Yash: ವಿಲನ್ ಪಾತ್ರಕ್ಕೆ 200 ಕೋಟಿ ರೂ ಸಂಭಾವನೆ ಪಡೆದ ಕನ್ನಡದ ನಟ
ಭಾರತೀಯ ಚಿತ್ರರಂಗದಲ್ಲಿ ಬಾಲಿವುಡ್ ನಟ-ನಟಿಯರು ಅತಿಹೆಚ್ಚು ಸಂಭಾವನೆ ಪಡೆದುಕೊಳ್ಳುತ್ತಿದ್ದರು. ಆದರೆ ಇದೀಗ ನಟರ ಪಾತ್ರಕ್ಕಿಂತ ವಿಲನ್ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಬಂದಿದೆ. ನಾಯಕರ ಸಂಭಾವನೆಯೂ ಹೆಚ್ಚಾಗಿರುವುದರಿಂದ ಖಳನಾಯಕರ ಸಂಭಾವನೆಯೂ ಹೆಚ್ಚಿದೆ.
ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಖಳನಾಯಕ ಪಾತ್ರಕ್ಕಾಗಿ ಮೊದಲ ಬಾರಿಗೆ ಬರೊಬ್ಬರಿ 200 ಕೋಟಿ ರೂ. ಸಂಭಾವನೆ ಪಡೆಯುವ ಮೂಲಕ ಕನ್ನಡದ ಸ್ಟಾರ್ ಇದೀಗ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಬಾಲಿವುಡ್ ನಲ್ಲಿ ಶಾರುಖ್ ಖಾನ್, ಸಲ್ಮಾನ್ ಖಾನ್, ರಣಬೀರ್ ಕಪೂರ್ ಮತ್ತಿತರರು ಅತಿ ಹೆಚ್ಚು ಸಂಭಾವನೆ ಪಡೆಯುತ್ತಾರೆ. ಬಳಿಕ ಸೌತ್ ಸ್ಟಾರ್ ಗಳಾದ ರಜನಿಕಾಂತ್, ಕಮಲ್ ಹಾಸನ್ ಮತ್ತು ಪ್ರಭಾಸ್ ಸೇರಿದಂತೆ ಹಲವು ನಟರು ದುಪ್ಪಟ್ಟು ಸಂಭಾವನೆ ಪಡೆಯುತ್ತಾರೆ ಎಂದು ವರದಿಯಾಗಿದೆ. ಈ ಸಾಲಿಗೆ ಇದೀಗ ಕನ್ನಡದ ಸ್ಟಾರ್ ನಟ ರಾಕಿಂಗ್ ಸ್ಟಾರ್ ಯಶ್ ಅವರು ಸೇರ್ಪಡೆಗೊಂಡಿದ್ದಾರೆ.

ಇತ್ತೀಚಿನ ದಿನದ ಸಿನಿಮಾಗಳಲ್ಲಿ ನಟರ ಪಾತ್ರಕ್ಕಿಂತ ವಿಲನ್ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಬಂದಿದೆ. ಅಷ್ಟೇ ಅಲ್ಲ, ನಾಯಕರ ಸಂಭಾವನೆಯೂ ಹೆಚ್ಚಾಗಿರುವುದರಿಂದ ಖಳನಾಯಕರ ಸಂಭಾವನೆಯೂ ಹೆಚ್ಚಿದೆ. ಹೈ-ಬಜೆಟ್ ಚಿತ್ರಗಳಲ್ಲಿ ಮುಖ್ಯವಾಹಿನಿಯ ಹೀರೋಗಳು ವಿಲನ್ ಆಗುವ ಸಂಖ್ಯೆ ಹೆಚ್ಚುತ್ತಿದೆ. ಅವರಲ್ಲಿ ಕನ್ನಡದ ನಟರೊಬ್ಬರು ಚಿತ್ರವೊಂದಕ್ಕೆ 200 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಅವರು ಹಲವು ಚಿತ್ರಗಳಲ್ಲಿ ನಟಿಸುವ ಮೂಲಕ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳ ಮನ ಗೆದ್ದಿದ್ದಾರೆ. ಇನ್ನೂ ಕೆಜಿಎಫ್ ಚಿತ್ರದ ಮೂಲಕ ಖ್ಯಾತಿ ಪಡೆದಿರುವ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಸಾಲು ಸಾಲು ಅವಕಾಶಗಳು ದೊರೆಯುತ್ತಿದೆ. ಆದರೆ ಯಶ್ ತಮ್ಮ ಮುಂದಿನ ಚಿತ್ರಕ್ಕಾಗಿ ದೊಡ್ಡ ಮಟ್ಟದ ಸಂಭಾವನೆ ಪಡೆಯುತ್ತಿದ್ದಾರೆ ಎಂದು ಎಲ್ಲೆಡೆ ಸದ್ದು ಮಾಡುತ್ತಿದೆ. ಬಾಲಿವುಡ್ ನಿತೇಶ್ ತಿವಾರಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ರಾಮಾಯಣ ಚಿತ್ರದಲ್ಲಿ ಯಶ್ ಖಳನಾಯಕನ(ರಾವಣ) ಪಾತ್ರ ನಿರ್ವಹಿಸುತ್ತಿದ್ದು, ಈ ಪಾತ್ರಕ್ಕೆ ಬರೊಬ್ಬರಿ 200 ಕೋಟಿ ರೂ. ಸಂಭಾವನೆ ಇದೆ ಎಂದು ವರದಿಯಾಗಿದೆ. ಅಲ್ಲದೇ, ಈ ಚಿತ್ರದಲ್ಲಿನ ರಾಮನ ಪಾತ್ರಧಾರಿ ರಣಬೀರ್ ಕಪೂರ್ ಗಿಂತ ದುಪ್ಪಟ್ಟು ಎಂದು ಹೇಳಲಾಗುತ್ತಿದೆ.
