Rishab Shetty: 'ನೀನು ಮುನ್ನುಗ್ಗು ನಾನಿದ್ದೇನೆ..' ರಿಷಬ್ ಶೆಟ್ಟಿಗೆ ದೈವ ಅಭಯ
ರಿಷಬ್ ಶೆಟ್ಟಿ ಕಾಂತಾರ ಸಿನಿಮಾ ಮೂಲಕ ಕನ್ನಡಗಿರ ಮನಗೆದ್ದಿ ನಟ. ಅವರು ನಿರ್ದೇಶಕ ಹಾಗೂ ನಿರ್ಮಾಪಕರೂ ಹೌದು. ತಮ್ಮ ವಿಭಿನ್ನ ಚಿತ್ರಗಳು ಮತ್ತು ಭಿನ್ನ ಚಿತ್ರ ನಿರ್ಮಾಣ ಶೈಲಿಯಿಂದ ಪ್ರಸಿದ್ಧರಾಗಿ ಕಾಂತಾರ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಸದ್ಯ 'ಕಾಂತಾರ 2' ಸಿನಿಮಾ ನಿರ್ಮಾಣದಲ್ಲಿ ಅವರು ಬ್ಯೂಸಿ ಆಗಿದ್ದಾರೆ. ಈ ನಡುವೆ ರಿಷಬ್ ಅವರು ದೈವ ದರ್ಶನವನ್ನು ಪಡೆದಿದ್ದಾರೆ.
'ಭಯ ಪಡಬೇಡ, ನೀನು ಮುನ್ನುಗ್ಗು ನಾನಿದ್ದೇನೆ..' ಎಂದು ರಿಷಬ್ ಶೆಟ್ಟಿಗೆ ದೈವ ಅಭಯ ನೀಡಿದೆ. ಈ ವೇಳೆ ಅತ್ತಿತ್ತ ಕಣ್ಣಾಡಿಸದೆ ದೈವವನ್ನೇ ನೋಡುತ್ತಾ ನಿಂತ ರಿಷಬ್ ಶೆಟ್ಟಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ರಿಷಬ್ ಶೆಟ್ಟಿಯನ್ನು ಮೈಸಂದಾಯ ದೈವ ಆಲಂಗಿಸಿ, ಕಾಂತಾರ ರೀತಿಯಲ್ಲೇ ರಿಷಬ್‌ಗೆ ಆಶೀರ್ವಾದ ನೀಡಿದೆ.

ಈ ಹಿಂದೆ ವಜ್ರದೇಹಿ ಸ್ವಾಮೀಜಿ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಮಠದ ದೈವ ಕೋಲ ವೀಕ್ಷಿಸುವ ಇಚ್ಚೆಯನ್ನು ರಿಷಬ್ ವ್ಯಕ್ತಪಡಿಸಿದ್ದರು. ರಿಷಬ್ ಇಚ್ಚೆಯಂತೆ ವಜ್ರದೇಹಿ ಶ್ರೀ ಕೋಲಕ್ಕೆ ಆಹ್ವಾನಿಸಲಾಗಿತ್ತು. ಮಂಗಳೂರು ವಜ್ರದೇಹಿ ಮಠದ ದೈವ ಕೋಲಕ್ಕೆ ಕಳೆದ ದಿನ ರಿಷಬ್ ಶೆಟ್ಟಿ ಭೇಟಿ ನೀಡಿದ್ದರು. ಈ ವೇಳೆ ವಜ್ರದೇಹಿ ಮಠದ ದೈವ ಕೋಲದಲ್ಲಿ ಭಾಗಿಯಾಗಿ ದೈವದ ಅಭಯ ಪಡೆದರು. 'ಏನೇ ಸಮಸ್ಯೆ ಎದುರಾದರೂ ಕುಗ್ಗಬೇಡ' ಎಂದು ರಿಷಬ್ ಅವರಿಗೆ ದೈವ ಸೂಚನೆ ಕೊಟ್ಟಿದೆ. ಮುನ್ನಗ್ಗು ನಿನ್ನ ಬೆನ್ನ ಹಿಂದೆ ನಾನಿದ್ದೇನೆ ಎಂದು ಸನ್ನೆ ಮಾಡಿ ಆಶೀರ್ವದಿಸಿದೆ.
