ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Fact Check: ತುಟ್ಟಿಭತ್ಯೆ ಹೆಚ್ಚಳ ಅಧಿಕೃತ ಅದೇಶ ಹೊರಬಂದಿದೆಯೇ?

|
Google Oneindia Kannada News

ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ಸಾಮಾಜಿಕ ಜಾಲ ತಾಣಗಳಲ್ಲಿ ಆದೇಶ ಪ್ರತಿಯೊಂದು ಹರಿದಾಡುತ್ತಿದೆ. ಆದರೆ, ಈ ಕುರಿತಂತೆ ಯಾವುದೇ ಆದೇಶ ಇನ್ನೂ ಅಧಿಕೃತವಾಗಿ ಹೊರ ಬಂದಿಲ್ಲ ಎಂದು PIB ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದೆ.

ತುಟ್ಟಿಭತ್ಯೆ ಹಾಗೂ ತುಟ್ಟಿಭತ್ಯೆ ಪರಿಹಾರ ಘೋಷಣೆ ಬಗ್ಗೆ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸುವ ನಿರೀಕ್ಷೆಯಿದೆ. ಡಿಎ ಹೆಚ್ಚಳವಾದರೂ ನೇರವಾಗಿ ಸಂಬಳ ಏರಿಕೆ ಬಗ್ಗೆ ಸುಳಿವು ಸಿಕ್ಕಿರಲಿಲ್ಲ. ಆದರೆ, ಈಗ ಮಾಡಲು ಕೇಂದ್ರ ಸರ್ಕಾರ ಮುಂದಾಗಿರುವ ಶುಭ ಸುದ್ದಿ ಸಿಕ್ಕಿದೆ. ಈಗ ತುಟ್ಟಿಭತ್ಯೆ ಪರಿಹಾರ (DA arrear) ಬಾಕಿ ಎಂದಿಗೆ ಸಿಗಬಹುದು ಎಂಬ ನಿರೀಕ್ಷೆಗೆ ಉತ್ತರ ಸಿಕ್ಕಿದೆ. ಕೇಂದ್ರ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಂಡಿದ್ದು, ಡಿಆರ್ ಬಾಕಿ ಮೊತ್ತ ಪಾವತಿ ಬಗ್ಗೆ ಸುಳಿವು ನೀಡಿದ್ದು, ಹೊಸ ವರ್ಷದಲ್ಲಿ ಸರಿ ಸುಮಾರು 2 ಲಕ್ಷ ರು ನಷ್ಟು ಬಾಕಿಮೊತ್ತ ಸಿಗಲಿದೆ. ಆದರೆ, ಇನ್ನೂ ಅಧಿಕೃತವಾಗಿ ಈ ಬಗ್ಗೆ ಸಭೆ ನಡೆಸಿ, ಅಂತಿಮ ತೀರ್ಮಾನ ಕೈಗೊಂಡಿಲ್ಲ ಹಾಗೂ ಆದೇಶವಂತೂ ಪ್ರಕಟವಾಗಿಲ್ಲ.

ನಕಲಿ ಆದೇಶವುಳ್ಳ ಸಂದೇಶದಲಿ ಏನಿದೆ?:
''ಓಮಿಕ್ರಾನ್ (ಕೋವಿಡ್ 19, ಸಾರ್ಸ್ 2) ಸೋಂಕು ಹೆಚ್ಚಳವಾಗುತ್ತಿದ್ದು, ಈ ಸಂದರ್ಭದಲ್ಲಿ ತುಟ್ಟಿಭತ್ಯೆ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳು ಹಾಗೂ ಪಿಂಚಣಿದಾರರಿಗೆ ಸಲ್ಲುವಂತೆ ಡಿಎ ಹಾಗೂ ಡಿಎ ಪರಿಹಾರವನ್ನು ಹಾಲಿ ದರದಂತೆ ನೀಡಲಾಗ್ತುತಿದೆ ಎಂದು ಈ ಮೂಲಕ ತಿಳಿಸಲಾಗಿದೆ'' ಎಂದು ಆದೇಶದ ಪ್ರತಿಯಲ್ಲಿ ಹೇಳಲಾಗಿದೆ.

