Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್
ತಮಿಳು ಚಿತ್ರರಂಗದ ಖ್ಯಾತ ನಟ ಮತ್ತು ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸ್ಥಾಪಕ ದಳಪತಿ ವಿಜಯ್ ಅವರ ಡಿವೋರ್ಸ್ ವಿಚಾರವು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಆದರೆ ವಿಜಯ್ ಇಲ್ಲಿವರೆಗೆ ಇದರ ಬಗ್ಗೆ ಮಾತನಾಡಿರಲಿಲ್ಲ. ಈ ವದಂತಿ ನಡುವೆಯೇ ನಟಿ ತ್ರಿಶಾ ಜೊತೆಗೆ ಒಟ್ಟಿಗೆ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದರು. ಕೊನೆಗೂ ಅವರು ತಮ್ಮ ವೈಯಕ್ತಿಕ ಜೀವನದ ಬಗ್ಗೆ ಇತ್ತೀಚೆಗೆ ನಡೆಯುತ್ತಿರುವ ಚರ್ಚೆಗಳ ಕುರಿತು ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಚೆನ್ನೈನಲ್ಲಿ ನಡೆದ ಪಕ್ಷದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಮ್ಮ ಅಭಿಮಾನಿಗಳಲ್ಲಿ ವಿಶೇಷ ಮನವಿಯೊಂದನ್ನೂ ಮಾಡಿದ್ದಾರೆ.
26 ವರ್ಷಗಳ ಸಂಸಾರದಲ್ಲಿ ಬಿರುಕು
ನಟ ವಿಜಯ್ ಅವರ ಪತ್ನಿ ಸಂಗೀತಾ ಸ್ವರ್ಣಲಿಂಗಂ ಅವರು 26 ವರ್ಷಗಳ ದಾಂಪತ್ಯದ ನಂತರ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇವರಿಗೆ ಜೇಸನ್ ಸಂಜಯ್ ಮತ್ತು ದಿವ್ಯಾ ಸಾಶಾ ಎಂಬ ಇಬ್ಬರು ಮಕ್ಕಳಿದ್ದಾರೆ. ಸಂಗೀತಾ ಅವರು ಸಲ್ಲಿಸಿರುವ ಅರ್ಜಿಯಲ್ಲಿ, ವಿಜಯ್ ಅವರು ನಟಿಯೊಬ್ಬರ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಈ ವಿಷಯವು 2021ರಲ್ಲಿ ತಮಗೆ ತಿಳಿಯಿತು ಎಂದೂ ಅವರು ಉಲ್ಲೇಖಿಸಿದ್ದಾರೆ.

'ಅದರ ಬಗ್ಗೆ ಚಿಂತಿಸಬೇಡಿ'
ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ. "ನನ್ನ ಸುತ್ತ ನಡೆಯುತ್ತಿರುವ ಇತ್ತೀಚಿನ ಸಮಸ್ಯೆಗಳ ಬಗ್ಗೆ ದಯವಿಟ್ಟು ಚಿಂತಿಸಬೇಡಿ. ಆ ವಿಷಯಗಳು ನಿಮ್ಮ ಅಮೂಲ್ಯವಾದ ಸಮಯಕ್ಕೆ ಅರ್ಹವಲ್ಲ. ಅವುಗಳನ್ನು ನಾನು ವೈಯಕ್ತಿಕವಾಗಿ ನಿಭಾಯಿಸುತ್ತೇನೆ. ನನ್ನ ಸಮಸ್ಯೆಗಳಿಂದಾಗಿ ನೀವು ಬೇಸರ ಅಥವಾ ಒತ್ತಡಕ್ಕೆ ಒಳಗಾಗುವುದನ್ನು ನೋಡುವುದು ನನಗೆ ನೋವುಂಟು ಮಾಡುತ್ತದೆ. ಆ ಹೊರೆಯನ್ನು ನೀವು ಹೊರಬೇಡಿ, ಬದಲಿಗೆ ಜನರ ಅಭಿವೃದ್ಧಿ ಕಡೆಗೆ ಗಮನ ಹರಿಸೋಣ" ಎಂದು ವಿಜಯ್ ಮಾತನಾಡಿದ್ದಾರೆ. ವಿಜಯ್ ಅವರ ಈ ಹೇಳಿಕೆಗಳು ಅವರ ವೈಯಕ್ತಿಕ ಜೀವನದಲ್ಲಿ ಡಿವೋರ್ಸ್ ಬಗ್ಗೆ ಬಿರುಗಾಳಿ ಎದ್ದಿರುವ ಸಮಯದಲ್ಲಿ ಮಹತ್ವ ಪಡೆದುಕೊಂಡಿದೆ.
