Yash visit Dharmasthala: ಯಶ್ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು ಯಾಕೆ? ಕಾರಣ ಇಲ್ಲಿದೆ...

ರಾಕಿಂಗ್ ಸ್ಟಾರ್ ಯಶ್ ಕಳೆದ ದಿನ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ಕುಟುಂಬ ಸಮೇತ ದೇವರ ದರ್ಶನ ಪಡೆದು ಹರಕೆ ತೀರಿಸಿ ಅನ್ನ ಪ್ರಸಾದ ಸ್ವೀಕರಿಸಿದರು. ಪತ್ನಿ ರಾಧಿಕಾ ಪಂಡಿತ್ ಹಾಗೂ ತಮ್ಮಿಬ್ಬರ ಮಕ್ಕಳೊಂದಿಗೆ ಧರ್ಮಸ್ಥಳಕ್ಕೆ ಭೇಟಿ ನೀಡಿದ ಯಶ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಯಶ್ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲಲ್ಲ. ಆಗಾಗ ಅವರು ಕುಟುಂಬ ಸಮೇತ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ದರ್ಶನವನ್ನು ಪಡೆಯುತ್ತಲೇ ಇರುತ್ತಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಯಶ್ ಧಾರ್ಮಿಕ ಆಚರಣೆಗಳ ವಿಚಾರದಲ್ಲಿ ಮಾತ್ರ ಹಿಂದೆ ಉಳಿದಿಲ್ಲ. ಸಿನಿಮಾ ಶೂಟಿಂಗ್‌ನಲ್ಲಿ ಎಷ್ಟೇ ಬ್ಯೂಸಿ ಆಗಿದ್ದರೂ ಕೂಡ ದೇವರ ಪೂಜೆ, ಹಬ್ಬ ಹರಿದಿನಗಳ ಆಚರಣೆ ಹಾಗೂ ದೇವಸ್ಥಾನಗಳಿಗೆ ಭೇಟಿ ನೀಡುವುದು ಮಾತ್ರ ಯಶ್ ತಪ್ಪಿಸಿಲ್ಲ.

Yash Why did Yash visit Dharmasthala Here s the reason

ಅದರಲ್ಲೂ ವಿಶೇಷವಾಗಿ ಧರ್ಮಸ್ಥಳಕ್ಕೆ ಯಶ್ ಆಗಾಗ ಭೇಟಿ ಮಾಡುತ್ತಲೇ ಇರುತ್ತಾರೆ. ಅದಕ್ಕೆ ಕಾರಣ ಅವರ ತಂದೆ. ಯಶ್ ತಾವು ಧರ್ಮಸ್ಥಳಕ್ಕೆ ಭೇಟಿ ನೀಡುವ ಕಾರಣವನ್ನು ಈ ಹಿಂದೆ ಹೇಳಿದ್ದರು. ಅದನ್ನು ಈಗ ಫ್ಯಾನ್ಸ್ ವೈರಲ್ ಮಾಡುತ್ತಿದ್ದಾರೆ. ಅಷ್ಟಕ್ಕೂ ಯಶ್ ಅವರು ಅಂದು ಹೇಳಿದ್ದು ಏನು ಗೊತ್ತಾ..?

'ಅಪ್ಪ ಯಾವಾಗಲೂ ಹೇಳುತ್ತಾ ಇರುತ್ತಾರೆ. ಧರ್ಮಸ್ಥಳ ಮಂಜುನಾಥನ ಬೇಡಿಕೋ ಎಲ್ಲದೂ ಆಗುತ್ತದೆ. ಆ ನಂಬಿಕೆಯಲ್ಲಿ ಬೆಳೆದು ಬಂದವರು ನಾವು, ಸಂಪೂರ್ಣ ಕರ್ನಾಟಕ ಆ ನಂಬಿಕೆಯಲ್ಲಿ ಬದುಕುತ್ತಾ ಇದೆ. ನನಗೆ ಇದ್ದಿದ್ದು ಒಂದೇ ನಂಬಿಕೆ ಎಂದರೆ ಮಂಜುನಾಥ ಸ್ವಾಮಿ ಕೈ ಬಿಡಲ್ಲ' ಎಂದು ಯಶ್ ಅವರು ಈ ಮೊದಲು ಹೇಳಿಕೊಂಡಿದ್ದರು.

Yash Why did Yash visit Dharmasthala Here s the reason

ಆದರೀಗ ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಸದ್ಯ ಟಾಕ್ಸಿಕ್ ಸಿನಿಮಾ ಶೂಟಿಂಗ್ ಆರಂಭವಾಗುತ್ತಿರುವ ಬೆನ್ನೆಲೆಯಲ್ಲಿ ಯಶ್ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು ಎನ್ನಲಾಗುತ್ತಿದೆ.

ಕಳೆದ ದಿನ ಮಂಗಳೂರಿನ ಬೆಳ್ತಂಗಡಿ ತಾಲೂಕು ಸೂರಿಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ದಂಪತಿ ಭೇಟಿ ನೀಡಿದರು. ಟಾಕ್ಸಿಕ್ ಚಲನಚಿತ್ರದ ಡೈರೆಕ್ಟರ್ ವೆಂಕಟ್ ಜೊತೆಯಲ್ಲಿ ಯಶ್ ಕುಟುಂಬ ದೇವಸ್ಥಾನಕ್ಕೆ ಭೇಟಿ ನೀಡದೆ.

ಈ ವೇಳೆ ಮಣ್ಣಿನ ರೀಲ್ ಮತ್ತು ಕುಟುಂಬದ ಮಣ್ಣಿನ ಹರಕೆ (ಆರೋಗ್ಯ ಸಮಸ್ಯೆಗಾಗಿ ಮಾಡಿಕೊಂಡಿದ್ದ ಹರಕೆ)ಯನ್ನು ಯಶ್ ತೀರಿಸಿದ್ದಾರೆ. ಬಳಿಕ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಕುಟುಂಬ ಸಮೇತ ಯಶ್ ಭೇಟಿ ನೀಡಿದ್ದಾರೆ. ಅಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿ ಬಳಿಕ ಧರ್ಮಾಧಿಕಾರಿ ವೀರೇಂದ್ರ ಹೆಗ್ಗೆಡೆಯವರನ್ನು ಯಶ್ ಮತ್ತು ನಿರ್ಮಾಪಕ ವೆಂಕಟ್ ಭೇಟಿ ಮಾಡಿ ಆಶೀರ್ವಾದ ಪಡೆದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+