Vijaya Lakshmi Darshan: ಪತಿ ದರ್ಶನ್‌ಗಾಗಿ ಪತ್ನಿ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಬ್ಯಾಗ್‌ಗಳಲ್ಲಿ ತಂದಿದ್ದೇನು.?
Vijaya Lakshmi Darshan: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪತಿ ದರ್ಶನ್ ನೋಡಲು ಪತ್ನಿ ವಿಜಯಲಕ್ಷ್ಮಿ & ಮಗ ವಿನೇಶ್ ಎರಡು ಬ್ಯಾಗ್‌ಗಳನ್ನು ಹಿಡಿದು ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದರು. ಹಾಗಾದರೆ ಈ ವೇಳೆ ಬ್ಯಾಗ್‌ಗಳಲ್ಲಿ ತಂದಿದ್ದೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗನ ಜೊತೆ ರೌಂಡಿ ಟೇಬಲ್ ಮಾಡುವ ಮೂಲಕ ಒಂದು ಕೈಯಲ್ಲಿ ಕಾಫಿ ಮಗ್, ಮತ್ತೊಂದು ಕೈಯಲ್ಲಿ ಸಿಗರೇಟ್ ಹಿಡಿದು ಹರಟೆ ಹೊಡೆಯುವ ಫೋಟೋ ಭಾರೀ ವೈರಲ್ ಆಗಿತ್ತು. ಜೊತೆಗೆ ರೌಡಿ ಶೀಟರ್ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡಿರುವ ವಿಡಿಯೋ ಕೂಡ ವೈರಲ್ ಆಗಿದ್ದು, ಇದು ವ್ಯಾಪಕ ಆಕ್ರೊಶಕ್ಕೆ ಕಾರಣವಾಗಿತ್ತು.

ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ ಪರಪ್ಪನ ಅಗ್ರಹಾರದ 9 ಜೈಲಾಧಿಕಾರಿಗಳನ್ನು ಅಮಾನತು ಮಾಡಿತ್ತು. ಬಳಿಕ ರಾಜಾತಿಥ್ಯದ ಹಿನ್ನೆಲೆ ಕೋರ್ಟ್ ಆದೇಶದ ಮೇರೆಗೆ ನಟ ದರ್ಶನ್‌ನನ್ನು ಪೊಲೀಸರು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದರು. ಇನ್ನು ಇಂದು (ಆಗಸ್ಟ್ 31) ಬಳ್ಳಾರಿ ಜೈಲಿಗೆ ಮಗ ವಿನೀಶ್, ವಕೀಲರ ಜೊತೆ ಎರಡು ಬ್ಯಾಗ್ ಹಿಡಿದುಕೊಂಡು ವಿಜಯಲಕ್ಷ್ಮಿ ಪತಿ ದರ್ಶನ್‌ನನ್ನು ನೋಡಲು ಆಗಮಿಸಿದ್ದರು. ಅಲ್ಲದೆ, ಈ ವೇಳೆ ವಿಜಯಲಕ್ಷ್ಮಿ ಕಣ್ಣೀರಿಟ್ಟಿದ್ದು, ಸ್ವತಃ ದರ್ಶನ್ ಪತ್ನಿಗೆ ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ.
ವಿಜಯಲಕ್ಷ್ಮಿ ಬಂದ ಕಾರಿನ ನಂಬರ್ ಏನು?: ಕೆಎ-05-ಎಂಎ-7999 ಕಾರಿನಲ್ಲಿ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಆಗಮಿಸಿದ್ದರು. ಇನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್‌ರನ್ನ 8ನೇ ಬಾರಿ ವಿಜಯಲಕ್ಷ್ಮಿ ಭೇಟಿ ಮಾಡಿದ್ದರು. ವಿನೀಶ್ ಜೊತೆ ಹೋಗಿ ದರ್ಶನ್‌ನನ್ನು ಭೇಟಿಯಾಗಿ ಸಮಾಧಾನ ಹೇಳಿ ಬರುತ್ತಿದ್ದರು ಎನ್ನಲಾಗಿದೆ.
ಇದೀಗ ಇಂದು ಬಳ್ಳಾರಿ ಜೈಲಿಗೆ ವಿಜಯಲಕ್ಷ್ಮಿ ಪತಿ ದರ್ಶನ್‌ಗೆ ಬ್ಯಾಗ್‌ಗಳಲ್ಲಿ ಡ್ರೈ ಫ್ರೂಟ್ಸ್, ಹಣ್ಣು, ಬಟ್ಟೆ ಹಾಗೂ ಇತರೆ ಅಗತ್ಯ ವಸ್ತುಗಳನ್ನು ತೆಗದೆುಕೊಂಡು ಹೋಗಿದ್ದರು ಎಂದು ತಿಳಿದುಬಂದಿದೆ. ಮತ್ತೊಂದೆಡೆ ವಕೀಲರ ಜೊತೆ ವಿಜಯಲಕ್ಷ್ಮಿ ಜೈಲಿಗೆ ಹೋಗಿದ್ದು, ಇದು ಮತ್ತೆ ಬೇರೆ ಜೈಲಿಗೆ ಶಿಫ್ಟ್ ಮಾಡುವ ವಿಚಾರವನ್ನು ಏನಾದರೂ ಮಾತನಾಡಿದ್ದಾರೆಯಾ ಎನ್ನುವ ಅನುಮಾನ ಹುಟ್ಟುಹಾಕಿದೆ.












Click it and Unblock the Notifications