ಚಾರ್ಜ್‌ಶೀಟ್ ಸಲ್ಲಿಕೆ ಬಳಿಕ ಮೊದಲ ಬಾರಿ ಪತಿ ದರ್ಶನ್ ನೋಡಲು ಓಡೋಡಿ ಬಂದ ಪತ್ನಿ ವಿಜಯಲಕ್ಷ್ಮಿ
Vijayalakshmi Darshan: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ಪತಿ ದರ್ಶನ್ ನೋಡಲು ಚಾರ್ಜ್ ಶೀಟ್ ಸಲ್ಲಿಕೆಯಾದ ಬಳಿಕ ಮೊದಲ ಬಾರಿಗೆ ಪತ್ನಿ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಓಡೋಡಿ ಬಂದಿದ್ದಾರೆ. ಹಾಗಾದರೆ ಈ ವೇಳೆ ಏನೆಲ್ಲಾ ಮಾತುಕತೆ ನಡೆಸಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ರೌಡಿ ಶೀಟರ್ ವಿಲ್ಸನ್ ಗಾರ್ಡ್‌ನ್ ನಾಗನ ಜೊತೆ ರೆಸಾರ್ಟ್ ರೀತಿಯಲ್ಲಿ ರೌಂಡ್ ಟೇಬಲ್ ಮಾಡುವ ಮೂಲಕ ಒಂದು ಕೈಯಲ್ಲಿ ಕಾಫಿ ಮಗ್, ಮತ್ತೊಂದು ಕೈಯಲ್ಲಿ ಸಿಗರೇಟ್ ಹಿಡಿದಿರುವ ಫೋಟೋ ಹಾಗೂ ರೌಡಿ ಶೀಟರ್‌ಗಳ ಜೊತೆಯಲ್ಲೇ ವಿಡಿಯೋ ಕಾಲ್ ಮಾಡಿ ಮಾತನಾಡಿದ ವಿಡಿಯೋ ಭಾರೀ ವೈರಲ್ ಆಗಿದ್ದು, ಇದಕ್ಕೆ ವ್ಯಾಪಕ ಆಕ್ರೋಶಗಳು ಭುಗಿಲೆದ್ದಿದ್ದವು.

ಬಳಿಕ ಎಚ್ಚೆತ್ತ ಸರ್ಕಾರ 9 ಜೈಲಾಧಿಕಾರಿಗಳನ್ನು ಅಮಾನತು ಮಾಡಿತ್ತು. ಅಲ್ಲದೆ, ಕೋರ್ಟ್ ಆದೇಶದ ಮೇರೆಗೆ ಪೊಲೀಸರು ನಟ ದರ್ಶನ್‌ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ್ದರು. ಮತ್ತೊಂದೆಡೆ ದರ್ಶನ್ ಹೊರಗಡೆ ತರಲು ಪತ್ನಿ ವಿಜಯಕ್ಷ್ಮಿ ಕುಟುಂಬಸ್ಥರು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಲೇ ಇದ್ದಾರೆ.
3,991 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರರಣದಲ್ಲಿ ಪೊಲೀಸರು ಸುಮಾರು 3,991 ಪುಟಗಳ ಚಾರ್ಜ್‌ಶೀಟ್ ಅನ್ನು ಇಂದು (ಸೆಪ್ಟೆಂಬರ್ 4) ಬೆಳಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಸಲ್ಲಿಸಿದ್ದಾರೆ.
