ನಟ ಯಶ್ ತಾಯಿ ಕಡೆಯವರಿಂದ ನನಗೆ ಜೀವ ಬೆದರಿಕೆ: ಹಾಸನದ ದೇವರಾಜ್ ಆರೋಪ
ಹಾಸನ: ನಟ ಯಶ್ ಅವರ ತಾಯಿ ಪುಷ್ಪ ಅರುಣ್‌ಕುಮಾರ್ ಹಾಗೂ ಹಾಸನದ ದೇವರಾಜ್ ನಡುವಿನ ಆಸ್ತಿ ವಿವಾದ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪರಸ್ಪರ ಆರೋಪ-ಪ್ರತ್ಯಾರೋಪಗಳ ನಡುವೆ ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಕೂಡ ದಾಖಲಾಗಿದ್ದು, ವಿಷಯ ಮತ್ತೆ ಸುದ್ದಿಯಾಗುತ್ತಿದೆ. ಪುಷ್ಪ ಅವರು ನಿನ್ನೆಯಷ್ಟೇ ಹಾಸನ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಮತ್ತೊಂದೆಡೆ ನಮಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ದೇವರಾಜ್ ಕೂಡ ಗಂಭೀರ ಆರೋಪ ಮಾಡಿದ್ದಾರೆ.
ಈ ವಿವಾದದ ಕುರಿತು ಹಾಸನದ ದೇವರಾಜ್ ಅವರು ಮಾಧ್ಯಮಗಳ ಮುಂದೆ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಪುಷ್ಪ ಅರುಣ್‌ಕುಮಾರ್ ಹಾಗೂ ಅವರ ಪಕ್ಕದಲ್ಲಿರುವವರು ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪುಷ್ಪಾ ಮೇಡಂ ಹಾಗೂ ಅವರ ಜೊತೆಗೆ ಇರುವ ವೆಯ್ಟ್ ಮೆಜರ್‌ಮೆಂಟ್ ಇನ್ಸ್‌ಪೆಕ್ಟರ್ ನಟರಾಜು ಮತ್ತು ದುರ್ಗಾ ಪ್ರಸಾದ್ ಎಂಬವರು ನನ್ನ ಮೇಲೆ ಹಾಗೂ ನನ್ನ ಬೆಂಬಲಿಗರ ಮೇಲೆ ದೂರು ನೀಡಿದ್ದು, ನಾವು ಅವರಿಗೆ ಬೆದರಿಕೆ ಹಾಕಿದ್ದೇವೆ ಎಂದು ಆರೋಪ ಮಾಡಿದ್ದಾರೆ. ಆದರೆ ನಾನು ಅವರಿಗೆ ಯಾವುದೇ ಅಡ್ಡಿ ಮಾಡಿಲ್ಲ. ನಿಜವಾಗಿ ಅವರೇ ನನಗೆ ತೊಂದರೆ ಕೊಡುತ್ತಿದ್ದಾರೆ ಎಂದು ದೇವರಾಜ್ ದೂರಿದ್ದಾರೆ.

ಈ ವಿಚಾರ ನ್ಯಾಯಾಲಯದ ಮುಂದೆ ಇದ್ದು, ಕೋರ್ಟ್ ಆದೇಶವಿದ್ದರೂ ಅದನ್ನು ಉಲ್ಲಂಘಿಸಿ ಅವರು ಆ ಜಾಗಕ್ಕೆ ಹೋಗಿದ್ದಾರೆ. ಕೋರ್ಟ್ ಆದೇಶದ ಬಗ್ಗೆ ಪ್ರಶ್ನಿಸಲು ನಾವು ಹೋದಾಗ, ನಟರಾಜು ಹಾಗೂ ದುರ್ಗಾ ಪ್ರಸಾದ್ ಅವರು ನಮಗೆ ಜೀವ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ನಾನು ಕೂಡ ಅವರ ವಿರುದ್ಧವೂ ದೂರು ನೀಡುತ್ತೇನೆ ಎಂದಿದ್ದಾರೆ.
ಆಸ್ತಿ ವಿಚಾರವಾಗಿ ಈಗಾಗಲೇ ನ್ಯಾಯಾಲಯದ ಮೆಟ್ಟಿಲೇರಿರುವ ಈ ಪ್ರಕರಣದಲ್ಲಿ, ಎರಡೂ ಪಾಳಯಗಳು ಪರಸ್ಪರ ಗಂಭೀರ ಆರೋಪಗಳನ್ನು ಮಾಡಿಕೊಳ್ಳುತ್ತಿರುವುದರಿಂದ ವಿವಾದ ಇನ್ನಷ್ಟು ಗಂಭೀರವಾಗುವ ಲಕ್ಷಣಗಳು ಕಾಣಿಸುತ್ತಿವೆ. ಹೊಸ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಎಂಬುದು ಕಾದುನೋಡಬೇಕಿದೆ.
ಪುಷ್ಪ ಅರುಣ್ ಕುಮಾರ್ ಏನಂದ್ರು?
ಹಾಸನದಲ್ಲಿ ತಮ್ಮ ಮನೆಗೆ ಸೇರಿದ ಕಾಂಪೌಂಡ್ ಧ್ವಂಸ ಆರೋಪದ ಮೇರೆಗೆ ನಟ ಯಶ್ ತಾಯಿ ಪುಷ್ಪ ಅವರು ಹಾಸನ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅತಿಕ್ರಮ ಪ್ರವೇಶ, ಕಳ್ಳತನ ಹಾಗೂ ಕೊಲೆ ಬೆದರಿಕೆ ಆರೋಪದಡಿ ಕೇಸ್ ದಾಖಲಾಗಿದೆ. ವಿದ್ಯಾನಗರದಲ್ಲಿರುವ ಮನೆಯ ಪಕ್ಕದ ಜಾಗ ನಮ್ಮ ಸ್ವಂತದ್ದು, ಆ ಜಾಗವನ್ನು ಆರು ವರ್ಷಗಳ ಹಿಂದೆ ಖರೀದಿ ಮಾಡಿದ್ದೆವು. ಇ-ಖಾತೆಯೂ ನಮ್ಮ ಹೆಸರಲ್ಲೇ ಇದೆ. ಅಗತ್ಯ ದಾಖಲೆಗಳೂ ಇವೆ. ಕೋರ್ಟ್‌ನಿಂದ ನಮಗೆ ನೋಟಿಸ್ ಬಂದಿಲ್ಲ. ನಾವಿಲ್ಲದ ಸಮಯದಲ್ಲಿ ದೇವರಾಜ್ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಟಾಕ್ಸಿಕ್ ಸಿನಿಮಾ ರಿಲೀಸ್ ಹೊತ್ತಲ್ಲೇ ಯಶ್ ಕುಟುಂಬದ ಈ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ.
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications