Actor Passes Away: 750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ನಟ ಕೋಟ ಶ್ರೀನಿವಾಸ ರಾವ್ ನಿಧನ
ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಅಭಿನಯಿಸಿದ್ದ ಟಾಲಿವುಡ್‌ನ ಖ್ಯಾತ ಹಿರಿಯ ನಟ, ಮಾಜಿ ಶಾಸಕ ಕೋಟ ಶ್ರೀನಿವಾಸ ರಾವ್ (Kota Srinivasa Rao) ಅವರು ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಭಾನುವಾರ (ಜು.13) ಮುಂಜಾನೆ ಹೈದರಾಬಾದ್‌ನ ಫಿಲ್ಮ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೋಟ ಶ್ರೀನಿವಾಸ ರಾವ್ ಅವರು ಬಹುತೇಕ ಎಲ್ಲ ಸ್ಟಾರ್ ನಟರೊಂದಿಗೆ ತೆರೆ ಹಂಚಿಕೊಂಡಿದ್ದರು. ವಿಭಿನ್ನ ಪಾತ್ರಗಳಲ್ಲಿ ಅವರ ಪ್ರೇಕ್ಷಕರ ಮನಗೆದ್ದಿದ್ದರು. ವಿಲನ್ ಹಾಗೂ ರಾಜಕಾರಣಿ ಪಾತ್ರಕ್ಕೆ ಕೋಟ ಶ್ರೀನಿವಾಸ ರಾವ್ ಹೆಸರುವಾಸಿಯಾಗಿದ್ದರು.
ಕನ್ನಡದಲ್ಲಿ ಲೇಡಿ ಕಮೀಷನರ್, ರಕ್ತ ಕಣ್ಣೀರು, ಲವ್, ನಮ್ಮ ಬಸವ, ಮಸ್ತಿ, ನಮ್ಮಣ್ಣ, ಶ್ರೀಮತಿ, ಕಬ್ಜ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಹೀಗಾಗಿ ಕನ್ನಡ ಸಿನಿ ಪ್ರೇಕ್ಷಕರಿಗೂ ಅವರು ಹತ್ತಿರವಾಗಿದ್ದರು. ಶಿವ, ಗಾಯಂ, ಮನಿ, ಶತ್ರುವು, ಅಹಾ ನಾ ಪೆಲ್ಲಂಟ, ಬೊಮ್ಮರಿಲ್ಲು, ಅಥಡು, ರಕ್ತ ಚರಿತ್ರ, ಲೀಡರ್, ಸತ್ಯಮೂರ್ತಿ, ಅತ್ತಾರಿಂಟಿಕಿ ದಾರೆಡಿ, ನಾಯಕ ಸೇರಿದಂತೆ ಹಲವು ಹಿಟ್ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದರು. ಖಳನಟನ ಜೊತೆಗೆ ಹಲವು ಪೋಷಕ ಪಾತ್ರಗಳನ್ನು ಸಹ ಅವರು ನಿರ್ವಹಿಸಿದ್ದರು.

ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಕಂಕಿಪಾಡು ಗ್ರಾಮದಲ್ಲಿ 1942ರಲ್ಲಿ ಕೋಟ ಶ್ರೀನಿವಾಸ ರಾವ್ ಜನಿಸಿದ್ದರು. 1978ರಲ್ಲಿ ತೆರೆಕಂಡ ತೆಲುಗು ಚಿತ್ರ ಪ್ರಣಂ ಖರೀಡು ಮೂಲಕ ಚಿತ್ರರಂಗ ಪ್ರವೇಶಿಸಿದ್ದರು. ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಬರೋಬ್ಬರಿ 750ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ.
ಖಳನಾಯಕ ಪಾತ್ರ ಮತ್ತು ಪೋಷಕ ಪಾತ್ರಗಳಲ್ಲಿ ಅವರ ನಟನೆಗೆ 9 ಬಾರಿ ನಂದಿ ಪ್ರಶಸ್ತಿಗೆ ಭಾಜನರಾಗಿದ್ದರು. 2015ರಲ್ಲಿ ಭಾರತೀಯ ಚಿತ್ರರಂಗಕ್ಕೆ ಕೊಡುಗೆಗಾಗಿ ಪದ್ಮಶ್ರೀ ಪ್ರಶಸ್ತಿ, 2012ರಲ್ಲಿ ಕೃಷ್ಣಂ ವಂದೇ ಜಗದ್ಗುರುಂ ಸಿನಿಮಾದಲ್ಲಿನ ನಟನೆಗಾಗಿ ಸೈಮಾ ಪ್ರಶಸ್ತಿ ಅವರಿಗೆ ಸಂದಿತ್ತು.
ಶಾಸಕರಾಗಿ ಸೇವೆ
ಸಿನಿಮಾ ರಂಗದ ಜೊತೆಗೆ ಕೋಟ ಅವರು ರಾಜಕೀಯಕ್ಕೂ ಇಳಿದಿದ್ದರು. 1999-2004ರವರೆಗೆ ವಿಜಯವಾಡ ಪೂರ್ವ ಕ್ಷೇತ್ರದಿಂದ ಶಾಸಕರಾಗಿ ಸೇವೆ ಸಲ್ಲಿಸಿದರು. ವಿವಿಧ ರೀತಿಯ ಪಾತ್ರಗಳಲ್ಲಿ ತಮ್ಮ ಅಭಿನಯದಿಂದ ಕೋಟ ಶ್ರೀನಿವಾಸ ರಾವ್ ತೆಲುಗು ಚಿತ್ರರಂಗ ಮತ್ತು ನಾಟಕ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ. ಅವರ ಅಭಿನಯದಲ್ಲಿ ಆಳ, ವೈವಿಧ್ಯ ಮತ್ತು ನೈಜತೆ ಇತ್ತು.
ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ನ ತಮ್ಮ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಇಂದು ಬೆಳಿಗ್ಗೆ ಅವರು ನಿಧನರಾಗಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಮತ್ತು ಅನೇಕ ಚಿತ್ರರಂಗದ ಗಣ್ಯರು ನಟನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಕೋಟ ಶ್ರೀನಿವಾಸ ರಾವ್ ಅವರ ಕೊಡುಗೆಗಳು ಎಂದಿಗೂ ಮರೆಯಲಾಗದು ಎಂದು ನೆನೆದಿದ್ದಾರೆ. ಅವರ ನಿಧನವು ತೆಲುಗು ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಗಣ್ಯರು ಮತ್ತು ಅಭಿಮಾನಿಗಳು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications