Mangaluru Dinesh: ಕೆಜಿಎಫ್‌ ಸಿನಿಮಾದಲ್ಲಿ ನಟಿಸಿದ್ದ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ನಿಧನ

Mangaluru Dinesh Passes Away: ಸ್ಯಾಂಡಲ್‌ವುಡ್‌ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ಅವರು ಇಂದು (ಆಗಸ್ಟ್‌ 25) ವಿಧಿವಶರಾಗಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರದ ಮನೆಯಲ್ಲಿ ನಿಧನರಾಗಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಇವರು ಇಂಟರ್‌ನ್ಯಾಷನಲ್‌ ಮಟ್ಟದಲ್ಲಿ ಸದ್ದು ಮಾಡಿದ ರಾಕಿಂಗ್‌ ಸ್ಟಾರ್ ಯಶ್‌ ನಟನೆಯ ಕೆಜಿಎಫ್‌ ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ.

ರಾಕಿಂಗ್‌ ಸ್ಟಾರ್ ಯಶ್‌ ನಟನೆಯ ಕೆಜಿಎಫ್ ಸೇರಿದಂತೆ ರಿಕ್ಕಿ, ಹರಿಕಥೆ ಅಲ್ಲ ಗಿರಿಕಥೆ, ಉಳಿದವರು ಕಂಡಂತೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ನಟರಾಗಿ ಕಾಣಿಸಿಕೊಂಡಿದ್ದರು. ಆದರೆ ಇಂದು (ಆಗಸ್ಟ್‌ 25) ಬೆಳಗಿನ ಜಾವ ಅವರು ನಿಧನರಾಗಿದ್ದು, ಅವರ ನಿಧನಕ್ಕೆ ಚಿತ್ರರಂಗ ಸೇರಿದಂರೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

Veteran Sandalwood Supporting Actor Mangaluru Dinesh Passes Away

ಬ್ರೈನ್‌ ಸ್ಟ್ರೋಕ್‌ ಹಿನ್ನೆಲೆ ಅವರು ಕುಂದಾಪುರ ಆಸ್ಪತ್ರೆಗೆ ದಾಖಲಾಗಿ ಕಳೆದ 5 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು (ಆಗಸ್ಟ್‌ 25) ಮುಂಜಾನೆ 3:30ಕ್ಕೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಕಲಾ ನಿರ್ದೇಶಕರಾಗಿ ವೃತ್ತಿ ಬದುಕು ಆರಂಭಿಸಿ ನಟರಾಗಿ ಪ್ರಸಿದ್ಧಿ ಪಡೆದಿದ್ದರು. ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಜನಿಸಿದ ಅವರು ಹಲವು ವರ್ಷಗಳಿಂದ ಬೆಂಗಳೂರು ನಿವಾಸಿ ಆಗಿದ್ದರು.

ಇನ್ನು ಅವರು ಮಕ್ಕಳಾದ ಪವನ್‌, ಸಜ್ಜನ್‌ ಹಾಗೂ ಪತ್ನಿ ಭಾರತಿ ಅವರನ್ನು ಅಗಲಿದ್ದಾರೆ. ದಿನೇಶ್ ಅವರ ಪಾರ್ಥಿವ ಶರೀರವನ್ನು ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಲಗ್ಗೆರೆಯ ಅವರ ಮನೆಯಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

ಖ್ಯಾತ ಕಲಾ ನಿರ್ದೇಶಕ ಶಶಿಧರ್ ಅಡಪ ಅವರ ಬಳಿ ಚಿನ್ನಾರಿ ಮುತ್ತ ಸೇರಿದಂತೆ ಕೆಲ ಚಿತ್ರಗಳಿಗೆ ಸಹಾಯಕರಾಗಿ ಆರಂಭದ ಕೆಲ ವರ್ಷ ಕೆಲಸ ಮಾಡಿದ್ದ ಅವರು ಬಳಿಕ ಟಿ.ಎಸ್ ನಾಗಾಭರಣ ನಿರ್ದೇಶನದ 'ಜನುಮದ ಜೋಡಿ ಚಿತ್ರದ ಮೂಲಕ ಸ್ವತಂತ್ರ್ಯ ಕಲಾ ನಿರ್ದೇಶಕರಾದರು. ಬಳಿಕ '' ವೀರ ಮದಕರಿ,'ಚಂದ್ರಮುಖಿ ಪ್ರಾಣಸಖಿ, ನಂ 73 ಶಾಂತಿನಿವಾಸ ಸೇರಿದಂತೆ ಹಲವು ಚಿತ್ರಗಳಿಗೆ ಕಲಾ ನಿರ್ದೇಶನ ಮಾಡಿದ್ದರು.

ಅಲ್ಲದೆ, ದಿನೇಶ್ ಮಂಗಳೂರು ಅವರಿಗೆ ಶಿವರಾಜ್ ಕುಮಾರ್ ಅಭಿನಯದ ರಾಕ್ಷಸ ಸಿನಿಮಾದಲ್ಲಿ ಆರ್ಟ್‌ ವರ್ಕ್‌ಗೆ 2004-05ನೇ ಸಾಲಿನ ಅತ್ಯುತ್ತಮ ಕಲಾ ನಿರ್ದೇಶಕ ರಾಜ್ಯ ಪ್ರಶಸ್ತಿ ದೊರೆಯಿತು. ಬಳಿಕ ಅವರು ತಮ್ಮ ಪೋಷಕ ನಟ ಪಾತ್ರದಲ್ಲಿ ಪ್ರಸಿದ್ಧಿ ಪಡೆಯುತ್ತಾ ಜನಮನ್ನಣೆ ಪಡೆದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+