ಕಾಂತಾರ ಇತಿಹಾಸ
2022ರಲ್ಲಿ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ 'ಕಾಂತಾರ' ಚಿತ್ರ ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿತ್ತು. ನಿರೀಕ್ಷೆಗೂ ಮೀರಿ ಅದ್ಭುತ ಯಶಸ್ಸುಗಳಿಸಿರುವ 'ಕಾಂತಾರ' ಚಿತ್ರ ಬಾಕ್ಸ್ ಆಫೀಸ್‌ನಲ್ಲೂ ಸಖತ್ ಸದ್ದು ಮಾಡಿತ್ತು. ಮೊದಲಿಗೆ ಕನ್ನಡದಲ್ಲಿ ಬಿಡುಗಡೆಯಾದ ಕಾಂತಾರ ಚಿತ್ರವನ್ನು ಕನ್ನಡ ಭಾಷೆಯಲ್ಲಿಯೇ ವೀಕ್ಷಿಸಿದ ಬೇರೆ ರಾಜ್ಯಗಳ ಸಿನಿಪ್ರೇಮಿಗಳು ಚಿತ್ರವನ್ನು ತಮ್ಮ ಭಾಷೆಗೂ ಸಹ ಡಬ್ ಮಾಡಿ, ಇಲ್ಲಿಯ ಸಿನಿರಸಿಕರೂ ಒಂದೊಳ್ಳೆ ಚಿತ್ರವನ್ನು ವೀಕ್ಷಿಸಲಿ ಎಂದು ಬೇಡಿಕೆ ಇಟ್ಟಿದ್ದರು.
ಹೀಗೆ ಕಾಂತಾರ ಚಿತ್ರದ ಡಬ್ಬಿಂಗ್ ಕುರಿತು ವ್ಯಾಪಕ ಮನವಿ ಬಂದ ಕಾರಣ ಹೊಂಬಾಳೆ ಫಿಲ್ಮ್ಸ್ ಕಾಂತಾರ ಚಿತ್ರವನ್ನು ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷ್ರಗಳಲ್ಲೂ ಬಿಡುಗಡೆ ಮಾಡಿತ್ತು. 'ಕಾಂತಾರ' ಸಿನಿಮಾ ನೋಡಿದ ಪ್ರತಿಯೊಬ್ಬರೂ ಚಿತ್ರದ ಬಗ್ಗೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದರು.
ಅದರಲ್ಲೂ ಸಿನಿಮಾಗಾಗಿ ಆಯ್ಕೆ ಮಾಡಿಕೊಂಡ ಕಥೆ, ಅದನ್ನು ಪ್ರಸೆಂಟ್ ಮಾಡಿದ ರೀತಿ, ಕಲಾವಿದರ ಅಭಿನಯ, ಹಿನ್ನೆಲೆ ಸಂಗೀತ, ರಿಷಬ್ ಶೆಟ್ಟಿ ಅವರ ನಟನೆ ಎಲ್ಲವನ್ನೂ ಕೊಡಾಡಿದ್ದರು. ಕಾಂತಾರ ಚಿತ್ರದಿಂದ ರಿಷಬ್ ಶೆಟ್ಟಿ ರಾತ್ರೋರಾತ್ರಿ ನ್ಯಾಷನಲ್ ಸ್ಟಾರ್ ಪಟ್ಟಕ್ಕೇರಿಬಿಟ್ಟರು. 16 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಈ ಸಿನಿಮಾ 400 ಕೋಟಿಗೂ ಅಧಿಕ ಗಳಿಸುವ ಮೂಲಕ ದಾಖಲೆ ಬರೆದಿತ್ತು. ಸದ್ಯ ಕಾಂತಾರ 2 ಸಿನಿಮಾ ಕೂಡ ಇದೇ ನಿರೀಕ್ಷೆಯನ್ನು ಹುಟ್ಟುಹಾಕಿದ್ದು ಬಾರೀ ಕುತೂಹಲವನ್ನು ಮೂಡಿಸಿದೆ.











Click it and Unblock the Notifications