Pawan Kalyan Wife: ರಷ್ಯನ್ ಮಾಡೆಲ್, ನಟ ಪವನ್ ಕಲ್ಯಾಣ್ ಮೂರನೇ ಪತ್ನಿ ಅನ್ನಾ ಲೆಜ್ನೆವಾ ಯಾರು ಗೊತ್ತೆ?
ತೆಲುಗು ಚಿತ್ರರಂಗದಲ್ಲಿ ಆಳ್ವಿಕೆ ನಡೆಸಿದ ಅಣ್ಣ ತಮ್ಮ ಜೋಡಿಯಾಗಿ ಮೆಗಾಸ್ಟಾರ್ ಚಿರಂಜೀವಿ ಮತ್ತು ನಟ ಪವನ್ ಕಲ್ಯಾಣ್ ಜನಮಾನಸದಲ್ಲಿ ತುಂಬಿದ್ದಾರೆ. ನಟನೆ ಜೊತೆಗೆ ರಾಜಕೀಯಕ್ಕೆ ಎಂಟ್ರಿ ಕೊಟ್ಟಿರುವ ಪವನ್ ಕಲ್ಯಾಣ್, ತಮ್ಮ ಜನಸೇನಾ ಪಕ್ಷ (ಜೆಎಸ್‌ಪಿ) ಪಕ್ಷದ ಮೂಲಕ ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ ಮತ್ತು ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗಳಲ್ಲಿ ದಾಖಲೆಯನ್ನೇ ನಿರ್ಮಿಸಿದೆ.
ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಭಾಗವಾಗಿದ್ದ ಜನಸೇನಾ ಪಕ್ಷ ಈ ಬಾರಿ ಇತಿಹಾಸ ಸೃಷ್ಟಿಸಿದೆ. ಆಂಧ್ರಪ್ರದೇಶ ವಿಧಾನಸಭೆಯಲ್ಲಿ 21 ಶಾಸಕರನ್ನು ಜೆಎಸ್‌ಪಿ ಹೊಂದಿದೆ. ಚುನಾವಣಾ ಫಲಿತಾಂಶದ ಬೆನ್ನಲ್ಲೇ ಹೆಚ್ಚು ಸುದ್ದಿಯಾಗುತ್ತಿರುವುದು ಮತ್ತು ಎಲ್ಲರ ಗಮನ ಸೆಳೆಯುತ್ತಿರುವ ಪವನ್ ಕಲ್ಯಾಣ್ ಜೊತೆಗೆ ಎಲ್ಲಾ ಚುನಾವಣಾ ಪ್ರಚಾರಗಳು ಮತ್ತು ಎಲ್ಲಾ ಸಂದರ್ಭದಲ್ಲೂ ಜೊತೆಗಿರುವ ವಿದೇಶಿ ಮಹಿಳೆ.

ಯಾರು ಈ ವಿದೇಶಿ ಮಹಿಳೆ..?
ನಟ ಪವನ್ ಕಲ್ಯಾಣ್ ದೊಡ್ಡ ಸಾಧನೆ ಮಾಡಿ ಬಂದಾಗ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ್ದು ಅವರ ಪತ್ನಿ ಅನ್ನಾ ಲೆಜ್ನೆವಾ. ಹೌದು... ರಷ್ಯಾದ ಅನ್ನಾ ಲೆಜ್ನೆವಾ ಅವರು ಪವನ್ ಕಲ್ಯಾಣ್ ಅವರ ಮೂರನೇ ಪತ್ನಿ. ಅವರ ವಿಡಿಯೋ, ಫೋಟೋಗಳು ವೈರಲ್ ಆದ ಹಾಗೇಯೇ ಅವರ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಕೂಡ ಜನರಲ್ಲಿ ಹೆಚ್ಚಾಗಿತ್ತು. ಅವರ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಅನ್ನಾ ಲೆಜ್ನೆವಾ 1980 ರಲ್ಲಿ ರಷ್ಯಾದಲ್ಲಿ ಜನಿಸಿದರು. ಅವರು ಮಾಡೆಲ್ ಮತ್ತು ನಟಿ. 2011 ರಲ್ಲಿ ತೀನ್ ಮಾರ್ ಚಿತ್ರದ ಚಿತ್ರೀಕರಣದ ಸಮಯದಲ್ಲಿ ಪವನ್ ಕಲ್ಯಾಣ್ ಅವರನ್ನು ಭೇಟಿಯಾದರು. ಸಿನಿಮಾದಲ್ಲಿನ ಅವರ ಸಂಬಂಧ ಪ್ರೇಮವಾಗಿ ಬದಲಾಗಿತ್ತು. ಎರಡು ವರ್ಷಗಳ ಡೇಟಿಂಗ್ ನಂತರ ಈ ಜೋಡಿ ಸೆಪ್ಟೆಂಬರ್ 30, 2013 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಅನ್ನಾ ಲೆಜ್ನೆವಾ ಪವನ್ ಕಲ್ಯಾಣ್ ಅವರ ಮೂರನೇ ಪತ್ನಿ. ಅನ್ನಾಗೆ ಈ ಹಿಂದೆಯೇ ಮದುವೆಯಾಗಿ ಪೋಲೆನಾ ಅಂಜನಾ ಪವನ್ನೋವಾ ಎಂಬ ಮಗಳಿದ್ದಾರೆ. ಅವರಿಗೆ ಇದು ಎರಡನೇ ಮದುವೆ. ಈ ದಂಪತಿಗೆ ಮಾರ್ಕ್ ಶಂಕರ್ ಪವನೋವಿಚ್ ಎಂಬ ಮಗನಿದ್ದಾನೆ. ಮಾಡೆಲ್ ಮತ್ತು ನಟಿಯಾಗಿ ಗುರುತಿಸಿಕೊಂಡಿದ್ದರು.
ತನ್ನ ಮಾಡೆಲಿಂಗ್ ವೃತ್ತಿಜೀವನದ ಹೊರತಾಗಿ, ಅನ್ನಾ ಲೆಜ್ನೆವಾ ಅವರು ಸಿಂಗಾಪುರದಲ್ಲಿ ಹೋಟೆಲ್‌ಗಳನ್ನು ಹೊಂದಿದ್ದಾರೆ ಎಂದು ವದಂತಿಗಳಿವೆ ಮತ್ತು ರಷ್ಯಾ ಮತ್ತು ಸಿಂಗಾಪುರ್ ಎರಡರಲ್ಲೂ ಆಸ್ತಿ ಸೇರಿದಂತೆ ಸುಮಾರು 1,800 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಇತ್ತೀಚೆಗೆ ನಟ ವರುಣ್ ತೇಜ್ ಅವರ ನಿಶ್ಚಿತಾರ್ಥ ಮತ್ತು ರಾಮ್ ಚರಣ್ ಮತ್ತು ಉಪಾಸನಾ ಅವರ ಮಗಳ ತೊಟ್ಟಿಲು ಸಮಾರಂಭದಂತಹ ಪ್ರಮುಖ ಫ್ಯಾಮಿಲಿ ಫಂಕ್ಷನ್‌ಗಳಲ್ಲಿ ಅನ್ನಾ ಲೆಜ್ನೆವಾ ಭಾಗಿಯಾಗಿರಲಿಲ್ಲ. ಆಗ ಇಬ್ಬರು ಬೇರೆ ಭೇರೆಯಾಗಿದ್ದಾರೆ ಎಂಬ ವದಂತಿಗಳು ಹರಡಿದ್ದವು. ಆದಾಗಿ ಕೆಲವೇ ದಿನಗಳಲ್ಲಿ ಅನ್ನಾ ಲೆಜ್ನೆವಾ ತನ್ನ ಗಂಡನ ಚುನಾವಣಾ ಪ್ರಚಾರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಎಲ್ಲಾ ವದಂತಿಗೆ ಬ್ರೇಕ್ ಹಾಕಿದರು.
ಇನ್ನು, ನಟ ಪವನ್ ಕಲ್ಯಾಣ್ ಈ ಹಿಂದೆ 1997 ರಲ್ಲಿ 19 ವರ್ಷದ ನಂದಿನಿ ಅವರನ್ನು ವಿವಾಹವಾಗಿದ್ದರು. 2008 ರಲ್ಲಿ ವಿಚ್ಛೇದನ ನೀಡಿದರು. 2009 ರಲ್ಲಿ ನಟಿ ರೇಣು ದೇಸಾಯಿ ಅವರನ್ನು ವಿವಾಹವಾದರು. 2012 ರಲ್ಲಿ ಅವರಿಗೂ ವಿಚ್ಛೇಧನ ನೀಡಿದರು. ಈ ಜೋಡಿಗೆ ಅಕಿರಾ ನಂದನ್ ಮತ್ತು ಆಧ್ಯ ಎಂಬ ಇಬ್ಬರು ಮಕ್ಕಳಿದ್ದಾರೆ. ಇದಾದ ಬಳಿಕ ಅನ್ನಾ ಲೆಜ್ನೆವಾ ಜೊತೆಗೆ ಮೂರನೇ ವಿವಾಹವಾಗಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications