Fact Check: ಸಿಎಂ ಸಿದ್ದರಾಮಯ್ಯ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು ಎಂದಿದ್ದರಾ? ಇಲ್ಲಿದೆ ಅಸಲಿ ಕಥೆ
ಸಾಮಾಜಿಕ ಮಾಧ್ಯಮಗಳಲ್ಲಿ ಇಂದು ಸತ್ಯಕ್ಕಿಂತ ಹೆಚ್ಚಾಗಿ ಸುಳ್ಳು ವೇಗವಾಗಿ ಹರಡುತ್ತಿದೆ. ಎಐ ತಂತ್ರಜ್ಞಾನ, ಡೀಪ್ ಫೇಕ್, ಎಡಿಟಿಂಗ್ ತಂತ್ರಜ್ಞಾನ ಬಳಸಿ ವಿಡಿಯೋ, ಫೋಟೊಗಳನ್ನು ತಿರುಚಿ ಸತ್ಯವನ್ನೇ ಮರೆಸಿ, ಸುಳ್ಳನ್ನು ಮೆರೆಸುವುದನ್ನು ನೋಡಬಹುದು.
ಇಂತಹ ತಂತ್ರಜ್ಞಾನ ಈಗ ರಾಜಕೀಯದಲ್ಲಿ ಕೂಡ ಹೆಚ್ಚಾಗಿ ಬಳಕೆಯಾಗುತ್ತಿದೆ. ವಿರೋಧಿಗಳ ಬಗ್ಗೆ ಅಪಪ್ರಚಾರ ಮಾಡಲು, ಜನರ ದಿಕ್ಕು ತಪ್ಪಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯನವರ ಅಂತಹ ವಿಡಿಯೋ ಒಂದು ವ್ಯಾಪಕವಾಗಿ ವೈರಲ್ ಆಗುತ್ತಿದೆ.

ಸಿದ್ದರಾಮಯ್ಯ ಅವರು ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು ಎಂದು ಹೇಳಿರುವ ವಿಡಿಯೋವನ್ನು ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಎಕ್ಸ್ ಮಾಧ್ಯಮದಲ್ಲಿ ಹಲವು ಬಳಕೆದಾರರು ಈ ವಿಡಿಯೋ ತುಣಕನ್ನು ಹಂಚಿಕೊಂಡಿದ್ದಾರೆ. "ನನಗೆ ಮತ್ತೊಂದು ಜನ್ಮವಿದ್ದರೆ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ - ಸಿದ್ದರಾಮಯ್ಯ" ಎಂದು ಶೀರ್ಷಿಕೆ ನೀಡಿದ್ದಾರೆ.
ನಿಜಕ್ಕೂ ಸಿದ್ದರಾಮಯ್ಯ ಹೇಳಿದ್ದೇನು?
ಆದರೆ ಈ ವಿಡಿಯೋ ತುಣುಕಿನ ಅಸಲಿ ಕತೆ ಬೇರೆಯೇ ಇದೆ. ಒಂದು ಸಣ್ಣ ತುಣುಕನ್ನು ಮಾತ್ರ ಹಂಚಿಕೊಂಡಿರುವುದು ಇಷ್ಟೆಲ್ಲಾ ಗೊಂದಲಕ್ಕೆ ಕಾರಣವಾಗಿದೆ. ಸಂಪೂರ್ಣ ವಿಡಿಯೋದಲ್ಲಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ಟೀಕಿಸುವ ಸಂದರ್ಭದಲ್ಲಿ, ದೇವೇಗೌಡರು ಒಮ್ಮೆ ಮುಸ್ಲಿಮರಾಗಿ ಮರುಜನ್ಮ ಪಡೆಯುವ ಬಯಕೆಯನ್ನು ವ್ಯಕ್ತಪಡಿಸಿದ್ದರು ಎಂದು ಹೇಳಿದ್ದಾರೆ. ಅವರು ದೇವೇಗೌಡರ ಬಗ್ಗೆ ಹೇಳಿದ್ದನ್ನು, ಎಡಿಟ್ ಮಾಡಿ ಸಿದ್ದರಾಮಯ್ಯ ಅವರೇ ಮುಸ್ಲಿಮರಾಗಿ ಹುಟ್ಟಬೇಕು ಎನ್ನುವ ಆಸೆ ವ್ಯಕ್ತಪಡಿಸಿದ್ದಾರೆ ಎಂದು ಬಿಂಬಿಸಲಾಗಿದೆ.