ಭಾರತೀಯ ಚಿತ್ರರಂಗದಲ್ಲಿ ಹೊಸ ಬೆಳವಣಿಗೆಯೊಂದರಲ್ಲಿ ಕನ್ನಡ ನಟ ಯಶ್ ಅತಿ ಹೆಚ್ಚು ಸಂಭಾವನೆ ಪಡೆಯುವ ಖಳನಾಯಕನಾಗಿ ಹೊರಹೊಮ್ಮಿದ್ದಾರೆ. ನಿತೇಶ್ ತಿವಾರಿ ಅವರ ಮುಂಬರುವ ಚಿತ್ರ ರಾಮಾಯಣದಲ್ಲಿ ರಾವಣನ ಪಾತ್ರಕ್ಕಾಗಿ ಅವರು 200 ಕೋಟಿ ರೂಪಾಯಿಗಳನ್ನು ಗಳಿಸಲು ಸಿದ್ಧರಾಗಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಚಿತ್ರರಂಗದಲ್ಲಿ ಸಾಮಾನ್ಯವಾಗಿ ದಕ್ಷಿಣದ ಸ್ಟಾರ್ ಗಳಾದ ರಜನಿಕಾಂತ್, ಕಮಲ್ ಹಾಸನ್ ಮತ್ತು ಪ್ರಭಾಸ್ ಸೇರಿದಂತೆ ಹಲವು ನಟರು ದುಪಟ್ಟು ಸಂಭಾವನೆ ಪಡೆಯುತ್ತಿರುವುದು ವರದಿಯಾಗಿದೆ. ಇದೀಗ ಬಾಲಿವುಡ್ ನ್ ಶಾರುಖ್ ಖಾನ್, ಸಲ್ಮಾನ್, ರಣಬೀರ್ ಕಪೂರ್ ಸೇರಿದಂತೆ ದಕ್ಷಿಣ ನಟರ ಸಂಭಾವನೆಯನ್ನು ಮೀರಿಸಿ ನಮ್ಮ ಕನ್ನಡ ನಟ ಯಶ್ ಅವರು ಇತಿಹಾಸ ಬರೆದಿದ್ದಾರೆ. ಯಶ್ ಮೊದಲ ಬಾರಿಗೆ ದಾಖಲೆಯ ಸಂಭಾವನೆ ಪಡೆಯುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ನಿತೇಶ್ ತಿವಾರಿಯವರ ರಾಮಾಯಣವು ವಾಲ್ಮೀಕಿಯ ಮಹಾಕಾವ್ಯದ ಎರಡು ಭಾಗಗಳ ಸಿನಿಮಾ ರೂಪಾಂತರವಾಗಿದೆ ಎಂದು ನಿರೀಕ್ಷಿಸಲಾಗಿದೆ. ಮೊದಲ ಭಾಗವು ಮುಂದಿನ ವರ್ಷ ಥಿಯೇಟರ್‌ಗಳಲ್ಲಿ ಬರುವ ನಿರೀಕ್ಷೆಯಿದೆ. ಈ ಚಿತ್ರದಲ್ಲಿ ಯಶ್ ಜೊತೆಗೆ ರಣಬೀರ್ ಕಪೂರ್ ಮತ್ತು ಸಾಯಿ ಪಲ್ಲವಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇಂದಿನ ದಿನಗಳಲ್ಲಿ ಹೀರೋಗಳ ಸಂಭಾವನೆ ಹೆಚ್ಚಾದಂತೆ ಖಳನಾಯಕನ ಪಾತ್ರಗಳಲ್ಲಿ ನಟಿಸುವ ನಟರ ಸಂಬಳವೂ ಹೆಚ್ಚಾಗಿದೆ.












Click it and Unblock the Notifications