ಜೀ ಕನ್ನಡದ ಸರಿಗಮಪ ಕಾರ್ಯಕ್ರಮದ ಜ್ಯೂರಿ ಎಸ್.ಬಾಲಿ ನಿಧನ
ಬೆಂಗಳೂರು, ಜನವರಿ 02: ಕನ್ನಡ ಸಂಗೀತ ಲೋಕದ ದಿಗ್ಗಜ, ಬಹು ವಾದ್ಯ ಪರಿಣಿತರಾದ ಎಸ್. ಬಾಲಿ ಇಂದು( ಜನವರಿ 02) ಗುರುವಾರ ವಿಧಿವಶರಾಗಿದ್ದಾರೆ. 71 ವರ್ಷದ ಎಸ್. ಬಾಲಿ ಅವರು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸರಿಗಮಪ ಕಾರ್ಯಕ್ರಮದಲ್ಲಿ ಜ್ಯೂರಿ ಮೆಂಬರ್ ಆಗಿ ಇತ್ತೀಚಿಗೆ ಹೆಚ್ಚು ಜನಪ್ರಿಯತೆ ಪಡೆದಿದ್ದಾರೆ.
1970ರ ದಶಕದಲ್ಲಿ ಬಹುಬೇಡಿಕೆಯ ಸಂಗೀತಗಾರರಾಗಿದ್ದ ಎಸ್. ಬಾಲಸುಬ್ರಹ್ಮಣ್ಯಂ ಅವರು ಎಸ್. ಬಾಲಿ ಎಂದೇ ಖ್ಯಾತಿ ಪಡೆದಿದ್ದಾರೆ. ದಕ್ಷಿಣ ಭಾರತದ ಏಕೈಕ ರಿದಂ ಕಂಪೋಸರ್ ಆಗಿರುವ ಇವರನ್ನು ಕನ್ನಡ ಚಿತ್ರರಂಗದಲ್ಲಿ ರಿದಂ ಕಿಂಗ್ ಎಂದೇ ಕರೆಯುತ್ತಿದ್ದರು. ಎಸ್. ಬಾಲಸುಬ್ರಹ್ಮಣ್ಯಂ ಅವರು ಕವಿ ನಿಸಾರ ಅಹಮ್ ಅವರ ನಿತ್ಯೋತ್ಸವದಿಂದ ಹಿಡಿದು ಮೈಸೂರು ಅನಂತಸ್ವಾಮಿ ಅವರ ಸಂಯೋಜನೆಗಳಿಗೆ ಸಹಾಯಕರಾಗಿ ವಾದ್ಯದ ನೆರವು ನೀಡಿದ್ದಾರೆ ಎನ್ನುವ ಹೆಗ್ಗಳಿಕೆ ಇದೆ.

ಅವರು ಕಿರುತೆರೆ ಹಾಗೂ ನಾಟಕಗಳಿಗೆ ಸಂಗೀತ ನಿರ್ದೇಶನ ಮಾಡಿರುವುದಲ್ಲದೇ ಹಲವಾರು ಧ್ವನಿಸುರುಳಿಗಳನ್ನು ಬಿಡುಗಡೆ ಮಾಡಿದ್ದರು. ಇನ್ನು ಎಸ್ ಬಾಲಸುಬ್ರಹ್ಮಣ್ಯಂ ಅವರು ತಬಲ, ಮೃದಂಗ, ಢೋಲ್ಕಿ , ಢೋಲಕ್ ಸೇರಿದಂತೆ ಸುಮಾರು ಹತ್ತಕ್ಕೂ ಹೆಚ್ಚು ಲಯ ವಾದ್ಯಗಳನ್ನು ನುಡಿಸುವಲ್ಲಿ ಪರಿಣಿತರಾಗಿದ್ದರು.
ಬಯಾಲಜಿ ಸುಂದರೇಶನ್ ಎಂದೇ ಖ್ಯಾತರಾಗಿದ್ದ ಎಂ.ವಿ. ಸುಂದರೇಶನ್ ಮತ್ತು ಸಾವಿತ್ರಿ ದಂಪತಿಯ ಪುತ್ರರಾಗಿರುವ ಎಸ್. ಬಾಲಸುಬ್ರಹ್ಮಣ್ಯಂ ಅವರು 1953ರ ಜನವರಿ 9ರಂದು ಬೆಂಗಳೂರಿನಲ್ಲಿ ಜನಿಸಿದರು. ಬಹುವಾದ್ಯ ಪರಿಣಿತರಾಗಿ ಇತ್ತೀಚಿಗೆ, ಸರಿಗಮಪ ಶೋನಲ್ಲಿ ಎಲ್ಲರನ್ನೂ ರಂಜಿಸುತ್ತಿದ್ದ ಹಾಗೂ ಸ್ಪರ್ಧಿಗಳ ತಪ್ಪುಗಳನ್ನು ತಿದ್ದುತ್ತಿದ್ದ ಎಸ್. ಬಾಲಿ ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸಿದ್ದಾರೆ. ಅವರ ಅಂತಿಮ ದರ್ಶನ ಹಾಗೂ ಅಂತಿಮ ಕಾರ್ಯದ ಬಗ್ಗೆ ಕುಟುಂಬಸ್ಥರು ಇನ್ನಷ್ಟೇ ಮಾಹಿತಿ ನೀಡಬೇಕಿದೆ.
ಎಸ್.ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆ ಗಣ್ಯರ ಸಂತಾಪ
ಎಸ್. ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆಗೆ ಕರ್ನಾಟಕ ಫಿಲ್ಮ್ ಮ್ಯುಸಿಷಿಯನ್ ಅಸೋಸಿಯೇಷನ್ ಸದಸ್ಯರು ಕಂಬನಿ ಮಿಡಿದಿದ್ದಾರೆ. ಇನ್ನು ಎಸ್. ಬಾಲಿ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಸಾಧುಕೋಕಿಲ ಸಂತಾಪ ವ್ಯಕ್ತಪಡಿಸಿದ್ದಾರೆ. 'ಬಾಲಿ ಅವರು ಜಾತಿ-ಬೇಧ, ಮೇಲು-ಕೀಳು ನೋಡದೇ ಕಲೆಯನ್ನು ಗುರುತಿಸಿ ನಮ್ಮನ್ನು ಪ್ರೋತ್ಸಾಹಿಸಿದ ಮಹಾನ್ ವ್ಯಕ್ತಿ. ಇಡೀ ಕನ್ನಡ ಚಿತ್ರರಂಗವನ್ನು ತಮಿಳುನಾಡಿನಿಂದ ಕರ್ನಾಟಕಕ್ಕೆ ತಂದಾಗ ಎಲ್ಲಾ ಕಲಾವಿದರನ್ನು ಸೇರಿಸಿ, ಪ್ರೋತ್ಸಾಹ ನೀಡಿ ಬೆಳೆಸಿದವರಲ್ಲಿ ಬಾಲಿ ಅವರ ಪಾತ್ರ ಪ್ರಮುಖವಾದದ್ದು. ಅವರ ಅಗಲಿಕೆ ನಮಗೆ ದೊಡ್ಡ ನಷ್ಟ' ಎಂದು ಭಾವುಕರಾಗಿದ್ದಾರೆ.
-
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications