ದರ್ಶನ್‌ ಸತ್ತು ಹೋದ, ಶಿವಣ್ಣ ಇನ್ನೊಂದು 6 ವರ್ಷ: ಮಡೆನೂರು ಮನುದು ಎನ್ನಲಾದ ಆಡಿಯೋ ವೈರಲ್‌

ಅತ್ಯಾಚಾರ ಕೇಸ್‌ನಲ್ಲಿ ಜೈಲು ಸೇರಿರುವ ನಟ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಬಗ್ಗೆ ಮತ್ತೊಂದು ಶಾಕಿಂಗ್‌ ಆರೋಪ ಕೇಳಿಬಂದಿದೆ. ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟರ ಬಗ್ಗೆ ಮಡೆನೂರು ಮನು ಶಾಕಿಂಗ್‌ ಹೇಳಿಕೆ ನೀಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ಆಡಿಯೋದಲ್ಲಿ ಕನ್ನಡ ಚಿತ್ರರಂಗದ ಪ್ರಮುಖ ನಟರ ಸಾವಿನ ಬಗ್ಗೆಯೂ ಮಾತನಾಡಿದ್ದು, ಇದು ಮಡೆನೂರು ಮನು ಮಾತನಾಡಿರುವುದು ಎಂಬ ಆರೋಪ ಕೇಳಿಬರುತ್ತಿದೆ. ಮನು ವಿರುದ್ಧ ನಟರ ಅಭಿಮಾನಿಗಳು ಗರಂ ಆಗಿದ್ದಾರೆ. ಆಡಿಯೋದಲ್ಲಿ ಯಾವ ನಟರ ಬಗ್ಗೆ ಹೇಳಲಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ..

ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿರುವ ಆಡಿಯೋದಲ್ಲಿ, ʼಶಿವರಾಜ್‌ಕುಮಾರ್‌ ಇನ್ನೊಂದು ಆರು ವರ್ಷ ಬದುಕಿದ್ರೆ ಹೆಚ್ಚು, ಸತ್ತು ಹೋಗ್ತಾರೆ ನನಗೆ ಗೊತ್ತು. ಧ್ರುವ ಸರ್ಜಾ ಇನ್ನೊಂದು ಎಂಟು ವರ್ಷ ಮಾರ್ಕೆಟ್‌ನಲ್ಲಿರಬಹುದು. ನಟ ದರ್ಶನ್‌ ಈಗಾಗಲೇ ಸತ್ತೇ ಹೋದ. ದರ್ಶನ್‌ ಸರ್‌ಗೆ ಇನ್ನೊಂದು ಆರು ವರ್ಷ ಕ್ರೇಜ್‌ ಇರುತ್ತೆ, ಆದ್ರೆ ಸಿನಿಮಾ ಮಾಡಲ್ಲ. ಈ ಮೂವರ ವಿರುದ್ಧ ಕಾಂಪಿಟೇಶನ್‌ ಕೊಡೋಕೆ ಬಂದಿರೋ ಗಂಡುಗಲೀರಿ ನಾನುʼ ಎಂದು ಆಡಿಯೋದಲ್ಲಿದೆ. ಈ ಧ್ವನಿ ಮಡೆನೂರು ಮನು ಅವರದ್ದೇ ಎಂದು ಹೇಳಲಾಗುತ್ತಿದೆ. ಆದರೆ ಸ್ಪಷ್ಟತೆ ಇಲ್ಲ.

viral-audio-claims-madenur-manu-spoke-about-actor-shiva-rajkumar-darshan-thoogudeepa-death-rumors

ಮಡೆನೂರು ಮನು ಅವರು ಗೆಳೆಯರೊಂದಿಗೆ ಮದ್ಯ ಸೇವಿಸಿದಾಗ ಈ ರೀತಿ ಮಾತನಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ವೇಳೆ ಅಲ್ಲಿದ್ದವರು ಯಾರೋ ಇದನ್ನು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿಕೊಂಡು ಇದೀಗ ವೈರಲ್‌ ಮಾಡಿರಬಹುದು ಎಂದು ಸಂಶಯ ವ್ಯಕ್ತವಾಗುತ್ತಿದೆ. ಆಡಿಯೋ ಎಲ್ಲೆಡೆ ಸದ್ದು ಮಾಡುತ್ತಿದೆ. ಶಿವಣ್ಣ, ಧ್ರುವ ಸರ್ಜಾ ಹಾಗೂ ದರ್ಶನ್‌ ಅಭಿಮಾನಿಗಳು ಮಡೆನೂರು ಮನು ವಿರುದ್ಧ ಕೆಂಡವಾಗಿದ್ದಾರೆ.

ಮನು ವಿರುದ್ಧ 100 ಕೇಸ್‌ ಹಾಕ್ತೀವಿ!

ಈ ಆಡಿಯೋ ಬಗ್ಗೆ ಪ್ರತಿಕ್ರಿಯಿಸಿರುವ ಅಖಿಲ ಕರ್ನಾಟಕ ಡಾ.ರಾಜ್‌ಕುಮಾರ್‌ ಅಭಿಮಾನಿ ಸಂಘಗಳ ಒಕ್ಕೂಟದ ಗೌರವಾಧ್ಯಕ್ಷ ಎನ್‌.ಆರ್.ರಮೇಶ್‌, ಬುಧವಾರ ಕರ್ನಾಟಕ ಫಿಲ್ಮ್‌ ಚೇಂಬರ್‌ ಹಾಗೂ ನಿರ್ಮಾಪಕರ ಸಂಘಕ್ಕೆ ಮನು ವಿರುದ್ಧ ದೂರು ನೀಡ್ತೇವೆ. ಸೋಮವಾರ ಮನು ವಿರುದ್ಧ ಜಿಲ್ಲಾಮಟ್ಟದಲ್ಲಿ ಸುಮಾರು 100 ಕೇಸ್‌ ದಾಖಲಿಸುತ್ತೇವೆ ಎಂದು ಹೇಳಿದ್ದಾರೆ.

ಮನು ಇನ್ನೂ ಬೆಳೆಯುತ್ತಿರುವ ನಟ, ಈಗಾಗಲೇ ಒಂದು ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾನೆ. ಆಗಲೇ ಶಿವಣ್ಣ ಬಗ್ಗೆ ಈ ರೀತಿ ಮಾತನಾಡಿದ್ದಾನೆ. ಕನ್ನಡಿಗರು ಪ್ರಾಣಕ್ಕೆ ಪ್ರಾಣ ಕೊಡುವ ಶಿವಣ್ಣನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಇದೇ ಶಿವಣ್ಣ ಕಾಮಿಡಿ ಕಿಲಾಡಿಗಳು ಶೋನಲ್ಲಿ ಮನುಗೆ ವಿಶ್‌ ಮಾಡಿದ್ರು. ಆ ವ್ಯಕ್ತಿ ಬಗ್ಗೆಯೇ ಹೀಗೆ ಮಾತನಾಡಿದ್ದಾರೆ. ಇದನ್ನು ನಾವು ಸಹಿಸಲ್ಲ, ಇದರ ವಿರುದ್ಧ ದೊಡ್ಡಮಟ್ಟದಲ್ಲಿ ಹೋರಾಟ ಮಾಡ್ತೀವಿ. ಇನ್ನು ಮುಂದೆ ಮನುಗೆ ಯಾವುದೇ ಶೋಗಳಲ್ಲಿ ಅವಕಾಶ ಕೊಡಬಾರದು ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಈ ಆಡಿಯೋ ಅಸಲಿಯೋ, ನಕಲಿಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಇದು ಮನು ಅವರದ್ದೇ ಎಂದು ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಈಗಾಗಲೇ ಒಂದು ಕೇಸ್‌ನಲ್ಲಿ ಜೈಲುವಾಸದಲ್ಲಿರುವ ಮನು ವಿರುದ್ಧ ಶಿವಣ್ಣ, ಧ್ರುವ ಸರ್ಜಾ, ದರ್ಶನ್‌ ಅಭಿಮಾನಿಗಳು ತಿರುಗಿಬಿದ್ದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+