ವೈರಲ್ ಆಗಿರುವ ವೀಡಿಯೊದಲ್ಲಿ ಸಿದ್ದರಾಮಯ್ಯನವರು "ನಾನು ಪುನರ್ಜನ್ಮ ಪಡೆದರೆ, ನಾನು ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ." ಎಂದು ಎರಡು ಬಾರಿ ಹೇಳುವುದನ್ನು ಕೇಳಬಹುದು.
ಸಿದ್ದರಾಮಯ್ಯ ಅವರ ಭಾಷಣದ ಸಂಪೂರ್ಣ ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ನೋಡಬಹುದು. ಮಾರ್ಚ್ 10 ರಂದು ಈ ಸುದ್ದಿಯನ್ನು ಅಪ್‌ಲೋಡ್ ಮಾಡಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಭಾಷಣ ಮಾಡುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಟೀಕಿಸುವ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದರು.
ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಮಾತನಾಡುವಾಗ. ಜೆಡಿಎಸ್ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದು ಮತ್ತು ಬಿಜೆಪಿ ಬಗ್ಗೆ ಅಭಿಮಾನ ವ್ಯಕ್ತಪಡಿಸಿರುವುದು ಆಶ್ಚರ್ಯಮೂಡಿಸಿದೆ. ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುವ ಆಸೆಯಿದೆ ಎಂದು ಹೇಳಿದ್ದರು, ಬಿಜೆಪಿ ಕೋಮುವಾದಿ ಪಕ್ಷವಾಗಿದ್ದು, ಅದನ್ನು ವಿರೋಧಿಸುತ್ತೇನೆ ಎಂದು ಹೆಚ್.ಡಿ. ದೇವೇಗೌಡರು ಹೇಳಿದ್ದರು ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.
ವೈರಲ್ ಆಗಿರುವ ವಿಡಿಯೋದಲ್ಲಿ ದೇವೇಗೌಡರ ಹೆಸರನ್ನು ತೆಗೆದುಹಾಕಲಾಗಿದ್ದು, ಸಿದ್ದರಾಮಯ್ಯ ತಾನೇ ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎಂದು ಹೇಳಿರುವಂತೆ ಎಡಿಟ್ ಮಾಡಲಾಗಿದೆ.
ಕನ್ನಡದ ಸುದ್ದಿವಾಹಿನಿಗಳು, ಈಟಿವಿ ಭಾರತ್ ಮತ್ತು ದಿ ಹಿಂದೂ ವರದಿಗಳ ವರದಿಗಳು ಕೂಡ ಮುಸಲ್ಮಾನನಾಗಿ ಮರುಜನ್ಮ ಪಡೆಯುವ ದೇವೇಗೌಡರ ಆಶಯದ ಕುರಿತು ಸಿದ್ದರಾಮಯ್ಯನವರ ಹೇಳಿಕೆಯನ್ನು ಒಳಗೊಂಡಿವೆ.
ಸಿದ್ದರಾಮಯ್ಯ ತಾನು ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು ಎಂದು ಹೇಳಿರುವ ವಿಡಿಯೋ ತಿರುಚಿದ್ದಾಗಿದೆ. ಅವರು ಆ ರೀತಿ ಹೇಳಿಕೆ ನೀಡಿದ್ದಾರೆ ಎನ್ನುವುದು ಸುಳ್ಳಾಗಿದೆ.

Fact Check
ಕ್ಲೇಮು
ಮುಂದಿನ ಜನ್ಮದಲ್ಲಿ ನಾನು ಮುಸ್ಲಿಮನಾಗಿ ಹುಟ್ಟಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರೆ ಎನ್ನುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಪರಿಸಮಾಪ್ತಿ
ವೈರಲ್ ಆಗಿರುವ ವಿಡಿಯೋ ತಿರುಚಿದ್ದಾಗಿದೆ. ಅದನ್ನು ಎಡಿಟ್ ಮಾಡಿದ್ದು ಎಚ್.ಡಿ. ದೇವೇಗೌಡರ ಬಗ್ಗೆ ಹೇಳಿಕೆ ನೀಡಿದ್ದನ್ನು ಸಿದ್ದರಾಮಯ್ಯನವರೇ ಹಾಗೆ ಹೇಳಿದ್ದಾರೆ ಎನ್ನುವಂತೆ ಬಿಂಬಿಸಲಾಗಿದೆ.
Rating
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications