Darshan Thoogudeepa: ನಟ ದರ್ಶನ್‌ ಪ್ರಕರಣದ ಚಾರ್ಜ್‌ ಶೀಟ್‌ ಸಲ್ಲಿಕೆಗೆ ದಿನಾಂಕ ಫಿಕ್ಸ್‌.? ಇಲ್ಲಿಗೆ ಮಾಹಿತಿ

Darshan Thoogudeepa: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್‌ ಜೊತೆ 17 ಜನ ಆರೋಪಿಗಳು ಜೈಲು ಸೇರಿದ್ದಾರೆ. ಈ ಪ್ರಕರಣದ ತನಿಖೆ ಈಗಾಗಲೇ ಮುಕ್ತಾಯದ ಹಂತದಲ್ಲಿದ್ದು, ಪೊಲೀಸರು ಚಾರ್ಜ್‌ ಶೀಟ್‌ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಹಾಗಾದರೆ ಯಾವಾಗ ಸಲ್ಲಿಕೆ ಮಾಡಲಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ ರೆಸಾರ್ಟ್‌ ರೀತಿಯಲ್ಲಿ ವಿಲ್ಸನ್‌ ಗಾರ್ಡನ್‌ ನಾಗ ಜೊತೆ ರೌಂಡ್‌ ಟೇಬಲ್‌ ಪಾರ್ಟಿ ಮಾಡಿ, ಈ ವೇಳೆ ಒಂದು ಕೈಯಲ್ಲಿ ಕಾಫಿ ಮಗ್‌ ಮತ್ತೊಂದು ಕೈಯಲ್ಲಿ ಸಿಗರೇಟ್‌ ಹಿಡಿದು ಹರಟೆ ಹಡೆಯುತ್ತಿರುವ ಫೋಟೋ ಹಾಗೂ ವಿಐಪಿ ಸೆಲ್‌ನಿಂದಲೇ ರೌಡಿ ಶೀಟರ್‌ಗಳ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡಿರುವ ವಿಡಿಯೋ ಭಾರೀ ವೈರಲ್‌ ಆಗಿದ್ದವು.

When will charge sheet submitted of actor Darshan s case

ಇದಕ್ಕೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಸರ್ಕಾರ 9 ಜೈಲಾಧಿಕಾರಿಗಳನ್ನು ಅಮಾನತುಗೊಳಿಸಿತು. ಬಳಿಕ ಜೈಲಿನಲ್ಲೆ ರಾಜಾತಿಥ್ಯ ಹಿನ್ನೆಲೆ ಕೋರ್ಟ್‌ ಆದೇಶದ ಮೇರೆಗೆ ಪೊಲೀಸರು ದರ್ಶನ್‌ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಿದರು. ಇದೀಗ ಸಚಿವ ಜಮೀರ್‌ ಅಹ್ಮದ್‌ ಬಳ್ಳಾರಿ ಉಸ್ತುವಾರಿ ಸಚಿವ ಆಗಿದ್ದರಿಂದ ಅವರೇ ಪ್ಲಾನ್‌ ಮಾಡಿ ದರ್ಶನ್‌ನನ್ನು ಇಲ್ಲಿಗೆ ಶಿಫ್ಟ್‌ ಮಾಡಿಸಿದ್ದಾರೆ ಎನ್ನುವ ಆರೋಪಗಳು ಕೂಡ ಕೇಳಿಬರುತ್ತಿವೆ.

ಇನ್ನೂ ಇದಕ್ಕೆ ಸ್ಪಷ್ಟನೆ ನೀಡಿದ ಸಚಿವ ಜಮೀರ್ ಅಹ್ಮದ್‌, ನಾನೇನು ಡಿಐಜಿನಾ, ಕಾನೂನು ಪ್ರಕಾರ ಅವರನ್ನು ಇಲ್ಲಿಗೆ ಶಿಫ್ಟ್ ಮಾಡಿದ್ದಾರೆ ಅಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ. ಇನ್ನೂ ಮತ್ತೊಂದೆಡೆ ಈಗಾಗಲೇ ಪೊಲೀಸರು ಈ ಪ್ರಕರಣದ ಚಾರ್ಜ್‌ ಶೀಟ್‌ ಅನ್ನು ಸಲ್ಲಿಕೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಹಾಗಾದರೆ ಸದರಲ್ಲೇನಿದೆ ಎಂದು ಇಲ್ಲಿ ತಿಳಿಯಿರಿ.

ದರ್ಶನ್ & ಗ್ಯಾಂಗ್ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪವನ್ನು ಎದುರಿಸುತ್ತಿದ್ದು, ಸದ್ಯ ಎಲ್ಲರೂ ಜೈಲಿನಲ್ಲಿದ್ದಾರೆ. ಈ ನಡುವೆ ಪವಿತ್ರಾ ಗೌಡ ಜಾಮೀನು ಅರ್ಜಿಯೂ ಕೂಡ ಕೋರ್ಟ್‌ನಲ್ಲಿ ವಜಾ ಆಗಿದೆ. ಮತ್ತೊಂದೆಡೆ ನಟ ದರ್ಶನ್ & ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ದಿನಗಣನೆ ಶುರುವಾಗಿದ್ದು, ಮುಂದಿನ ವಾರ ಬಹುತೇಕ ಚಾರ್ಜ್ ಶೀಟ್ ಸಲ್ಲಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಈಗಾಗಲೇ ಕಾನೂನು ತಜ್ಞರ ಮೂಲಕ ಚಾರ್ಜ್ ಶೀಟ್ ಪ್ರತಿ ಪರಿಶೀಲನೆ ನಡೆಸಿದ ಪೊಲೀಸರು ಈ ಕುರಿತು ಕೊನೆಯ ಹಂತದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೆ, ಹಿರಿಯ ಅಧಿಕಾರಿಗಳಿಂದಲೂ ಚಾರ್ಜ್ ಶೀಟ್ ಪ್ರತಿ ಪರಿಶೀಲನೆ ಕೆಲಸ ನಡೆಯುತ್ತಿದ್ದು, ಬಹುತೇಕ ಚಾರ್ಜ್ ಶೀಟ್ ತಯಾರಿಯ ಎಲ್ಲ ಪ್ರಕ್ರಿಯೆ ಮುಗಿಸಿದ ಪೊಲೀಸರು ಎಲ್ಲವನ್ನು ಮತ್ತೆ ಪರಿಶೀಲಿಸುತ್ತಿದ್ದಾಎಎ. ಆದರೆ ಈ ಒಂದು ಪ್ರಕರಣದಲ್ಲಿ ಎಫ್ಎಸ್ಎಲ್ ವರದಿ ಮಾತ್ರ ಬಾಕಿಯಿದೆ ಎಂದು ತಿಳಿದುಬಂದಿದೆ.

ಈ ವರದಿಗಳೆಲ್ಲ ಕೈ ಸೇರಿದ ಬಳಿಕ ಪೊಲೀಸರು ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ. ಚಾರ್ಜ್ ಶೀಟ್ ಸಲ್ಲಿಕೆಗೆ ಇನ್ನೂ 10 ದಿನಗಳಷ್ಟೇ ಬಾಕಿಯಿದೆ. ಸೆಪ್ಟೆಂಬರ್ 10ರೊಳಗೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಬೇಕಾಗಿರುತ್ತದೆ. ಬಹುತೇಕ ಸೆಪ್ಟೆಂಬರ್ 5ರೊಳಗೆ ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ ಆಗಲಿದೆ ಎಂದು ಹೇಳಲಾಗುತ್ತಿದೆ.

ಪೊಲೀಸರು ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕೊನೆಯ ಹಂತದ ತಯಾರಿ ನಡೆಯುತ್ತಿದೆ ಎನ್ನಲಾಗಿದೆ. 4000ಕ್ಕೂ ಹೆಚ್ಚು ಪುಟದ ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ಸಿದ್ಧತೆ ಮಾಡಲಾಗಿದೆ. ಈ ಒಂದು ಕೇಸ್‌​​ನಲ್ಲಿ 60 ದಿನಗಳ ಕಾಲ ತನಿಖೆ ಮಾಡಿದ್ದು, ಚಾರ್ಜ್ ಶೀಟ್ ಕೋರ್ಟ್‌​ಗೆ ಸಲ್ಲಿಸುವುದಕ್ಕೆ ಕ್ಷಣಗಣನೆ ಶುರುವಾಗಿದೆ ಎನ್ನಲಾಗಿದೆ.

ಈ ಪ್ರಕರಣದಲ್ಲಿ 17 ಜನ ಆರೋಪಿಗಳಿದ್ದು, 200ಕ್ಕೂ ಹೆಚ್ಚು ಸಾಕ್ಷಿಗಳನ್ನು ಸಂಗ್ರಹಿಸಿದ್ದಾರೆ. ಆರೋಪಿಗಳಿಗೆ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ 4,000 ಪುಟದ ಚಾರ್ಜ್‌ ಶೀಟ್‌ ತಯಾರು ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತೀರ್ಪು ಕೊಡುವ ಸಂದರ್ಭದಲ್ಲಿ ಚಾರ್ಜ್ ಶೀಟ್ ತುಂಬಾ ಮುಖ್ಯವಾಗಿದೆ.

ಈಗಾಗಲೇ ಬಹುತೇಕ ಚಾರ್ಜ್‌ ಶೀಟ್‌ ತಯಾರಾಗಿದ್ದು, ಕಿಡ್ನ್ಯಾಪ್, ಕೊಲೆ, ಶವ ಸಾಗಾಟದ ವಿಚಾರಗಳನ್ನು ದಾಖಲೆ ಮಾಡಲಾಗಿದೆ ಎಂದು ಹೇಳಲಾಗಿದೆ. 17 ಆರೋಪಿಗಳ ಹೇಳಿಕೆಗಳನ್ನು ಸಹ ದಾಖಲಿಸಲಾಗಿದೆ ಎಂದು ತಿಳುದುಬಂದಿದೆ. ಅಲ್ಲದೆ, ದರ್ಶನ್ ಬಟ್ಟೆ ಮೇಲಿನ ರಕ್ತದ ಕಲೆಯ ಸಂಪೂರ್ಣ ರಿಪೋರ್ಸ್, ಸಾಕ್ಷಿಗಳ ಹೇಳಿಕೆ, ಆರೋಪಿಗಳ ಹೇಳಿಕೆಯನ್ನು ಸಹ ದಾಖಲು ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+