Fact Check: Did Central Govt releases DA Hike order

ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಈ ಮೊತ್ತ ಸಲ್ಲಬೇಕಾಗಿದ್ದು, ಹೆಚ್ಚುವರಿ ಮೊತ್ತವನ್ನು ಆರ್ಥಿಕ ಇಲಾಖೆ ಭರಿಸಲಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಸತ್ಯಾಸತ್ಯತೆ: ಸದರಿ ಆದೇಶ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಯಾರೂ ಈ ಪತ್ರವನ್ನು ಹಂಚುವುದಾಗಿ, ನಂಬುವುದಾಗಿ ಮಾಡಬೇಡಿ ಎಂದು ಪ್ರೆಸ್ ಬ್ಯೂರೋ ಆಫ್ ಇಂಡಿಯಾ ಸ್ಪಷ್ಟಪಡಿಸಿದೆ. ಫೇಕ್ ಸ್ಟ್ಯಾಂಪ್ ಹಾಕಿ ಆದೇಶ ಪ್ರತಿ ಬಗ್ಗೆ ಟ್ವೀಟ್ ಮಾಡಿದ್ದು, ಈ ರೀತಿ ಯಾವುದೇ ಆದೇಶವನ್ನು ವಿತ್ತ ಸಚಿವಾಲಯ ನೀಡಿಲ್ಲ ಎಂದು ತಿಳಿಸಲಾಗಿದೆ.

ಡಿಎ ಹೆಚ್ಚಳ ಬಗ್ಗೆ ಯಾವಾಗ ನಿರೀಕ್ಷಿಸಬಹುದು?
ಕೊರೊನಾವೈರಸ್ ಸಾಂಕ್ರಾಮಿಕದ ಕಾಲದಲ್ಲಿ ಕಳೆದ ಎರಡು ವರ್ಷಗಳಿಂದ ಡಿಎ ಹೆಚ್ಚಳ ಮಾಡಲಾಗಿರಲಿಲ್ಲ. ಕೋವಿಡ್ -19 ಸಾಂಕ್ರಾಮಿಕದಿಂದಾಗಿ ಉದ್ಭವಿಸಿದ ಅಸಾಧಾರಣ ಪರಿಸ್ಥಿತಿಯಿಂದಾಗಿ ಕೇಂದ್ರ ಸರ್ಕಾರಿ ನೌಕರರಿಗೆ ಮೂರು ಹೆಚ್ಚುವರಿ ಕಂತುಗಳ ತುಟ್ಟಿ ಭತ್ಯೆ [ಡಿಎ] ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರವನ್ನು [ಡಿಆರ್] 01.01.2020, 01.07.2020 ಮತ್ತು 01.01.2021, ಸ್ಥಗಿತಗೊಳಿಸಲಾಗಿತ್ತು.

ಸದ್ಯದ ಲೆಕ್ಕಾಚಾರದಂತೆ ಜನವರಿ 1 (4%), ಜುಲೈ 1 2020(3%) ಹಾಗೂ ಜನವರಿ 1, 2021 (4%) ಗೆ ಮೂರು ಬಾರಿ ಏರಿಕೆಯಾಗಿ ಶೇ 25ಕ್ಕೇರಿದೆ. ಸೆಪ್ಟೆಂಬರ್ 1, 2021ಕ್ಕೆ ಪರಿಷ್ಕರಣೆಗೊಳ್ಳಲಿದೆ. ಜೊತೆಗೆ 18 ತಿಂಗಳ ಬಾಕಿ ಮೊತ್ತವೂ ಸಿಗಲಿದೆ. ಕೇಂದ್ರ ಬೊಕ್ಕಸಕ್ಕೆ 12,150 ಕೋಟಿ ರು ಹೆಚ್ಚುವರಿ ಹೊರೆ ಬೀಳಲಿದೆ. ಡಿಎ ಹೆಚ್ಚಳದಿಂದಾಗಿ 48.34 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 65.26 ಲಕ್ಷ ಪಿಂಚಣಿದಾರರಿಗೆ ನೆರವು ಲಭಿಸಲಿದೆ.

