Yash: ಹುಟ್ಟುಹಬ್ಬಕ್ಕೆ ಮುನ್ನ ಅಭಿಮಾನಿಗಳಿಗೆ ಬೇಸರದ ಸುದ್ದಿ; ವಿಶೇಷ ಮನವಿ ಮಾಡಿದ ರಾಕಿಂಗ್ ಸ್ಟಾರ್ ಯಶ್‌

ಕೆಜಿಎಫ್ ಮೂಲಕ ರಾಷ್ಟ್ರಮಟ್ಟದಲ್ಲಿ ಜನಪ್ರಿಯ ನಟನಾಗಿರುವ ರಾಕಿಂಗ್ ಸ್ಟಾರ್ ಯಶ್ ಸದ್ಯ ಅದ್ದೂರಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಟಾಕ್ಸಿಕ್ ಸಿನಿಮಾ ಕೆಲಸದಲ್ಲಿ ನಿರತರಾಗಿದ್ದಾರೆ. ಮುಂಬೈನಲ್ಲಿ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು ಚಿತ್ರತಂಡ ಹಲವು ದಿನಗಳಲ್ಲಿ ಅಲ್ಲೇ ಬೀಡುಬಿಟ್ಟಿದೆ. 2023ರ ಡಿಸೆಂಬರ್ ನಲ್ಲಿ ಟಾಕ್ಸಿಕ್ ಸಿನಿಮಾ ಘೋಷಣೆ ಮಾಡಿದ್ದ ಯಶ್, ಬಳಿಕ ಸಿನಿಮಾ ಬಗ್ಗೆ ಯಾವ ಅಪ್‌ಡೇಟ್ ಕೂಡ ನೀಡಿಲ್ಲ.

ಜನವರಿ 8ರಂದು ನಟ ಯಶ್ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದು ಆ ಸಂದರ್ಭದಲ್ಲಾದರೂ ಅಭಿಮಾನಿಗಳಿಗಾಗಿ ಸಿನಿಮಾದ ಬಗ್ಗೆ ಯಾವುದಾದರೂ ಅಪ್‌ಡೇಟ್ ನೀಡಬಹುದು ಎಂದು ನಿರೀಕ್ಷೆ ಮಾಡಲಾಗಿದೆ. ಈ ಬೆನ್ನಲ್ಲೇ ನಟ ಯಶ್ ಅಭಿಮಾನಿಗಳಿಗೆ ವಿಶೇಷ ಸಂದೇಶವೊಂದನ್ನು ನೀಡಿದ್ದಾರೆ.

yash special request to fans ahead of his birthday

ತಮ್ಮ ಎಕ್ಸ್ ಖಾತೆಯಲ್ಲಿ ಅಭಿಮಾನಿಗಳಿಗಾಗಿ ಸಂದೇಶವನ್ನು ಹಂಚಿಕೊಂಡಿದ್ದು, ಹುಟ್ಟು ಹಬ್ಬದ ದಿನ ತಾನು ಅಭಿಮಾನಿಗಳಿಗೆ ಸಿಗುವುದಿಲ್ಲ ಎಂದಿದ್ದಾರೆ. ಅಭಿಮಾನಿಗಳು ಯಾವುದೇ ಆಡಂಬರ ಮಾಡದೆ ತನಗೆ ಶುಭಾಶಯ ತಿಳಿಸಿದರೆ ಮಾತ್ರ ಸಾಕು ಎನ್ನುವ ಮೂಲಕ ಸರಳತೆ ಮೆರೆದಿದ್ದಾರೆ.

ಯಶ್ ವಿಶೇಷ ಮನವಿ

ಅಭಿಮಾನಿಗಳಿಗೆ ಯಶ್ ಮಾಡಿರುವ ಮನವಿ ಇಲ್ಲಿದೆ. "ನಿಮ್ಮ ಅಭಿಮಾನದ ಅಪ್ಪುಗೆ ಮತ್ತೊಂದು ವರ್ಷವನ್ನು ಸಾರ್ಥಕಗೊಳಿಸಿದೆ. ಹೊಸ ವರ್ಷಕ್ಕೆ ಹೊಸ ಭರವಸೆಗಳೊಂದಿಗೆ ನಗು ನಗುತ್ತಾ ಬದುಕೋಣ, ಬದುಕನ್ನು ಮೆರುಗುಗೊಳಿಸುವಂತಹ ಹೊಸ ಯೋಜನೆಗಳೊಂದಿಗೆ ಹೊಸ ವರ್ಷವನ್ನು ಸ್ವಾಗತಿಸೋಣ."

"ಸಿನಿಮಾ ಕೆಲಸದ ನಿಮಿತ್ತ ನಾನು ಹುಟ್ಟುಹಬ್ಬದಂದು ಊರಿನಲ್ಲಿ ಇರುವುದಿಲ್ಲ. ನನ್ನ ಹುಟ್ಟುಹಬ್ಬಕ್ಕೆ ನೀವು ತೋರುವ ಅಭಿಮಾನಿ ಜವಾಬ್ದಾರಿಯುತವಾಗಿರಲಿ ಎನ್ನುವುದು ಪ್ರೀತಿಯ ಮನವಿ. ಹಾಗಾಗಿ ಫ್ಲೆಕ್ಸ್, ಬ್ಯಾನರ್ ಗಳ ಯಾವುದೇ ಆಡಂಬರ ಮಾಡದೆ ನನ್ನ ಮನಸ್ಸಿಗೆ ನೋವಾಗುವ ನಡವಳಿಕೆ ತೋರದೆ ನೀವು ಇದ್ದಲ್ಲಿಂದಲೇ ನಿಮ್ಮ ಕುಟುಂಬದವರು ಹೆಮ್ಮೆ ಪಡುವ ಕೆಲಸ ನಿಮ್ಮಿಂದ ಆದರೆ ಅದಕ್ಕಿಂತ ದೊಡ್ಡ ಜನ್ಮದಿನದ ಉಡುಗೊರೆ ನನಗೆ ಮತ್ತೊಂದು ಇಲ್ಲ. ಆದಷ್ಟು ಬೇಗ ನಿಮ್ಮನ್ನೆಲ್ಲಾ ಭೇಟಿ ಆಗುತ್ತೇನೆ. ಎಲ್ಲರಿಗೂ ಹೊಸ ವರ್ಷ ಒಳಿತನ್ನು ತರಲಿ." ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

2024ರ ಜನವರಿ 8ರಂದು ಯಶ್ ಹುಟ್ಟುಹಬ್ಬದ ಸಂದರ್ಭದಲ್ಲಿ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದಲ್ಲಿ ಬ್ಯಾನರ್ ಕಟ್ಟುವ ಸಂದರ್ಭದಲ್ಲಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ನಡೆದಿತ್ತು. ಘಟನೆ ಬಳಿಕ ಗ್ರಾಮಕ್ಕೆ ಭೇಟಿ ನೀಡಿದ್ದ ಯಶ್ ಹುಟ್ಟುಹಬ್ಬವನ್ನೇ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದರು. ಕಳೆದ ಹುಟ್ಟುಹಬ್ಬದ ಕಹಿ ಘಟನೆ ಹಿನ್ನಲೆಯಲ್ಲಿ ಯಶ್ ಈ ಬಾರಿ ಅಭಿಮಾನಿಗಳಿಗೆ ಹುಟ್ಟು ಹಬ್ಬಕ್ಕೆ ಫ್ಲೆಕ್ಸ್, ಬ್ಯಾನರ್ ಬೇಡ ಎಂದು ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+