Actor Darshan Bail: ದರ್ಶನ್‌ರನ್ನು ಕಾಡುತ್ತಿದೆ ಗಂಭೀರ ಸಮಸ್ಯೆ; ಆರೋಗ್ಯದ ಬಗ್ಗೆ ವಕೀಲರಿಂದ ಮಾಹಿತಿ

ನಟ ದರ್ಶನ್ ತೂಗುದೀಪ ಅವರ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿದ್ದು, ಹಿರಿಯ ವಕೀಲ ಸಿ.ವಿ. ನಾಗೇಶ್ ದರ್ಶನ್ ಪರವಾಗಿ ವಾದ ಮಂಡಿಸುತ್ತಿದ್ದಾರೆ. ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ಪೀಠದಿಂದ ಅರ್ಜಿ ವಿಚಾರಣೆ ನಡೆಯುತ್ತಿದ್ದು, ದರ್ಶನ್‌ ಬೆನ್ನು ನೋವಿನಿಂದ ನರಳುತ್ತಿದ್ದು ಅವರಿಗೆ ಚಿಕಿತ್ಸೆ ಪಡೆಯಲು ಮಧ್ಯಂತರ ಜಾಮೀನು ನೀಡಬೇಕು ಎಂದು ದರ್ಶನ್ ಪರ ವಕೀಲರು ವಾದ ಮಾಡುತ್ತಿದ್ದಾರೆ.

ವಿಚಾರಣೆ ಸಂದರ್ಭದಲ್ಲಿ ದರ್ಶನ್‌ರ ಆರೋಗ್ಯ ಸಮಸ್ಯೆ ಬಗ್ಗೆ ಇಂಚಿಂಚೂ ಮಾಹಿತಿಯನ್ನು ನೀಡಿದ್ದು, ಸೂಕ್ತ ಚಿಕಿತ್ಸೆ ಪಡೆಯದೇ ಇದ್ದರೆ ಭಾರಿ ಸಮಸ್ಯೆಯಾಗುತ್ತದೆ ಎಂದು ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಬೆನ್ನಿನ ನರದಲ್ಲಿ ನೋವು ಕಾಣಿಸಿಕೊಂಡಿದ್ದು, ನರದ ಸಮಸ್ಯೆಯಿಂದ ಪಾದದಲ್ಲಿ ಸ್ಪರ್ಶ ಕಡಿಮೆಯಾಗಿದ್ದು, ಮುಂದೆ ಮೂತ್ರನಾಳದ ಸಮಸ್ಯೆಗೆ ಕಾರಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

What the Lawyer Said About Darshan Health During Bail Application hearing

ಇದಕ್ಕೆ ಪ್ರತಿಕ್ರಿಯೆ ನೀಡಿರುವ ನ್ಯಾಯಮೂರ್ತಿ ಎಸ್‌. ವಿಶ್ವಜಿತ್ ಶೆಟ್ಟಿ, ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇದ್ದು, ಅಲ್ಲಿಯೇ ಚಿಕಿತ್ಸೆ ಪಡೆಯಲು ಆಗುವುದಿಲ್ಲವಾ ಎಂದು ಕೇಳಿದೆ. ಎಸ್‌ಪಿಪಿ ಪ್ರಸನ್ನ ಕುಮಾರ್ ಕೂಡ ಬೋರಿಂಗ್ ಆಸ್ಪತ್ರೆಯಲ್ಲಿ ದರ್ಶನ್ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ದರ್ಶನ್ ಪರ ವಕೀಲರು, ತನ್ನದೇ ಖರ್ಚಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೊಡಬೇಕು ಎಂದು ಕೇಳಿದೆ. ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಪ್ರಾಸಿಕ್ಯೂಷನ್ ಸೂಚಿಸಲು ಸಾಧ್ಯವಿಲ್ಲ. ನಂಬಿಕೆ ಇರುವ ವೈದ್ಯರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು, ಏನಾದರೂ ಸಮಸ್ಯೆಯಾದರೆ ಯಾರನ್ನು ಹೊಣೆ ಮಾಡಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

ಈ ಪ್ರಕರಣದಲ್ಲಿ ಬಳ್ಳಾರಿ ವಿಮ್ಸ್‌ನ ನರರೋಗ ತಜ್ಞರು ನೀಡಿರುವ ವರದಿಗೆ ಆಕ್ಷೇಪ ಪಡಿಸುವುದಿಲ್ಲ ಎಂದು ನಂಬಿದ್ದೇನೆ ಎಂದು ಸಿವಿ ನಾಗೇಶ್ ಹೇಳಿದ್ದು, ಸುಪ್ರೀಂ ಕೋರ್ಟ್ ವಿಕ್ರಂ ಸಿಂಗ್ ಪ್ರಕರಣದಲ್ಲಿ ವೈದ್ಯಕೀಯ ಆಧಾರದಲ್ಲಿ ಮಧ್ಯಂತರ ಜಾಮೀನು ವರದಿ ನೀಡಿದ್ದನ್ನು ಉಲ್ಲೇಖಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+