ಕೇಂದ್ರ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಂಡಿದ್ದು, ಡಿಆರ್ ಬಾಕಿ ಮೊತ್ತ ಪಾವತಿ ಬಗ್ಗೆ ಸುಳಿವು ನೀಡಿದ್ದು, ಹೊಸ ವರ್ಷದಲ್ಲಿ ಸರಿ ಸುಮಾರು 2 ಲಕ್ಷ ರು ನಷ್ಟು ಬಾಕಿ ಮೊತ್ತ ಸಿಗಲಿದೆ. ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರವಾಗಲಿದ್ದು, ಬಹುತೇಕ ಇದೇ ಮೊತ್ತಕ್ಕೆ ಸಮ್ಮತಿ ಸಿಗಲಿದೆ ಎಂದು ಅನೇಕ ಮಾಧ್ಯಮಗಳು ವರದಿ ಮಾಡಿವೆ.

ತುಟ್ಟಿಭತ್ಯೆ ಪ್ರಸ್ತುತ ಶೇಕಡಾ 31 ರಷ್ಟಿದೆ. ತುಟ್ಟಿಭತ್ಯೆ ಪರಿಹಾರ ಶೇ 3ರಷ್ಟಿದೆ. ಈ ವರ್ಷ ಜುಲೈ ಮೊದಲು, ಇದು 17 ಪ್ರತಿಶತದಷ್ಟಿತ್ತು, ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಡಿಎ ಶೇ 28ರಿಂದ ಶೇ 31ಕ್ಕೇರಿಕೆಯಾಗಲಿದೆ.

ಆದರೆ, ಈ ಬಗ್ಗೆ ಅಧಿಕೃತ ಮಾಹಿತಿ, ಆದೇಶ ಯಾವಾಗ ಹೊರ ಬರಲಿದೆ ಎಂಬ ಮಾಹಿತಿ ಇನ್ನೂ ಖಚಿತವಾಗಿಲ್ಲ. ಬಜೆಟ್ ಅಧಿವೇಶನಕ್ಕೂ ಮುನ್ನ ಆದೇಶ ಹೊರ ಬರಬಹುದು ಎಂಬ ನಿರೀಕ್ಷೆಯಿದೆ.

Recommended Video

ಸ್ಟಾರ್ ಆಟಗಾರರಿಗೆ ಕೊರೋನ ದೃಢ! | Oneindia Kannada

Fact Check

ಕ್ಲೇಮು

ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳ ಆದೇಶ ನೀಡಲಾಗಿದೆ.

ಪರಿಸಮಾಪ್ತಿ

ಸದರಿ ಆದೇಶ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು ಈ ರೀತಿ ಯಾವುದೇ ಆದೇಶವನ್ನು ವಿತ್ತ ಸಚಿವಾಲಯ ನೀಡಿಲ್ಲ ಎಂದು ಪ್ರೆಸ್ ಬ್ಯೂರೋ ಆಫ್ ಇಂಡಿಯಾ ತಿಳಿಸಿದೆ.

Rating

False
ಗಾಗಿ ನಿಮ್ಮ ಮನವಿಯನ್ನು ಕಳಿಸಲು [email protected] ಗೆ ಇಮೇಲ್ ಮಾಡಿ
English summary
Fact Check: A Fake order issued in the name of the Ministry of Finance claiming that the 'Dearness Allowance & Dearness Relief payable to Central Govt employees and pensioners will be kept in abeyance' is in circulation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X