು ಸಕ್ಕರೆ, ಸಂಕಟದಲ್ಲಿ ವೆಂಕಟ ಸೇರಿದಂತೆ ನೂರಾರು ಸಿನಿಮಾಗಳಲ್ಲಿ ಉಮೇಶ್ ನಕ್ಕು ನಗಿಸಿದ್ದಾರೆ.
ಅನಂತ್ ನಾಗ್ ನಟನೆಯ ಗೋಲ್ಮಾಲ್ ರಾಧಾಕೃಷ್ಣ ಸಿನಿಮಾದಲ್ಲಿನ "ಸೀತಾಪತಿ" ಪಾತ್ರವು ಕನ್ನಡ ಚಿತ್ರರಂಗದ ಅತ್ಯುತ್ತಮ ಹಾಸ್ಯ ಪಾತ್ರಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. "ಅಪಾರ್ಥ ಮಾಡ್ಕೊಂಡ್ಬಿಟ್ರೋ ಏನೋ" ಎನ್ನುವುದು ಉಮೇಶ್ ಅವರ ಫೇಮಸ್ ಡೈಲಾಗ್. ರಮೇಶ್ ಅರವಿಂದ್ ನಿರ್ದೇಶನದ ವೆಂಕಟ ಚಿತ್ರದಲ್ಲಿ ವೃದ್ಧ ವಿಧವೆ ಅಜ್ಜಿಯ ಪಾತ್ರವೂ ಮೆಚ್ಚುಗೆ ಪಡೆದಿತ್ತು. ರಾಜ್‌ಕುಮಾರ್ ಅವರ ಬೊಂಬೆಯಾಟವಯ್ಯಾ ಹಾಡಿನಲ್ಲೂ ಉಮೇಶ್ ಕಾಣಿಸಿಕೊಂಡಿದ್ದಾರೆ.
-
ಸರ್ಕಾರಿ ಆಸ್ಪತ್ರೆಗಳಲ್ಲಿ ನಾಳೆ OPD ಸೇವೆ ಬಂದ್? ವೈದ್ಯರ ರಾಜ್ಯವ್ಯಾಪಿ ಪ್ರತಿಭಟನೆ -
ಬೇಸಿಗೆಯ ಸಂಜೀವಿನಿ ಈ ನಿಂಬೆ ಹಣ್ಣು: ಆರೋಗ್ಯದ ದೃಷ್ಟಿಯಿಂದ ಪ್ರಯೋಜನಗಳು ಅಪಾರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications