ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Fact Check: ಜೆವಾರ್ ವಿಮಾನ ನಿಲ್ದಾಣದ ವೈರಲ್ ಫೋಟೋ ನಕಲಿ: ಈ ಚಿತ್ರ ಎಲ್ಲಿಯದ್ದು?

|
Google Oneindia Kannada News

ಲಕ್ನೋ ನವೆಂಬರ್ 25: ಉತ್ತರ ಪ್ರದೇಶದ ಜೆವಾರ್‌ನಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು. ಉತ್ತರ ಪ್ರದೇಶದ ಸಚಿವ ಸಿದ್ಧಾರ್ಥ್ ಎನ್. ಸಿಂಗ್ ಸೇರಿದಂತೆ ಹಲವಾರು ಸಚಿವರು ಮತ್ತು ಬಿಜೆಪಿ ನಾಯಕರು ವಿಮಾನ ನಿಲ್ದಾಣದ ಮಾದರಿಯ ಚಿತ್ರಗಳು ಎಂದು ಹೇಳುವ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ ಮತ್ತು ಪ್ರಧಾನಿ ಮೋದಿಯವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಆದರೆ ಈ ವೈರಲ್ ಚಿತ್ರ ಜೆವಾರ್ ವಿಮಾನ ನಿಲ್ದಾಣದಲ್ಲ ಎಂದು 'ದಿ ಪ್ರಿಂಟ್' ಪರಿಶೀಲನೆಯಿಂದ ಬಹಿರಂಗಗೊಂಡಿದೆ.

ಪಶ್ಚಿಮ ಯುಪಿ ಬಿಜೆಪಿ ಅಧ್ಯಕ್ಷ ಮೋಹಿತ್ ಬೇನಿವಾ ಅವರು ಅದೇ ಚಿತ್ರವನ್ನು ಹಂಚಿಕೊಳ್ಳುವ ಮೂಲಕ ಪ್ರಧಾನಿಗೆ ಧನ್ಯವಾದ ಹೇಳುವ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. ಪಂಜಾಬ್ ಕೇಸರಿ, ದೈನಿಕ್ ಜಾಗರಣ್ ಮತ್ತು ಝೀ ನ್ಯೂಸ್ ಸೇರಿದಂತೆ ಹಲವಾರು ಸುದ್ದಿ ವೆಬ್‌ಸೈಟ್‌ಗಳು ಸಹ ಇದೇ ಚಿತ್ರವನ್ನು ಹಂಚಿಕೊಂಡಿವೆ. ಆಜ್ ತಕ್ ಚಿತ್ರಕ್ಕೆ 'ನೋಯ್ಡಾ ವಿಮಾನ ನಿಲ್ದಾಣ' ಎಂದು ಶೀರ್ಷಿಕೆ ನೀಡಿದ್ದಾರೆ.

ವ್ಯಾಪಕವಾಗಿ ಪ್ರಸಾರವಾಗುತ್ತಿರುವ ಚಿತ್ರವು ನಿಜವಾಗಿ ಜೆವಾರ್ ವಿಮಾನ ನಿಲ್ದಾಣದದ್ದಲ್ಲ. ಇದು ದಕ್ಷಿಣ ಕೊರಿಯಾದ ಇಂಚಿಯಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ ಎಂದು ರಿವರ್ಸ್ ಇಮೇಜ್ ಸರ್ಚ್ ಬಹಿರಂಗಪಡಿಸುತ್ತದೆ. ಇಂಚಿಯಾನ್ ವಿಮಾನ ನಿಲ್ದಾಣವು ದಕ್ಷಿಣ ಕೊರಿಯಾದ ಅತಿದೊಡ್ಡ ವಿಮಾನ ನಿಲ್ದಾಣವಾಗಿದೆ. ಇದು 2001 ರಲ್ಲಿ ಪೂರ್ಣಗೊಂಡು 2018 ರಲ್ಲಿ ವಿಸ್ತರಿಸಲಾಯಿತು.

ದೇಶದಲ್ಲಿ ಸಂಪರ್ಕಜಾಲವನ್ನು ವಿಸ್ತರಿಸುವ ಮತ್ತು ಭವಿಷ್ಯ ಸನ್ನದ್ಧ ವಾಯುಯಾನ ವಲಯವನ್ನು ನಿರ್ಮಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿಯವರ ದೂರದೃಷ್ಟಿಗೆ ಅನುಗುಣವಾಗಿ ಈ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲಾಗುತ್ತಿದೆ. ಇತ್ತೀಚೆಗೆ ಉದ್ಘಾಟನೆಗೊಂಡ ಕುಶಿನಗರ ವಿಮಾನ ನಿಲ್ದಾಣ ಮತ್ತು ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಅನೇಕ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಸಾಕ್ಷಿಯಾಗಿರುವ ಉತ್ತರ ಪ್ರದೇಶದ ಮೇಲೆ ಪ್ರಧಾನಿ ಅವರ ದೂರದೃಷ್ಟಿಯ ವಿಚಾರದಲ್ಲಿ ವಿಶೇಷ ಗಮನ ಹರಿಸಲಾಗಿದೆ.

ಈ ವಿಮಾನ ನಿಲ್ದಾಣವು ದೆಹಲಿ ಎನ್‌ಸಿಆರ್‌ನಲ್ಲಿ ಬರುವ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ. ಇದು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಐಜಿಐ) ದಟ್ಟಣೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ವಿಮಾನ ನಿಲ್ದಾಣದ ಜಾಗವು ವ್ಯೂಹಾತ್ಮಕವಾಗಿ ನೆಲೆಗೊಂಡಿದ್ದು ದೆಹಲಿ, ನೋಯ್ಡಾ, ಗಾಜಿಯಾಬಾದ್, ಅಲಿಗಢ, ಆಗ್ರಾ, ಫರಿದಾಬಾದ್ ನಗರಗಳು ಮತ್ತು ನೆರೆಯ ಪ್ರದೇಶಗಳ ಜನರಿಗೆ ಸೇವೆ ಒದಗಿಸಲಿದೆ.

ವಿಮಾನ ನಿಲ್ದಾಣದ ಮೊದಲ ಹಂತದ ಅಭಿವೃದ್ಧಿಗೆ 10,050 ಕೋಟಿ ರೂಪಾಯಿಗಳಿಗಿಂತಲೂ ಅಧಿಕ ಮೊತ್ತ ವ್ಯಯಿಸಲಾಗುತ್ತಿದೆ. 1300 ಹೆಕ್ಟೇರ್‌ಗೂ ಅಧಿಕ ಭೂಮಿಯಲ್ಲಿ ವಿಸ್ತರಿಸಿರುವ ಈ ವಿಮಾನ ನಿಲ್ದಾಣವು ಮೊದಲ ಹಂತದ ನಿರ್ಮಾಣ ಪೂರ್ಣಗೊಂಡ ನಂತರ ವರ್ಷಕ್ಕೆ ಸುಮಾರು 1.2 ಕೋಟಿ ಪ್ರಯಾಣಿಕರಿಗೆ ಸೇವೆ ಸಲ್ಲಿಸುವ ಸಾಮರ್ಥ್ಯವನ್ನು ಹೊಂದಿರಲಿದೆ. ಇದರ ಪೂರ್ಣ ಕಾಮಗಾರಿಯನ್ನು 2024ರ ವೇಳೆಗೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಈ ಯೋಜನೆಯನ್ನು ಅಂತರರಾಷ್ಟ್ರೀಯ ಬಿಡ್ಡರ್ ʻಜ್ಯೂರಿಚ್ ಏರ್‌ಪೋರ್ಟ್‌ ಇಂಟರ್‌ನ್ಯಾಷನಲ್‌ ಎಜಿʼ ರಿಯಾಯಿತಿದಾರ ಸಂಸ್ಥೆಯಾಗಿ ಕಾರ್ಯಗತಗೊಳಿಸಲಿದೆ.

Fact Check: Viral photo not at Jawar airport, Wheres this photo?

ಭೂ ಸ್ವಾಧೀನ ಮತ್ತು ಬಾಧಿತ ಕುಟುಂಬಗಳ ಪುನರ್ವಸತಿಗೆ ಸಂಬಂಧಿಸಿದ ಮೊದಲ ಹಂತದ ಕೆಲಸ ಪೂರ್ಣಗೊಂಡಿದೆ. ವಿಶೇಷ ಕಾರ್ಗೋ ಟರ್ಮಿನಲ್ 20 ಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯವನ್ನು ಹೊಂದಿರಲಿದೆ, ಇದನ್ನು 80 ಲಕ್ಷ ಮೆಟ್ರಿಕ್‌ ಟನ್‌ಗೆ ವಿಸ್ತರಿಸಲಾಗುವುದು. ಕೈಗಾರಿಕಾ ಉತ್ಪನ್ನಗಳ ತಡೆರಹಿತ ಸಾಗಣೆಯನ್ನು ಸುಗಮಗೊಳಿಸುವ ಮೂಲಕ, ಈ ವಿಮಾನ ನಿಲ್ದಾಣವು ಈ ಪ್ರದೇಶದತ್ತ ಬೃಹತ್ ಹೂಡಿಕೆಗಳನ್ನು ಆಕರ್ಷಿಸಲು, ತ್ವರಿತ ಕೈಗಾರಿಕಾ ಬೆಳವಣಿಗೆಯನ್ನು ಉತ್ತೇಜಿಸಲು ಹಾಗೂ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಗಳಿಗೆ ಸ್ಥಳೀಯ ಉತ್ಪನ್ನಗಳನ್ನು ತಲುಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಇದು ಹಲವಾರು ಉದ್ಯಮಗಳಿಗೆ ಹೊಸ ಅವಕಾಶಗಳನ್ನು ತೆರೆಯಲಿದೆ ಮತ್ತು ಅದ್ಭುತ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ.

Fact Check

ಕ್ಲೇಮು

ಉತ್ತರ ಪ್ರದೇಶದ ಜೆವಾರ್‌ನಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಫೋಟೋ ವೈರಲ್ ಆಗಿದೆ.

ಪರಿಸಮಾಪ್ತಿ

ಉತ್ತರ ಪ್ರದೇಶದ ಜೆವಾರ್‌ನಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದೆಂದು ಹೇಳುವ ಫೋಟೋ ನಕಲಿಯಾಗಿದೆ.ಇದು ದಕ್ಷಿಣ ಕೊರಿಯಾದ ಇಂಚಿಯಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ.

Rating

False
ಗಾಗಿ ನಿಮ್ಮ ಮನವಿಯನ್ನು ಕಳಿಸಲು [email protected] ಗೆ ಇಮೇಲ್ ಮಾಡಿ
English summary
Prime Minister Narendra Modi Thursday laid the foundation stone for Noida International Airport at Jewar in Uttar Pradesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X