ನನಗೆ ಸ್ವಂತ ಮನೆಯಿಲ್ಲ: ವಿಜಯ್ ಪತ್ನಿ
ಇನ್ನು ಬ್ರಿಟನ್ ಪೌರತ್ವ ಹೊಂದಿರುವ ಸಂಗೀತಾ ಅವರು, ತಮಗೆ ಭಾರತದಲ್ಲಿ ಸ್ವಂತ ಮನೆಯಿಲ್ಲದ ಕಾರಣ ಡಿವೋರ್ಸ್ ತೀರ್ಪು ಬರುವವರೆಗೆ ಪತಿ ವಿಜಯ್ ಅವರ ಮನೆಯಲ್ಲಿ ವಾಸಿಸಲು ಹಕ್ಕು ಅಥವಾ ಪರ್ಯಾಯ ವಸತಿ ನೀಡುವಂತೆ ನ್ಯಾಯಾಲಯಕ್ಕೆ ಕೋರಿದ್ದಾರೆ. ಕಾನೂನು ಕ್ರಮಕ್ಕೆ ಮುಂದಾದರೆ ಮನೆಯಲ್ಲಿ ಇರಲು ಬಿಡುವುದಿಲ್ಲ ಎಂದು ವಿಜಯ್ ಎಚ್ಚರಿಸಿದ್ದರು ಎಂದೂ ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
Thalapathy Vijay:
— KARTHIK DP (@dp_karthik) March 7, 2026
Please don’t worry about the recent problems surrounding me. Those issues are not worth your time.. AVOLO WORTH ILLA 😂👌🏻. I will take care of them myself. What hurts me the most is seeing you feel sad or stressed because of my problems. Please don’t carry that… pic.twitter.com/dnezRxQdMG
ತ್ರಿಶಾ ಜೊತೆಗಿನ ವಿಡಿಯೋ ವೈರಲ್
ಇತ್ತೀಚೆಗೆ ನಿರ್ಮಾಪಕ ಕಲ್ಪತಿ ಸುರೇಶ್ ಅವರ ಮಗನ ವಿವಾಹ ಆರತಕ್ಷತೆಗೆ ನಟ ವಿಜಯ್ ಅವರು ನಟಿ ತ್ರಿಶಾ ಕೃಷ್ಣನ್ ಅವರೊಂದಿಗೆ ಒಂದೇ ಕಾರಿನಲ್ಲಿ ಆಗಮಿಸಿ, ನಂತರ ಜೊತೆಯಾಗಿಯೇ ನಿರ್ಗಮಿಸಿದರು. ಈ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಇದರ ಬೆನ್ನಲ್ಲೇ ಈ ವಿಚ್ಛೇದನದ ವಿಚಾರ ಈಗ ಸಾರ್ವಜನಿಕವಾಗಿ ಚರ್ಚೆಗೆ ಬಂದಿದೆ. ಒಂದೆಡೆ ವಿಜಯ್ ಇತ್ತೀಚಿನ ಸಿನಿಮಾ "ಜನ ನಾಯಗನ್" ವಿವಾದಕ್ಕೆ ಗುರಿಯಾಗಿದ್ದರೆ, ಇನ್ನೊಂದೆಡೆ ವೈಯಕ್ತಿಕ ಬದುಕು ಬೀದಿಗೆ ಬಂದಿರುವುದು ವಿಜಯ್ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications