ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Fact check: ಸಿಬಿಎಸ್‌ಇ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ?

|
Google Oneindia Kannada News

ನವದೆಹಲಿ, ಜನವರಿ 1: ಸಿಬಿಎಸ್‌ಇ ತರಗತಿ 10 ಮತ್ತು ತರಗತಿ 12ರ ಬೋರ್ಡ್ ಪರೀಕ್ಷೆಗಳ ದಿನಾಂಕವನ್ನು ಕೇಂದ್ರ ಶಿಕ್ಷಣ ಸಚಿವಾಲಯ ಪ್ರಕಟಿಸಿದೆ. ಈ ನಡುವೆ ಸಿಬಿಎಸ್‌ಇ 2021ರ 12ನೇ ತರಗತಿ ಪರೀಕ್ಷೆಯ ದಿನಾಂಕಗಳ ಪಟ್ಟಿಯೊಂದು ಹರಿದಾಡುತ್ತಿದೆ. ಮೇ 4 ರಿಂದ ಜೂನ್ 10ರವರೆಗೂ ಪರೀಕ್ಷೆಗಳು ನಡೆಯಲಿವೆ ಎಂದು ಸರ್ಕಾರ ಮಾಹಿತಿ ನೀಡಿದ ಬಳಿಕ ಈ ಹೊಸ ವೇಳಾಪಟ್ಟಿ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾಗಿದೆ.

12ನ ತರಗತಿ ಪರೀಕ್ಷೆಯು ಮೇ 4 ರಿಂದ 17ರವರೆಗೆ ನಡೆಯಲಿದೆ ಎಂದು ಈ ವೇಳಾಪಟ್ಟಿ ಹೇಳಿದೆ. ಮಲ್ಟಿಮೀಡಿಯಾ ಪರೀಕ್ಷೆಗಳೊಂದಿಗೆ ಪರೀಕ್ಷೆ ಆರಂಭವಾಗಲಿದ್ದು, ಭೌತಶಾಸ್ತ್ರ ಮತ್ತು ಆನ್ವಯಿಕ ಭೌತಶಾಸ್ತ್ರದೊಂದಿಗೆ ಅಂತ್ಯಗೊಳ್ಳಲಿದೆ ಎಂದು ತಿಳಿಸಿದೆ.

ಸಿಬಿಎಸ್‌ಇ ಬೋರ್ಡ್ ಪರೀಕ್ಷೆಗಳ ದಿನಾಂಕ ಪ್ರಕಟ: ಇಲ್ಲಿದೆ ವಿವರಸಿಬಿಎಸ್‌ಇ ಬೋರ್ಡ್ ಪರೀಕ್ಷೆಗಳ ದಿನಾಂಕ ಪ್ರಕಟ: ಇಲ್ಲಿದೆ ವಿವರ

ಆದರೆ ಸಿಬಿಎಸ್‌ಇ ಇದುವರೆಗೂ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಇದು ಅಧಿಕೃತ ವೇಳಾಪಟ್ಟಿಯಲ್ಲ ಎಂದು ಸರ್ಕಾರ ಸ್ಪಷ್ಟೀಕರಣ ನೀಡಿದೆ. ಈ ವೇಳಾಪಟ್ಟಿ ನಕಲಿಯಾಗಿದೆ. ಇದರಲ್ಲಿ ಮೇ 4 ರಿಂದ ಮೇ 17ರ ವರೆಗೆ ಪರೀಕ್ಷಾ ದಿನಾಂಕಗಳನ್ನು ನಮೂದಿಸಿದ್ದು, ಸತತ ದಿನಗಳಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದು ಹೇಳಲಾಗಿದೆ.

Fake News Buster: CBSE Has Not Issued Date Sheet For Class 12 Exams

ಸಿಬಿಎಸ್‌ಇ 10 ಮತ್ತು 12ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶವನ್ನು ಜುಲೈ 15ರ ಒಳಗೆ ಪ್ರಕಟಿಸಲಾಗುತ್ತದೆ. ಪ್ರಾಕ್ಟಿಕಲ್ ಪರೀಕ್ಷೆಗಳು ಮಾರ್ಚ್ 1ರಿಂದ ಆರಂಭವಾಗಲಿವೆ. ಸಿಬಿಎಸ್‌ಇ 10 ಮತ್ತು 12ನೇ ತರಗತಿಗಳ ಬೋರ್ಡ್ ಪರೀಕ್ಷೆಗಳು ಆಫ್‌ಲೈನ್‌ನಲ್ಲಿ ನಡೆಯಲಿವೆ. ಅಂದರೆ ವಿದ್ಯಾರ್ಥಿಗಳು ಖುದ್ದು ಹಾಜರಾಗಿ ಪರೀಕ್ಷೆ ಬರೆಯಬೇಕು ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದರು.

Fact Check

ಕ್ಲೇಮು

12 ತರಗತಿ ಪರೀಕ್ಷೆಗೆ ಸಿಬಿಎಸ್‌ಇ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಪರಿಸಮಾಪ್ತಿ

ಸಿಬಿಎಸ್‌ಇ ಇನ್ನೂ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಮಾಡಿಲ್ಲ

Rating

False
ಗಾಗಿ ನಿಮ್ಮ ಮನವಿಯನ್ನು ಕಳಿಸಲು [email protected] ಗೆ ಇಮೇಲ್ ಮಾಡಿ
English summary
Fact Check: A date sheet of CBSE class 12th exams is in circulation. But its a fake date sheet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X