ಈ ಪ್ರಕರಣದಲ್ಲಿ ನಟ ದರ್ಶನ್ ಎ2 ಆರೋಪಿ ಆಗಿದ್ದರೆ, ಪವಿತ್ರಾ ಗೌಡ ಎ1 ಆರೋಪಿ ಆಗಿದ್ದರು. ಇದನ್ನು ಚಾರ್ಜ್ ಶೀಟ್‌ನಲ್ಲಿ ದರ್ಶನ್ ಎ1 ಹಗೂ ಪವಿತ್ರಾ ಎ2 ಬದಲಾವಣೆ ಆಗಬಹುದು ಎಂದು ಅಂದಾಜಿತ್ತು. ಆದರೆ, ಯಾವುದೇ ಬದಲಾವಣೆ ಆಗಿಲ್ಲ. ಎಸಿಪಿ ಚಂದನ್ ಕುಮಾರ್ ಹಾಗೂ ತನಿಖಾ ತಂಡ ದರ್ಶನ್‌ನನ್ನು ಎರಡನೇ ಆರೋಪಿಯಾಗಿ ಉಲ್ಲೇಖ ಮಾಡಿದ್ದು, ಪವಿತ್ರಾ ಅವರು ಎ1 ಆರೋಪಿಯಾಗಿಯೇ ಮುಂದುವರೆದಿದ್ದಾರೆ.
ಪ್ರಮುಖಾಂಶಗಳ ವಿವರ ಇಲ್ಲಿದೆ
* ನಟ ದರ್ಶನ್ ಸೇರಿ 17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.
* 3 ಪ್ರತ್ಯಕ್ಷ ಸಾಕ್ಷಿಗಳು ಇವೆ.
* ಎಫ್ಎಸ್ಎಲ್ ಮಾತ್ತು ಸಿಎಫ್ಎಸ್ಎಲ್ನಿಂದ 8 ವರದಿಗಳು ಇವೆ.
* ಒಟ್ಟು 200ಕ್ಕೂ ಅಧಿಕಾ ಸಾಕ್ಷಿಗಳು ಇವೆ.
* ಕಿಡ್ನಾಪ್, ಹಲ್ಲೆ, ಕೊಲೆ ಬಳಿಕ ಮುಚ್ಚಿಹಾಕಲು 30 ಲಕ್ಷ ರೂಪಾಯಿ ನೀಡಿದ್ದು ದರ್ಶನ್ ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ.
* ದರ್ಶನ್ ಬಟ್ಟೆ ಮತ್ತು ಶೂನಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ ಇರುವುದು ಪತ್ತೆಯಾಗಿದ್ದು, ಇದರಿಂದ ದರ್ಶನ್ ಹಲ್ಲೆ ಮಾಡಿರುವ ಬಗ್ಗೆ ಮತ್ತು ಕೊಲೆಯಲ್ಲಿ ಭಾಗಿಯಾದ ಬಗ್ಗೆ ಮಾಹಿತಿ ದೊರೆದಂತಾಗಿದೆ.
* ಹಲ್ಲೆ ನಡೆಯುವ ಸ್ಥಳದಲ್ಲಿ ಪವಿತ್ರಾ ಗೌಡ & ದರ್ಶನ್ ಹಾಜರಿದ್ದು, ಈ ವೇಳೆ ಪವಿತ್ರಾ ಗೌಡ ರೇಣುಕಾಸ್ವಾಮಿ ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಕೃತ್ಯ ನಡೆದ ಸಮಯದಲ್ಲಿ ಇವರಿಬ್ಬರ ಮೊಬೈಲ್ ಲೋಕೇಶನ್ ಕೂಡ ಲಭ್ಯವಾಗಿದೆ.
ಮತ್ತೊಂದೆಡೆ ಪ್ರಕರಣಟ ತನಿಖೆ ಎನ್ನೂ ಪೂರ್ಣ ಆಗಿಲ್ಲ. ಆದ್ದರಿಂದ ಸಿಆರ್ಪಿಸಿ 173(8) ಅಡಿಯಲ್ಲಿ ಪ್ರಿಲಿಮಿನರಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದ್ದು, ಈ ಬಗ್ಗೆ ವಿಶೇಷ ಕೋರ್ಟ್‌ಗೆ ಪೊಲೀಸರು ಮನವಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.












Click it and Unblock the Notifications